ನ.21 ರಂದು ವಿಧಾನ ಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ಸುಳ್ಯಕ್ಕೆ ಭೇಟಿ

ಸುಳ್ಯ: ವಿಧಾನ ಪರಿಷತ್ ಸದಸ್ಯರು ಹಾಗೂ ಎಐಸಿಸಿ ಉಸ್ತುವಾರಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾದ ಪಿ.ವಿ. ಮೋಹನ್ ಅವರು ನವೆಂಬರ್ 21ರಂದು ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

. . . . . . . . .

ಶನಿವಾರ ಮಂಗಳೂರಿನಿಂದ ಪ್ರಯಾಣ ಬೆಳೆಸುವ ಅವರು ಬೆಳಗ್ಗೆ ಸುಳ್ಯ ತಾಲೂಕಿನ ಗುತಿಗಾರುಗೆ ಆಗಮಿಸಲಿದ್ದಾರೆ. ಅಲ್ಲಿ ಪಕ್ಷದ ಪದಾಧಿಕಾರಿಗಳು, ಹಿರಿಯ ಮುಖಂಡರು, ಮಾಜಿ ಜನಪ್ರತಿನಿಧಿಗಳು, ಬಿಎಲ್‌ಎ-2 ಹಾಗೂ ಸ್ಥಳೀಯ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

. . . . . . .

ಬಳಿಕ ಮಧ್ಯಾಹ್ನ 3 ಗಂಟೆಗೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿರುವ ಅವರು ಅಲ್ಲಿಯೂ ಪಕ್ಷದ ಪದಾಧಿಕಾರಿಗಳು, ಹಿರಿಯ ಮುಖಂಡರು, ಮಾಜಿ ಜನಪ್ರತಿನಿಧಿಗಳು, ಬಿಎಲ್‌ಎ-2 ಹಾಗೂ ತಳಮಟ್ಟದ ಕಾರ್ಯಕರ್ತರೊಂದಿಗೆ ಸಭೆ ಮತ್ತು ಸಮಾಲೋಚನೆ ನಡೆಸಲಿದ್ದಾರೆ.‌


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading