ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 47ನೇ ವಾರ್ಷಿಕ ಕ್ರೀಡಾಕೂಟ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 47ನೇ ವಾರ್ಷಿಕ ಕ್ರೀಡಾಕೂಟವನ್ನು ಅರಣ್ಯ ಇಲಾಖೆಯ ಸಿಬ್ಬಂದಿ, ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು ಹಾಗೂ ತರಬೇತುದಾರರಾದ ಸತ್ಯನ್ ದೊಡ್ಡಮನೆ ಅವರು ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

. . . . . . . . .

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ದೇಶ ಹಾಗೂ ಸಮಾಜದಲ್ಲಿ ಗೌರವ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

. . . . . . .

ಕ್ರೀಡಾಕೂಟದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಎ.ಸಿ. ವಸಂತ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಪ್ಯುಲರ್ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಎ. ಅಬ್ದುಲ್ಲ ಉಪಸ್ಥಿತರಿದ್ದರು.

ಕಾಲೇಜಿನ ಮುಖ್ಯೋಪಾಧ್ಯಾಯರಾದ ಸೋಮಶೇಖರ್ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ರಮೇಶ್ ವಂದಿಸಿದರು. ಕಿಶೋರ್ ಕುಮಾರ್ ಹಾಗೂ ಮೋಹನ್ ಚಂದ್ರ ಕಾರ್ಯಕ್ರಮ ನಿರ್ವಹಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕಿ ಶಾಂತಿ ಹಾಗೂ ಪ್ರೌಢಶಾಲೆಯ ದೈಹಿಕ ಶಿಕ್ಷಕ ಜಯರಾಂ ಅವರ ಮಾರ್ಗದರ್ಶನದಲ್ಲಿ ಕಾಲೇಜಿನ ಉಪನ್ಯಾಸಕರು, ಪ್ರೌಢಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದ ಸಹಕಾರದೊಂದಿಗೆ ವಿವಿಧ ಕ್ರೀಡಾ ಚಟುವಟಿಕೆಗಳು ಯಶಸ್ವಿಯಾಗಿ ನಡೆದವು.

ಕ್ರೀಡಾಕೂಟದ ಕೊನೆಯಲ್ಲಿ ಕ್ರೀಡಾ ಧ್ವಜವನ್ನು ಅವರೋಹಣಗೊಳಿಸಿ, ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading