ವಳಲಂಬೆಯಲ್ಲಿ ಶಂಖಪಾಲ ಸುಬ್ರಹ್ಮಣ್ಯ ಭಜನಾ ಸೇವಾ ಸಮಿತಿಯ ದಶಮಾನೋತ್ಸವ – ಸನ್ಮಾನ

ವಳಲಂಬೆ : ಶ್ರೀ ಶಂಖಪಾಲ ಸುಬ್ರಹ್ಮಣ್ಯ ಭಜನಾ ಸೇವಾ ಸಮಿತಿ ವಳಲಂಬೆ ಇದರ ದಶಮಾನೋತ್ಸವ ಕಾರ್ಯಕ್ರಮ ನ.22ರಂದು ನಡೆಯಿತು.

. . . . . . . . .

ಬೆಳಿಗ್ಗೆ 9ರಿಂದ ಸಂಜೆ 7.30ರವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಕೇಶವ ಹೊಸೊಳಿಕೆ ವಹಿಸಿದ್ದರು.

. . . . . . .

ಅತಿಥಿಗಳಾಗಿ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವೇದಮೂರ್ತಿ ಮಹಾಬಲೇಶ್ವರ ಭಟ್, ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪೂರ್ವಾಧ್ಯಕ್ಷ ವೆಂಕಟ್ ದಂಬೆಕೋಡಿ  ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಹಿರಿಯ ಭಜಕರಾದ ಆನಂದ ಆಚಾರ್ಯ ಬಾಕಿಲ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿ ತಾರಾನಾಥ (ರವಿ) ಅಭೀರ ವಳಲಂಬೆ ಹಾಗೂ ಸ್ಥಳೀಯ ಬಾಲ ಯಕ್ಷಗಾನ ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು.

ದಿನೇಶ್ ಹೊಸೊಳಿಕೆ ಸ್ವಾಗತಿಸಿ, ಲೀಲಾಧರ ಅಡ್ಡನಪಾರೆ ವಂದಿಸಿದರು.‌ನಿವೃತ್ತ ಮುಖ್ಯಶಿಕ್ಷಕ ಮಾಧವ ಮೂಕಮಲೆ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading