ಸುಬ್ರಹ್ಮಣ್ಯ : ನಾಳೆ (ನ. 22) ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಶ್ರೀ ಜ್ಞಾನದೀಪ ವಿದ್ಯಾರ್ಥಿ ಸೇವಾ ಟ್ರಸ್ಟ್(ರಿ.) ಕುಕ್ಕೆ ಸುಬ್ರಹ್ಮಣ್ಯ ಇವರ ಆಯೋಜಕತ್ವದಲ್ಲಿ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜಿನ ಸಹಭಾಗಿತ್ವದಲ್ಲಿ ನಾಳೆ (ನ. 22) ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಕುಕ್ಕೆ ಸುಬ್ರಹ್ಮಣ್ಯದ ಶ್ರೀ ವನದುರ್ಗ ಸಭಾಭವನದಲ್ಲಿ “ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ” ನಡೆಯಲಿದೆ. ಶಿಬಿರದಲ್ಲಿ ಉಚಿತ ದಂತ ತಪಾಸಣೆ, ಹಲ್ಲಿನ ಸ್ವಚ್ಛತೆ, ಹಲ್ಲಿನ ಫಿಲ್ಲಿಂಗ್, ಹಲ್ಲು ಕೀಳುವುದು, ಮಕ್ಕಳ ಹಲ್ಲಿನ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಅರಿವು ಕಾರ್ಯಕ್ರಮ, ತಂಬಾಕು, ಧೂಮಪಾನ ಹಾಗೂ ಮದ್ಯಪಾನ ಸೇವನೆಯ ದುಷ್ಪರಿಣಾಮಗಳ ಅರಿವು ಕಾರ್ಯಕ್ರಮ ಮತ್ತು ಬಾಯಿ ಹಾಗೂ ಮುಖದ ಎಲ್ಲಾ ಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವವರಿಗೆ ಮುಂದುವರಿಕ ಕಾರ್ಡ್ ಹಾಗೂ ಚಿಕಿತ್ಸಾ ವೆಚ್ಚದಲ್ಲಿ ಶೇ. 25 ರಿಯಾಯಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9844844321, 9481527850, 9902289205 ಸಂಪರ್ಕಿಸಬಹುದಾಗಿದೆ ಎಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading