ಬೆಳ್ಳಾರೆಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ: ಮೂರು ದಿನಗಳ ವಿವಿಧ ಕಾರ್ಯಕ್ರಮಗಳ ಆಯೋಜನೆ

ಬೆಳ್ಳಾರೆ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಬೆಳ್ಳಾರೆ ಗ್ರಾಮ ಪಂಚಾಯತ್, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಹಾಗೂ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

. . . . . . . . .

ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ 17 ನವೆಂಬರ್ 2026ರ ಮಂಗಳವಾರದಂದು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಬೆಳ್ಳಾರೆ ಪ್ರಾಥಮಿಕ ವಿಭಾಗದಲ್ಲಿ ನಡೆಯಿತು.

. . . . . . .

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷರಾದ ರೋಟರಿಯನ್ ಆರಿಫ್ ಬೆಳ್ಳಾರೆ ವಹಿಸಿದ್ದರು. ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಎಸ್‌ಡಿಎಂಸಿ ಉಪಾಧ್ಯಕ್ಷರಾದ ಶ್ರೀ ಹರ್ಷಾ ಜೋಗಿಬೆಟ್ಟು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪ್ರವೀಣ್ ಕುಮಾರ್, ಕೆಪಿಎಸ್ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಶ್ರೀ ಮೈಲಪ್ಪ ಜಿ., ಸುಳ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ದಿನೇಶ್ ಮಾಚಾರ್ ಹಾಗೂ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಕಾರ್ಯದರ್ಶಿ ರೋಟರಿಯನ್ ಪ್ರಶಾಂತ್ ತಂಟೆಪಾಡ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಶ್ರೀ ಪಿ. ಎನ್. ಭಟ್ ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ‘ಯಶಸ್ಸಿನ ಸರಳ ಸೂತ್ರಗಳು’ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿ ಶ್ರೀ ಪಿ. ಎನ್. ಭಟ್ ಅವರು ವಿಶೇಷ ಉಪನ್ಯಾಸ ನೀಡಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪ್ರವೀಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಶ್ರೀ ರಾಮಚಂದ್ರ ಭಟ್ ಮುಗಳಿ ಕಾರ್ಯಕ್ರಮ ನಿರೂಪಿಸಿದರು. ಗ್ರಂಥಪಾಲಕಿ ಶ್ರೀಮತಿ ಶಶಿಕಲಾ ವಂದಿಸಿದರು.

ಕಾರ್ಯಕ್ರಮದಲ್ಲಿ ಸುಮಾರು 150 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರೋಟರಿಯನ್ ಚಂದ್ರಶೇಖರ ರೈ ಬಜಾನಿ, ಹಿರಿಯ ಶಿಕ್ಷಕಿ ಶ್ರೀಮತಿ ಸುಭದ್ರಾ ಟೀಚರ್ ಸೇರಿದಂತೆ ಕೆಪಿಎಸ್‌ನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಎರಡನೇ ದಿನದ ಕಾರ್ಯಕ್ರಮ

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಎರಡನೇ ದಿನವಾದ ದಿನಾಂಕ 18 ನವೆಂಬರ್ 2026ರ ಬುಧವಾರದಂದು ಅಪರಾಹ್ನ 2 ಗಂಟೆಗೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ಸಂಸ್ಥೆಯಲ್ಲಿ ‘ಮಗು, ಮಹಿಳೆ ಮತ್ತು ಆರೋಗ್ಯ’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ತಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಮಕ್ಕಳ ತಜ್ಞೆ ಡಾ. ಮಧುಶ್ರೀ ಕೆ. ಅವರು ಉಪನ್ಯಾಸ ನೀಡಲಿದ್ದಾರೆ. ಜ್ಞಾನದೀಪ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀ ಉಮೇಶ್ ಮಣಿಕರ್ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಸಮಾರೋಪ ಸಮಾರಂಭ

ಮೂರು ದಿನಗಳ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭವು ದಿನಾಂಕ 19 ನವೆಂಬರ್ 2026ರ ಗುರುವಾರದಂದು ಅಪರಾಹ್ನ 2.30ಕ್ಕೆ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ, ಬೆಳ್ಳಾರೆಯಲ್ಲಿ ನಡೆಯಲಿದೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಬೆಳ್ಳಾರೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಶ್ರೀ ಎಂ. ಎಂ. ಫಯಾಜ್ ಅಹಮ್ಮದ್ ವಹಿಸಲಿದ್ದಾರೆ. ಸಮಾರೋಪ ಭಾಷಣವನ್ನು ಸುಳ್ಯ ಚುಟುಕು ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಶ್ರೀಮತಿ ಅಶ್ವಿನಿ ಕೊಡಿಬೈಲು ನೆರವೇರಿಸಲಿದ್ದಾರೆ.

ಗೌರವ ಉಪಸ್ಥಿತರಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪ್ರವೀಣ್ ಕುಮಾರ್, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ರೋಟರಿಯನ್ ಆರಿಫ್ ಬೆಳ್ಳಾರೆ, ಸುಳ್ಯ ಸಿಡಿಪಿಒ ಕಚೇರಿಯ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ ಹಾಗೂ ಧನಲಕ್ಷ್ಮೀ ಶ್ರೀಶಕ್ತಿ ಗೊಂಚಲು ಬೆಳ್ಳಾರೆ ಇದರ ಅಧ್ಯಕ್ಷರಾದ ಶ್ರೀಮತಿ ದೇವಕಿ ಭಾಗವಹಿಸಲಿದ್ದಾರೆ.

ಗ್ರಂಥಾಲಯದ ಮಹತ್ವವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸುವುದು, ಓದುವ ಹವ್ಯಾಸವನ್ನು ಬೆಳೆಸುವುದು, ಮಕ್ಕಳಲ್ಲಿ ಜ್ಞಾನಾರ್ಜನೆಯ ಆಸಕ್ತಿ ಮೂಡಿಸುವುದು ಹಾಗೂ ಮಹಿಳೆಯರು ಮತ್ತು ಮಕ್ಕಳಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಮೂರು ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading