ಪೆರಾಜೆ ರಸ್ತೆ ಅವ್ಯವಸ್ಥೆ ಖಂಡಿಸಿ ಡಿ.1ರಂದು ಮೌನ ಪ್ರತಿಭಟನೆ: ಅಶೋಕ್ ಪೀಚೆ

ಪೆರಾಜೆ ಗ್ರಾಮದ ರಸ್ತೆಗಳ ದುಸ್ಥಿತಿ ಕಳೆದ ಐದು ವರ್ಷಗಳಿಂದ ಮುಂದುವರಿದಿದ್ದರೂ, ಸಮಸ್ಯೆಯನ್ನು ಆಡಳಿತದ ಗಮನಕ್ಕೆ ತರುವಲ್ಲಿ ಆಡಳಿತ ಪಕ್ಷ ವಿಫಲವಾಗಿದೆ ಎಂದು ಪೆರಾಜೆ ಹಿತರಕ್ಷಣಾ ವೇದಿಕೆಯ ಸಂಚಾಲಕ ಅಶೋಕ್ ಪೀಚೆ ಆರೋಪಿಸಿದರು.

. . . . . . . . .

ಸುಳ್ಯದ ಪತ್ರಿಕಾಭವನದಲ್ಲಿ ಸೆ.28ರಂದು ಪೆರಾಜೆ ಹಿತರಕ್ಷಣಾ ವೇದಿಕೆ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದ ಸುಮಾರು ಮೂರು ಕಿ.ಮೀ. ರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸಂಚಾರ ಮಾತ್ರವಲ್ಲದೆ ಜನರು ನಡೆದುಕೊಂಡು ಹೋಗಲೂ ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಚರಂಡಿ ವ್ಯವಸ್ಥೆ ಇಲ್ಲದಿರುವುದು ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಗಿಡಗಂಟಿಗಳು ಬೆಳೆದಿರುವುದು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.

. . . . . . .

ರಸ್ತೆಯು ಗ್ರಾಮದ ಜೀವನಾಡಿಯಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಪೆರಾಜೆ ರಸ್ತೆಯನ್ನು ಶೀಘ್ರ ನವೀಕರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಸಮಸ್ಯೆಯ ಪರಿಹಾರಕ್ಕಾಗಿ ಡಿ.1ರಂದು ಬೆಳಗ್ಗೆ 10ಗಂಟೆಯಿಂದ ಪೆರಾಜೆಯ ಕಾಸ್ಪಾಡಿಯಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಗ್ರಾಮದ ಎಲ್ಲಾ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಗೌರವಾಧ್ಯಕ್ಷ ರಾಮಕೃಷ್ಣ ಮಾಣಿಲತ್ತಾಯ, ಉಪಾಧ್ಯಕ್ಷ ಹೂವಪ್ಪ ಏಣಿಯಾರು, ಕಾರ್ಯದರ್ಶಿ ಪ್ರಸಾದ್ ನಡುಬೈಲು, ಸದಸ್ಯರಾದ ಶ್ಯಾಮ್ ದೊಡ್ಡಡ್ಕ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಮುಖ್ಯಸ್ಥ ಶರತ್ ಬೊಳ್ಂಜ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading