ರಾಜ್ಯಾದ್ಯಂತ ಇನ್ನೊಂದು ವಾರ ಕಾಲ ಭಾರಿ ಮಳೆಯಾಗಲಿದೆ. ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಇತರೆ ಜಿಲ್ಲೆಯಲ್ಲಿ ಇನ್ನೊಂದು ವಾರ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಇಂದಿನಿಂದ ಸೆಪ್ಟೆಂಬರ್ 17 ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಸೆ.14 ರಿಂದ 17ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
- Friday
- November 22nd, 2024