ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 70ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮೋದಿಗೆ ಕೇಂದ್ರ ಸಚಿವರು, ಪಕ್ಷದ ನಾಯಕರು ಹಾಗೂ ವಿರೋಧ ಪಕ್ಷದ ಮುಖಂಡರು ಸೇರಿದಂತೆ ಹಲವು ಗಣ್ಯರು ಹಾಗೂ ದೇಶದ ಮೂಲೆ-ಮೂಲೆಗಳಲ್ಲಿರುವ ಅಭಿಮಾನಿಗಳು ವಿಶ್ ಮಾಡಿದ್ದಾರೆ.
ಕೊರೊನಾ ಸೋಂಕಿನ ಅಬ್ಬರ ಇರುವುದರಿಂದ ಈ ಬಾರಿ ಮೋದಿ ಜನ್ಮದಿನದ ಅದ್ಧೂರಿ ಆಚರಣೆ ಇಲ್ಲ. ಬದಲಿಗೆ ಈ ದಿನವನ್ನು ಸೇವಾ ದಿವಸ್ ಎಂದು ಆಚರಿಸಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ಹಿನ್ನೆಲೆ ಗಿಡ ನೆಡುವ ಕಾರ್ಯಕ್ರಮ, ರಕ್ತದಾನ ಶಿಬಿರ, ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.