ಧರ್ಮಸ್ಥಳದ ಧರ್ಮಾಧಿಕಾರಿಗಳಿಂದ ಸಾಮಾಜಿಕ ಮೌನ ಕ್ರಾಂತಿ: ಎಂ.ಬಿ. ಸದಾಶಿವ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸುಳ್ಯದ ಎಂ.ಬಿ. ಫೌಂಡೇಶನ್‌ನ ಸಾಂದೀಪ ವಿಶೇಷ ಮಕ್ಕಳ ಶಾಲೆಯಲ್ಲಿ ಸೇವಾದಿನವನ್ನು ಆಚರಿಸಲಾಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ ಮಾತನಾಡಿ, “ಪೂಜ್ಯ ಖಾವಂದರು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮೌನ ಕ್ರಾಂತಿಯನ್ನೇ ಮಾಡುತ್ತಿದ್ದಾರೆ. ಸರ್ಕಾರಿ ಸಂಸ್ಥೆಗಳು ಹಾಗೂ ಇತರ ಸಂಘ-ಸಂಸ್ಥೆಗಳು ಮಾಡದಂತಹ ಸಾಮಾಜಿಕ, ಆರ್ಥಿಕ ಸಬಲೀಕರಣ ಮತ್ತು ಶೈಕ್ಷಣಿಕ ಕ್ಷೇತ್ರಗಳ ಹಲವು ಜನಪರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಜನ್ಮದಿನದ ಶುಭಾಶಯಗಳನ್ನು ತಿಳಿಸಿದರು.

. . . . . . .

ಕಾರ್ಯಕ್ರಮವನ್ನು ಸುಳ್ಯ ತಾಲೂಕು ಜನಜಾಗೃತಿ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ ಉದ್ಘಾಟಿಸಿದರು. ಯೋಜನಾಧಿಕಾರಿ ಮಾಧವ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜನ್ಮದಿನದ ಪ್ರಯುಕ್ತ ಶಾಲೆಯ 46 ವಿಶೇಷಚೇತನ ಮಕ್ಕಳಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಸುಳ್ಯ ತಾಲೂಕು ಜನಜಾಗೃತಿ ಸದಸ್ಯ ಸುಬ್ಬ ಪಾಟಾಳಿ ಹಾಗೂ ನವಜೀವನ ಸಮಿತಿ ಸದಸ್ಯ ಸುಬ್ಬಯ್ಯ ನಾಯ್ಕ ಸಿಹಿತಿಂಡಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಜನಜಾಗೃತಿ ಸದಸ್ಯರಾದ ಬೂಡು ರಾಧಾಕೃಷ್ಣ ರೈ, ಪದ್ಮನಾಭ ಜೈನ್, ಒಕ್ಕೂಟ ವಲಯಾಧ್ಯಕ್ಷ ಮನೋಹರ್, ಜನಜಾಗೃತಿ ವಲಯಾಧ್ಯಕ್ಷ ವಿಜಯಕುಮಾರ್ ಉಬರಡ್ಕ, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು. ಸಾಂದೀಪ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಿ ಸದಾಶಿವ, ಶಿಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಸುಳ್ಯ ವಲಯ ಮೇಲ್ವಿಚಾರಕ ದಿನೇಶ್ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading