ರೋಟರಿ ಕಾಲೇಜಿನಲ್ಲಿ RPL-5 ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಸುಳ್ಯ: ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸುವ ಉದ್ದೇಶದಿಂದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಆಯೋಜಿಸಲಾದ RPL-5 ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಗೆ ನ. 27ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

. . . . . . . . .

ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷೆ ರೊ. ಮೇಜರ್ ಡೋನರ್ ಲತಾ ಮಧುಸೂದನ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕ ರೊ. ಪಿಪಿ ಎಂಪಿಎಚ್‌ಎಫ್ ಪ್ರಭಾಕರ ನಾಯರ್ ಉದ್ಘಾಟಿಸಿದರು.

. . . . . . .

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಡಬ ತಾಲೂಕು ಉಪತಹಶೀಲ್ದಾರ್ ಗೋಪಾಲ ಕೆ. ಮಾತನಾಡಿ, ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ನಾಯಕತ್ವ, ಶಿಸ್ತು, ತಂಡದ ಮನೋಭಾವ ಹಾಗೂ ಪರಸ್ಪರ ಸಹಕಾರವನ್ನು ಬೆಳೆಸಲು ಸಹಕಾರಿಯಾಗಿವೆ ಎಂದರು.

ರೋಟರಿ ಚಾರಿಟೇಬಲ್ ಟ್ರಸ್ಟ್‌ನ ಖಜಾಂಚಿ ರೊ. ಮೇಜರ್ ಡೋನರ್ ಮಧುಸೂದನ ಕೆ. ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ರುಷ್ಮಿತಾ ಮತ್ತು ಬಳಗದವರು ಪ್ರಾರ್ಥಿಸಿದರು. ಫಾತಿಮತ್ ಶಮಾ ಮತ್ತು ಫಾತಿಮತ್ ಸನಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಸರಿತಾ ಕೆ. ವಂದಿಸಿದರು.

ನವೀನ್ ಬಾಂಜಿಕೋಡಿ ಹಾಗೂ ಶಶಿಕಾಂತ್ ಮಿತ್ತೂರು ವೀಕ್ಷಕ ವಿವರಣೆಗಾರರಾಗಿ, ಲವಿನ್ ಐಡಿಯಲ್ ಹಾಗೂ ಧನ್ಯರಾಜ್ ಪಿ.ಟಿ. ನಾಗಪಟ್ಟಣ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದರು. ಸುಧೀರ್ ದೇವ ಆಫ್‌ಲೈನ್ ಸ್ಕೋರರ್ ಆಗಿ ಸಹಕರಿಸಿದರು.

ಪಂದ್ಯಾವಳಿಯು ವಿದ್ಯಾರ್ಥಿಗಳಲ್ಲಿ ವಿಶೇಷ ಉತ್ಸಾಹ ಹಾಗೂ ಕ್ರೀಡಾಸಕ್ತಿಯನ್ನು ಮೂಡಿಸಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading