ಶಿವಪ್ರಕಾಶ್ ಕಡಪಳ ಅವರಿಗೆ ‘ತೌಳವ ಸಹಕಾರಿ ಸಿರಿ’ ಪ್ರಶಸ್ತಿ

ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ‘ತೌಳವ ಸಹಕಾರಿ ಸಿರಿ’ ಪ್ರಶಸ್ತಿಗೆ ಗುತ್ತಿಗಾರು ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಉಪಾಧ್ಯಕ್ಷ ಶಿವಪ್ರಕಾಶ್ ಕಡಪಳ ಅಡ್ಡನಪಾರೆ ಅವರು ಭಾಜನರಾಗಿದ್ದಾರೆ.

. . . . . . . . .

ನ.17 ರಂದು ಮಂಗಳೂರಿನ ಉರ್ವ ಸ್ಟೋರ್‌ನಲ್ಲಿರುವ ತುಳು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

. . . . . . .

ಗುತ್ತಿಗಾರು ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಶಿವಪ್ರಕಾದಸ್ ಅವರು ವಿದ್ಯಾರ್ಥಿ ಜೀವನದಿಂದಲೇ ಕ್ರೀಡೆ, ಯುವಜನ ಸಂಘಟನೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ. ರಾಜ್ಯ ಯುವ ಒಕ್ಕೂಟದ ಸದಸ್ಯರಾಗಿ, ದಕ್ಷಿಣ ಕನ್ನಡ ಜಿಲ್ಲಾ ಯುವ ಒಕ್ಕೂಟದ ಕಾರ್ಯದರ್ಶಿಯಾಗಿ, ಯುವಜನ ಸಂಯುಕ್ತ ಮಂಡಳಿ, ಸುಳ್ಯದ ಪೂರ್ವಾಧ್ಯಕ್ಷರಾಗಿ ಹಾಗೂ ಸಲಹೆಗಾರರಾಗಿ, ದೇವಪಳ್ಳ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ ಮತ್ತು ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ಪೂರ್ವಾಧ್ಯಕ್ಷರಾಗಿ ಶ್ರಮಿಸಿದ್ದಾರೆ.
ಕ್ರೀಡಾ ಕ್ಷೇತ್ರ ಮತ್ತು ಜಾನಪದ ಕ್ಷೇತ್ರದಲ್ಲಿ ರಾಜ್ಯಮಟ್ಟದ ಯುವಜನ ಮೇಳದಲ್ಲಿ ಸತತ 19 ಬಾರಿ ಹಾಗೂ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸತತ 7 ಬಾರಿ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ರಾಷ್ಟ್ರಮಟ್ಟದ ಬೀಟ್ ಕಬಡ್ಡಿ ಸ್ಪರ್ಧೆಯಲ್ಲಿ ಕರ್ನಾಟಕ ತಂಡದ ನಾಯಕನಾಗಿ ದ್ವಿತೀಯ ಸ್ಥಾನ ಗಳಿಸಿರುವುದಲ್ಲದೆ, ಸಂಜಾಬ್‌ ಪಟಿಯಾಲಾದಲ್ಲಿ ನಡೆದ ರಾಷ್ಟ್ರಮಟ್ಟದ 800 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading