ಡಿ.12 : ಕಲ್ಚರ್ಪೆ ವನದುರ್ಗಾ ರಕೇಶ್ವರಿ ಸಾನಿಧ್ಯದಲ್ಲಿ 9ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ

ಸುಳ್ಯ: ಆಲೆಟ್ಟಿ ಗ್ರಾಮದ ಕಲ್ಚರ್ಪೆ ಪೆರಾಜೆ, ಸಿರಿಕುರಲ್ ನಗರದಲ್ಲಿರುವ ಶ್ರೀ ವನದುರ್ಗಾ ರಕೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ 9ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಡಿ. 12ರಂದು ಶನಿವಾರ ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

. . . . . . . . .

ಶ್ರೀ ಬಿ.ಎಸ್.ಎನ್. ಕಡಮಣ್ಣಾಯ ತಂತ್ರಿಯವರ ಆಶೀರ್ವಾದದೊಂದಿಗೆ ಅಭಿರಾಮ್ ಭಟ್ ಅರಂಬೂರು ಅವರ ನೇತೃತ್ವದಲ್ಲಿ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಜರಗಲಿವೆ.

. . . . . . .

ಅಂದು ಬೆಳಿಗ್ಗೆ 7.30ರಿಂದ ಸ್ಥಳಶುದ್ಧಿ, ಗಣಹೋಮ ಹಾಗೂ ತಂಬಿಲ ಸೇವೆ ನಡೆಯಲಿದೆ. ಮಧ್ಯಾಹ್ನ 12.30ರಿಂದ ಮಹಾಪೂಜೆ, 1 ಗಂಟೆಯಿಂದ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ 6 ಗಂಟೆಯಿಂದ ಗುಳಿಗ ದೈವದ ಕೋಲ ಹಾಗೂ ಪ್ರಸಾದ ವಿತರಣೆ ನಡೆಯಲಿದ್ದು, ರಾತ್ರಿ 10 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ದೇವರ ಗಂಧಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading