ಬೆಳ್ಳಾರೆ ಅಂಗನವಾಡಿ ಕೇಂದ್ರಕ್ಕೆ ರೋಟರಿ ಕ್ಲಬ್‌ನಿಂದ ಕಲಿಕಾ ಟೇಬಲ್‌ಗಳ ಕೊಡುಗೆ

ಬೆಳ್ಳಾರೆ: ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಬೆಳ್ಳಾರೆ ಅಂಗನವಾಡಿ ಕೇಂದ್ರಕ್ಕೆ ಕಲಿಕಾ ಟೇಬಲ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.

. . . . . . . . .

ನ. 19ರಂದು ಬೆಳ್ಳಾರೆಯ ಅಂಬೇಡ್ಕರ್ ಭವನದಲ್ಲಿ ಅಂಗನವಾಡಿ ಶಿಕ್ಷಕಿ ಸುಜಾತ ಅವರ ನಿವೃತ್ತಿ ಸಮಾರಂಭದ ಸಂದರ್ಭದಲ್ಲಿ ಕಲಿಕಾ ಟೇಬಲ್‌ಗಳನ್ನು ಅಂಗನವಾಡಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು.

. . . . . . .

ಈ ಸಂದರ್ಭದಲ್ಲಿ ಕಲಿಕಾ ಟೇಬಲ್‌ಗಳ ಪ್ರಾಯೋಜಕರನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ರೋಟರಿಯನ್ ಆರಿಫ್ ಬೆಳ್ಳಾರೆ ಅವರು ಶಾಲು ಹೊದಿಸಿ ಗೌರವಿಸಿದರು. ಬಳಿಕ ಮಾತನಾಡಿದ ಅವರು, ರೋಟರಿ ಕ್ಲಬ್‌ನ ವಿವಿಧ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿ, ಮಕ್ಕಳ ಕಲಿಕೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರಾಜೀವಿ ರೈ, ಪ್ರದೀಪ್ ಕುಮಾರ್ ರೈ ಪನ್ನೆ, ರೋಟರಿಯನ್ ವಿನಯ್ ಕುಮಾರ್, ಶಶಿಧರ್ ಬಿ.ಕೆ., ಅನೀಫ್, ರೋಹಿತ್ ಅಕ್ಷ್ವ, ಮುಸ್ತಫಾ ಹಾಗೂ ಅಂಗನವಾಡಿ ಶಿಕ್ಷಕಿ ಭಾರತಿ ಉಪಸ್ಥಿತರಿದ್ದರು. ಊರಿನ ಗಣ್ಯರು, ಗ್ರಾಮಸ್ಥರು ಮತ್ತು ಅಂಗನವಾಡಿ ಪುಟಾಣಿ ಮಕ್ಕಳು ಭಾಗವಹಿಸಿದ್ದರು.

ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ನೆರವಾಗುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಕೈಗೊಂಡ ಈ ಸೇವಾ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading