ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮ

ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮ ನ. 23 ಸೋಮವಾರದಂದು ಕಾಲೇಜು ಸಭಾಂಗಣದಲ್ಲಿ ನೆರವೇರಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.), ಸುಳ್ಯ ಇದರ ಅಧ್ಯಕ್ಷರು ಹಾಗೂ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ. ಚಿದಾನಂದ ವಹಿಸಿದ್ದರು. ಗಣ್ಯರು ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.

. . . . . . .

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ಶೇನವ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಭಾಷಣ ನೀಡಿದರು. ಅವರು ವಿದ್ಯಾರ್ಥಿ ಜೀವನದಲ್ಲಿ ಕಾನೂನು ಶಿಕ್ಷಣದ ಮಹತ್ವ ಹಾಗೂ ನೈತಿಕತೆಯ ಮೌಲ್ಯಗಳನ್ನು ವಿವರಿಸಿ ಶುಭ ಹಾರೈಸಿದರು.

ಅಧ್ಯಕ್ಷೀಯ ನೆಲೆಯಲ್ಲಿ ಡಾ ಕೆ. ವಿ ಚಿದಾನಂದ ಅವರು ಮಾತನಾಡಿ “ನಾಯಕತ್ವ ಎಂದರೆ ಅಧಿಕಾರವಲ್ಲ, ಅದು ಜವಾಬ್ದಾರಿ. ಪರಿಷತ್‌ನ ಪ್ರತಿಯೊಬ್ಬ ಸದಸ್ಯರು ಕಾಲೇಜಿನ ಶಿಸ್ತು, ಒಗ್ಗಟ್ಟು ಮತ್ತು ಅಭಿವೃದ್ಧಿಗೆ ಕೊಡುಗೆ ನೀಡಬೇಕು.” ಎಂದು ಕರೆ ನೀಡಿದರು.

ಈ ಸಂದರ್ಭ ವೇದಿಕೆಯಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಕೆ. ವಿ ಹೇಮಾನಾಥ್, ಕೆ.ವಿ.ಜಿ. ಕಾನೂನು ಕಾಲೇಜಿನ ಪ್ರಾಂಶುಪಾಲರು ಪ್ರೊ. ಟೀನಾ ಹೆಚ್.ಎಸ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕೃತಿಕ ಜೆ ವೈಪನ, ವಿದ್ಯಾರ್ಥಿ ಸಂಘದ ನಾಯಕ ಸುಮನ್ ಕುಮಾರ್ ಟಿ ಎಸ್, ಉಪನಾಯಕ ಮೋಹನ್ ಎ ಎಲ್, ಕಾರ್ಯದರ್ಶಿ ಭುವನ್ ಕೆ, ಉಪಕಾ ರ್ಯದರ್ಶಿ ಕೀರ್ತನ ಬೇಬಿ ಉಪಸ್ಥಿತರಿದ್ದರು.

ಬಳಿಕ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳಿಗೆ ಬ್ಯಾಡ್ಜ್‌ಗಳನ್ನು ಪ್ರದಾನ ಮಾಡುವ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರಾದ ದಿವ್ಯ, ಖುಷಿ ಹಾಗೂ ಚಂದನ ಸ್ವಾಗತ ನೃತ್ಯ ಮಾಡಿದರು, ವಿದ್ಯಾರ್ಥಿನಿಯರಾದ ಜಯಂತಿ ಡಯಾಸ್, ಚಂದನ ಹಾಗೂ ಆಜ್ಞಾ ಪ್ರಾರ್ಥಿಸಿದರು. ಪ್ರಾಂಶುಪಾಲೆ ಶ್ರೀಮತಿ ಟೀನಾ ಹೆಚ್.ಎಸ್ ಸ್ವಾಗತಿಸಿದರು, ಉಪನ್ಯಾಸಕಿ ಶ್ರೀಮತಿ ಕೃತಿಕ ಜೆ ವೈಪನ ಪ್ರತಿಜ್ಞಾ ವಿಧಿ ಬೋಧಿಸಿದರು, ಉಪನ್ಯಾಸಕಿ ಶ್ರೀಮತಿ ನಯನ ಪಿ ಯು ಅತಿಥಿಗಳನ್ನು ಪರಿಚಯಿಸಿದರು, ಉಪನ್ಯಾಸಕರಾದ ಆಕಾಶ್ ಫಿಲಿಫ್ ವಂದಿಸಿದರು. ಉಪನ್ಯಾಸಕಿಯರಾದ ಶ್ರೀಮತಿ ಉಷಾ ಸಿ ಶೆಟ್ಟಿ, ಶ್ರೀಮತಿ ರಶ್ಮಿ ಎಚ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading