ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನೂತನ ಮಾರಾಟ ಮತ್ತು ಪ್ರದರ್ಶನ ವಾಹನ ಉದ್ಘಾಟನೆ

ಪುತ್ತೂರು: ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘ ನಿಯಮಿತ, ಪುತ್ತೂರು ಇದರ ಮಾರ್ಕೆಟಿಂಗ್ ವಿಭಾಗದ ಪ್ರಚಾರ ಕಾರ್ಯಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಸಿದ್ಧಪಡಿಸಲಾದ ನೂತನ ಮಾರಾಟ ಮತ್ತು ಪ್ರದರ್ಶನ ವಾಹನವನ್ನು 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು.

. . . . . . . . .

ನೂತನ ವಾಹನವನ್ನು ಸಚಿವರು ರಿಮೋಟ್ ಮೂಲಕ ಬಲೂನ್ ಒಡೆಯುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಜೇನು ಉತ್ಪನ್ನಗಳ ಪ್ರಚಾರ, ಮಾರಾಟ ಹಾಗೂ ಗ್ರಾಹಕರಿಗೆ ಉತ್ಪನ್ನಗಳ ಪರಿಚಯ ಮಾಡಿಸುವ ಉದ್ದೇಶದಿಂದ ಈ ವಾಹನ ಸಿದ್ಧಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಪ್ರತಿನಿಧಿಗಳು, ಶಾಸಕರಾದ ಜಿ.ಟಿ. ದೇವೇಗೌಡ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಂಡಳದ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಸಂಘದ ನಿರ್ದೇಶಕರು, ವಿವಿಧ ಗಣ್ಯರು ಹಾಗೂ ಜೇನು ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading