ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ – 110 ಬಾರಿ ರಕ್ತದಾನ ಮಾಡಿದ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ

ಪುತ್ತೂರು: ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ-2026ರ ಅಂಗವಾಗಿ ನವೆಂಬರ್ 25ರಂದು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

. . . . . . . . .

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರೋಟರಿ ಕ್ಯಾಂಪ್ರೋ ಬ್ಲಡ್ ಸೆಂಟರ್ ಪುತ್ತೂರು, ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು, ರೋಟರಿ ಕ್ಲಬ್ ಪುತ್ತೂರು, ಯೂತ್ ರೆಡ್ ಕ್ರಾಸ್ ಹಾಗೂ ನ್ಯಾಷನಲ್ ಸರ್ವಿಸ್ ಸ್ಕೀಮ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

. . . . . . .

ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತ ರಕ್ತದಾನಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಅತೀ ಹೆಚ್ಚು ರಕ್ತದಾನ ಮಾಡಿದವರ ಸೇವೆಯನ್ನು ಗುರುತಿಸಲಾಯಿತು. 110 ಬಾರಿ ರಕ್ತದಾನ ಮಾಡಿದ ದೇವಚಳ್ಳ ಗ್ರಾ.ಪಂ.ಮಾಜಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಅವರನ್ನು ಸನ್ಮಾನಿಸಲಾಯಿತು.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿ ಮಂಡಳಿ ಸದಸ್ಯ ಹಾಗೂ ಖಜಾಂಚಿ ಸುರೇಶ್ ರೈ ಪಡ್ಡಂಬೈಲ್ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ರೋಟರಿ ಕ್ಯಾಂಪ್ಕೋ ಬ್ಲಡ್ ವೈದ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಭಾಗವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರಿನ ಅಧ್ಯಕ್ಷ ಸಂತೋಷ್ ಶೆಟ್ಟಿ, ಕಾರ್ಯದರ್ಶಿ ಆಸ್ಕರ್ ಆನಂದ್, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್‌ನ ವೈದ್ಯಾಧಿಕಾರಿ ಡಾ. ಸೀತಾರಾಮ ಭಟ್, ರೋಟರಿ ಕ್ಲಬ್ ಅಧ್ಯಕ್ಷ ರೊಟೇರಿಯನ್ ಪ್ರೊ. ದತ್ತಾತ್ರೇಯ ರಾವ್ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಅಕ್ಷತಾ ಎ.ಪಿ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಮಹತ್ಕಾರ್ಯದಲ್ಲಿ ಕೈಜೋಡಿಸಿದರು. ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಹಾಗೂ ಯುವಜನತೆಯಲ್ಲಿ ರಕ್ತದಾನದ ಮನೋಭಾವ ಬೆಳೆಸುವುದು ಶಿಬಿರದ ಉದ್ದೇಶವಾಗಿತ್ತು.
ಕಾಲೇಜಿನ ಆಡಳಿತ ಮಂಡಳಿ, ಸಂಯೋಜಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಆಯೋಜನೆಯಲ್ಲಿ ಸಹಕರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading