ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ.ಉಬರಡ್ಕ ಮಿತ್ತೂರು ಇದರ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಕಾರ್ಡ್ ಅಭಿಯಾನವು ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಭವನದಲ್ಲಿ ಸೆ.16 ರಂದು ನಡೆದ ಕಾರ್ಯಕ್ರಮವನ್ನು ಉಬರಡ್ಕ ಮಿತ್ತೂರು ಪ್ರಾ.ಕೃ. ಪತ್ತಿನ ಸ.ಸಂಘದ ನಿರ್ದೇಶಕರಾದ ರತ್ನಾಕರ ಗೌಡ ಬಳ್ಳಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ದಾಮೋದರ ಮದುವೆಗದ್ದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆರೋಗ್ಯಮಿತ್ರ ಮುರಳಿ ನಳಿಯಾರು ಆಯುಷ್ಮಾನ್ ಭಾರತ್ ಕಾರ್ಡ್ ನ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಆರೋಗ್ಯ ಸಹಾಯಕಿ ಶ್ರೀಮತಿ ರೇವತಿ ರಾಮಚಂದ್ರ ಮಡಿಯಾರು, ಗ್ರಾ.ಪಂ ಮಾಜಿ ಅಧ್ಯಕ್ಷ ಹರಿಪ್ರಸಾದ್ ಪಾನತ್ತಿಲ, ಶ್ರೀಮತಿ ಶಾರದಾ ಡಿ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷ ವೆಂಕಟ್ರಾಮ್ ಯು.ಎಸ್. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಎನ್, ಗ್ರಾ.ಪಂ.ಮಾಜಿ ಸದಸ್ಯ ಶಶಿಧರ್ ನಾಯರ್ ಮೊದಲಾದವರು ಉಪಸ್ಥಿತರಿದ್ದರು. ಹರೀಶ್ ಆಚಾರ್ಯ ಪ್ರಾರ್ಥಿಸಿದರು. ರಾಜೇಶ್ ಭಟ್ ನೆಕ್ಕಿಲ ವಂದಿಸಿದರು. ಶಿಬಿರವು ಸೆ 17 ರಂದು ಕೂಡ ಮುಂದುವರಿಯಲಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.
- Saturday
- November 23rd, 2024