ನ.20ರಂದು ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನೂತನ ಮಾರಾಟ ಮತ್ತು ಪ್ರದರ್ಶನ ವಾಹನ ಉದ್ಘಾಟನೆ

ಪುತ್ತೂರು: ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘ ನಿಯಮಿತ, ಪುತ್ತೂರು ಇದರ ಮಾರ್ಕೆಟಿಂಗ್ ವಿಭಾಗದ ಪ್ರಚಾರ ಕಾರ್ಯಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸಿದ್ಧಪಡಿಸಲಾದ ನೂತನ ಮಾರಾಟ ಮತ್ತು ಪ್ರದರ್ಶನ ವಾಹನದ ಉದ್ಘಾಟನಾ ಸಮಾರಂಭ ನವೆಂಬರ್ 20ರಂದು ಮಂಗಳೂರಿನಲ್ಲಿ ನಡೆಯಲಿದೆ.

. . . . . . . . .

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ನೂತನ ವಾಹನವನ್ನು ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.

. . . . . . .

ಸಂಘದ ಉತ್ಪನ್ನಗಳು, ಚಟುವಟಿಕೆಗಳು ಹಾಗೂ ವಿವಿಧ ಯೋಜನೆಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ಪರಿಚಯಿಸುವುದರ ಜೊತೆಗೆ ಜೇನು ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಗೆ ಈ ವಾಹನ ಸಹಕಾರಿಯಾಗಲಿದೆ. ಸಂಘದ ಪ್ರಚಾರ ಕಾರ್ಯಗಳಿಗೆ ಹೊಸ ವೇಗ ನೀಡುವ ನಿರೀಕ್ಷೆಯಿದೆ ಎಂದು ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading