Ad Widget

ಮಡಪ್ಪಾಡಿ : ಆಯುಷ್ಮಾನ್ ಆರೋಗ್ಯ ಕಾರ್ಡ್ ಅಭಿಯಾನ

ಗ್ರಾಮ ಪಂಚಾಯತ್ ಮಡಪ್ಪಾಡಿ ಹಾಗೂ ಯುವಕ ಮಂಡಲ ಮಡಪ್ಪಾಡಿ ಇದರ ಆಶ್ರಯದಲ್ಲಿ ಸೆ. 8 ರಂದು ಆಯುಷ್ಮಾನ್ ಆರೋಗ್ಯ ಕಾರ್ಡ್ ಅಭಿಯಾನ ಇಂದು ನಡೆಯಿತು. ‌ಕಾರ್ಯಕ್ರಮದ ಉದ್ಘಾಟನೆಯನ್ನು ವೈಧ್ಯಾಧಿಕಾರಿ ಡಾ.ನಂದಕುಮಾರ್ ಉದ್ಘಾಟಿಸಿ ಮಾತನಾಡಿ ಆಯುಷ್ಮಾನ್ ಯೋಜನೆಯ ಮುಖಾಂತರ ವಿವಿಧ ಖಾಯಿಲೆಗಳಿಗೆ ಸರಕಾರ ಉಚಿತ ಚಿಕಿತ್ಸೆಯ ಸೌಲಭ್ಯ ಒದಗಿಸಿರುವ ಪ್ರಧಾನಿಗಳ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ.ಸದಸ್ಯ, ಹಾಲಿ ಎ.ಪಿ.ಎಂ.ಸಿ ಸದಸ್ಯ ವಿನಯಕುಮಾರ್ ಮುಳುಗಾಡು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಾ.ಪಂ.ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಬಾಳಿಕಳ, ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಸಚಿನ್ ಬಳ್ಳಡ್ಕ, ಭವಾನಿಶಂಕರ ಬಾಳಿಕಳ, ಕರುಣಾಕರ ಪಾರೆಪ್ಪಾಡಿ, ಫಲಾನುಭವಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾ.ಪಂ.ಸಿಬ್ಬಂದಿಗಳು ಹಾಗೂ ಯುವಕ ಮಂಡಲದ ಸದಸ್ಯರು ಸಹಕರಿಸಿದರು. ಒಟ್ಟು 339 ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading