ಉಡುಪಿಯಲ್ಲಿ ಸೆ.15 ರಂದು ನಡೆದ ಜಿಲ್ಲಾ ರೈತ ಮೋರ್ಚಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಈ ಸಭೆಗೆ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷರು ಹಾಗೂ ಮಂಗಳೂರು ವಿಭಾಗದ ಪ್ರಭಾರಿಗಳು ಆಗಿರುವ ಎ.ವಿ ತೀರ್ಥರಾಮ ಭೇಟಿ ಮಾಡಿದರು. ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಮ್ಮಿಕೊಂಡ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ರೈತ ಸಮ್ಮಾನ್ ಸೇರಿದರಂತೆ ಹಲವಾರು ಯೋಜನೆಗಳನ್ನು ರೈತರಿಗೆ ಸಮರ್ಪಕವಾಗಿ ತಲುಪುವಂತೆ ಮಾಡಲು ಶ್ರಮಿಸಬೇಕೆಂದರು. ಮೋದಿ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಲಾಗಿರುವ ಸೇವಾ ಯೋಜನೆ ಯಶಸ್ವಿಗೊಳಿಸಲು ನಾವೆಲ್ಲಾ ಕೈ ಜೋಡಿಸಬೇಂದರು. ಡ್ರಗ್ಸ್ ವಿರುದ್ಧ ಮಾತನಾಡಿದ ಅವರು ಇದರ ವಿರುದ್ಧ ದಂಧೆಯ ಹೋರಾಟ ಮಾಡಬೇಕಾಗಿದೆ ಎಂದರು.
ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ನಾಯಕ್, ಉಡುಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್, ದ.ಕ.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ದ.ಕ.ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ರೈತ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ದರು.
- Monday
- November 25th, 2024