ಸುಬ್ರಹ್ಮಣ್ಯ ಗ್ರಾಮದ ನೂಚಿಲ ನಿವಾಸಿ, ಖ್ಯಾತ ಯಕ್ಷಗಾನ ಕಲಾವಿದ ಗಂಗಾಧರ ಬಾರಿಗ ಸೆ.07 ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಇವರಿಗೆ 54 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಇವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ಯಕ್ಷಗಾನ ಕಲಾವಿದರಾಗಿ ಧರ್ಮಸ್ಥಳ ಮೇಳ ಹಾಗೂ ಬಪ್ಪನಾಡು ಮೇಳಗಳಲ್ಲಿ ಸೇವೆ ಸಲ್ಲಿಸಿರುವ ಇವರು, ಸುಬ್ರಹ್ಮಣ್ಯದಲ್ಲಿ ಶ್ರೀ ವಾಸುಕಿ ಯಕ್ಷಗಾನ ಕಲಾಕೇಂದ್ರ (ರಿ) ಸಂಸ್ಥೆಯ ಮೂಲಕ ಯಕ್ಷಗಾನ ತರಬೇತಿಯನ್ನೂ ನೀಡುತ್ತಿದ್ದರು. ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
- Sunday
- November 24th, 2024