ಗಾಂಧಿನಗರ : ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ, ಎರಡು ಕರುಗಳ ರಕ್ಷಣೆ

​ಸುಳ್ಯ: ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡಿ ವಧೆ ಮಾಡುವ ಉದ್ದೇಶದಿಂದ ಮೇಯಲು ಬಿಟ್ಟಿದ್ದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಎರಡು ಗಂಡು ಕರುಗಳನ್ನು ರಕ್ಷಿಸಿದ್ದಾರೆ.
​ಆಲೆಟ್ಟಿ ಗ್ರಾಮದ ಎನಾವರ ಮನೆ ನಿವಾಸಿ ಹಾಶಿರ್ ಎ. (೨೮) ಹಾಗೂ ಆಲೆಟ್ಟಿ ಗ್ರಾಮದ ಅರಂಬೂರು ಪಿ.ಆರ್. ಕಾಂಪ್ಲೆಕ್ಸ್ ನಿವಾಸಿ ಸಂಶುದ್ದೀನ್ ಎಸ್.ಎಂ. (೨೫) ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಭಾಗಿಯಾಗಿರುವ ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿ ರಂಶಿ ಎಂಬಾತನ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
​ಘಟನೆಯ ವಿವರ:
ನ. ೧೮ರಂದು ಬೆಳಗಿನ ಜಾವ ೪:೧೦ರ ಸುಮಾರಿಗೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದಲ್ಲಿ ಇಬ್ಬರು ವ್ಯಕ್ತಿಗಳು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಕಳ್ಳತನ ಮಾಡಿ ಕೇರಳಕ್ಕೆ ಸಾಗಿಸಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬೆಳಿಗ್ಗೆ ೪:೩೦ಕ್ಕೆ ಸ್ಥಳಕ್ಕೆ ದಾಳಿ ನಡೆಸಿದಾಗ, ಆರೋಪಿಗಳು ಎರಡು ಕರುಗಳ ಕುತ್ತಿಗೆಗೆ ಹಗ್ಗ ಬಿಗಿದು ಮೈದಾನದ ಕಂಬಕ್ಕೆ ಕಟ್ಟಿಹಾಕುತ್ತಿರುವುದು ಕಂಡುಬಂದಿದೆ.
​ಕೂಡಲೇ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೇರಳದ ರಂಶಿ ಎಂಬಾತನ ಸಹಕಾರದೊಂದಿಗೆ ಜಾನುವಾರುಗಳನ್ನು ಕಳ್ಳತನ ಮಾಡಿ ಕೇರಳಕ್ಕೆ ಸಾಗಿಸಿ, ಮಾಂಸಕ್ಕಾಗಿ ಅಕ್ರಮವಾಗಿ ವಧೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.
​ಪೊಲೀಸರು ಸ್ಥಳದಿಂದ ಎರಡು ಗಂಡು ಕರುಗಳನ್ನು ರಕ್ಷಿಸಿದ್ದು, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ ೩೦೩(೨), ೬೨ ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಕಲಂ ೭ ಮತ್ತು ೧೫ರಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading