ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ 2026ರ ಶ್ರೇಷ್ಠ ವೈದ್ಯ ಸಾಹಿತಿ ಪ್ರಶಸ್ತಿ

ಕನ್ನಡ ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ, ದಂತ ವೈದ್ಯಕೀಯ ವಿಭಾಗದಿಂದ ಡಾ. ಮುರಲೀ ಮೋಹನ್ ಚೂಂತಾರು ಅವರು 2026ರ ಶ್ರೇಷ್ಠ ವೈದ್ಯ ಸಾಹಿತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

. . . . . . . . .

ನ. 20 ಮತ್ತು 21ರಂದು ಬೆಂಗಳೂರಿನ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ ಪ್ರಥಮ ಕನ್ನಡ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನ–2026ರ ಅಂಗವಾಗಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

. . . . . . .

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಈ ಸಮ್ಮೇಳನ ಆಯೋಜಿಸಲಾಗಿದೆ. ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕನ್ನಡ ಭಾಷೆಯ ಬಳಕೆ ಹಾಗೂ ವೈದ್ಯಕೀಯ ಸಾಹಿತ್ಯದ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ನಡೆಯುತ್ತಿರುವ ಈ ಪ್ರಥಮ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಭಾಗಗಳ ವೈದ್ಯ ಸಾಹಿತಿಗಳು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ನವೆಂಬರ್ 21ರಂದು ನಡೆಯಲಿರುವ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕನ್ನಡ ವೈದ್ಯಕೀಯ ಸಾಹಿತ್ಯ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading