ಸುಳ್ಯ ನಗರ ಪಂಚಾಯತ್ ಕಚೇರಿ ಬಳಿ ಜೂನಿಯರ್ ಕಾಲೇಜ್ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ನಿಂತಿದ್ದು ಮುಂದೊಂದು ದಿನ ಜೀವಹಾನಿಗೆ ಕಾರಣವಾಗಬಹುದು. ಜನಪ್ರತಿನಿಧಿಗಳು ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ಸಾರ್ವಜನಿಕರು ದೂರಿ ಕೊಳ್ಳುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು ಈ ರಸ್ತೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ಅತಿ ಹೆಚ್ಚಾಗಿ ಕಂಡುಬರುತ್ತದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರು ಮುಂದೆ ಉಂಟಾಗುವ ಅನಾಹುತವನ್ನು ತಪ್ಪಿಸಬೇಕಾಗಿದೆ.
- Friday
- November 22nd, 2024