- Saturday
- August 29th, 2026
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.11ರಿಂದ ಫೆ.14ರ ವರೆಗೆ ಜರಗಲಿದ್ದು, ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಜ.27ರಂದು ನಡೆಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಹೆಗ್ಗಡೆ ಶ್ರೀ ಪರಮೇಶ್ವರಯ್ಯ ಕಾಂಚೋಡು ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತೀಯ ಜನತಾ ಪಾರ್ಟಿ ವತಿಯಿಂದ ಕಾಣಿಯೂರು ಪೇಟೆಯಲ್ಲಿ ವಿಜಯ ಸಂಕಲ್ಪ ಅಭಿಯಾನ ನಡೆಯಿತು. ಅಭಿಯಾನಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖ ನಾಯಕರುಗಳಾದ ಕೃಷ್ಣ ಶೆಟ್ಟಿ ಕಡಬ, ಗಣೇಶ್ ಉದ್ದನಡ್ಕ , ಹರೀಶ್ ಕಂಜಿಪಿಲಿ, ರಾಕೇಶ್ ರೈ ಕೆಡಿಂಜಿ, ಧನಂಜಯ ಕೇನಜೆ ಮತ್ತಿತರರು ಉಪಸ್ಥಿತರಿದ್ದರು.
ದೇವಚಳ್ಳ ಗ್ರಾಮದ ಅಡ್ಡನಪಾರೆ ಪರಮೇಶ್ವರ ಅವರ ಪುತ್ರಿ ನವ್ಯಲತಾ ಳ ವಿವಾಹ ನಿಶ್ಚಿತಾರ್ಥವು ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ಎಳ್ಳುಮಜಲು ದಿ. ವೆಂಕಪ್ಪರವರ ಪುತ್ರ ಜಗದೀಶರವರೊಂದಿಗೆ ಜ. 28 ದಂದು ವಧುವಿನ ಮನೆಯಲ್ಲಿ ನೆರವೇರಿತು.
ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ಮೂರು ದಿನಗಳ ಜಗದ್ವಿಖ್ಯಾತ ಹಂಪಿ ಉತ್ಸವದ ವಿರುಪಾಕ್ಷೇಶ್ಬರ ವೇದಿಕೆಯಲ್ಲಿ ಜನವರಿ 28 ರಂದು ನಡೆದ ಕವಿಗೋಷ್ಠಿಯಲ್ಲಿ ಸುಳ್ಯದ ಸಾಹಿತಿ ಡಾ.ಅನುರಾಧಾ ಕುರುಂಜಿಯವರು ಕವನ ವಾಚಿಸಿದರು.ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿಯವರು ಉದ್ಘಾಟಿಸಿದ ಕವಿ ಗೋಷ್ಠಿಯ ಅಧ್ಯಕ್ಷತೆಯನ್ನುಸಾಹಿತಿ ಡಾ. ಹೆಚ್ ಟಿ ಪೋತೆ ವಹಿಸಿದ್ದರು....
ಸಮಾಜ ಕಲ್ಯಾಣ ಇಲಾಖೆಯ ರೂ 10 ಲಕ್ಷ ಮತ್ತು ಸಚಿವ ಅಂಗಾರರ ವಿಶೇಷ ಅನುದಾನ ರೂ.3 ಲಕ್ಷ ದಲ್ಲಿ ಕುದುರೆಪಾಯ ಮಾಪಳಕಜೆ ಎಸ್ .ಟಿ ಮನೆಗಳ ಸಂಪರ್ಕ ರಸ್ತೆ ಅಭಿವ್ರದ್ದಿಗೆ ಪೆರಂಬಾರು ಬಳಿ ರಸ್ತೆ ಕಾಂಕ್ರೀಟಿಕರಣಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಸಿ.ಟಿ ಸುರೇಶ್ ಮತ್ತು ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅವರು...
ನೆಹರೂ ಮೆಮೋರಿಯಲ್ ಕಾಲೇಜು ಕುರುಂಜಿಭಾಗ್ ಸುಳ್ಯ ಇಲ್ಲಿನ ಭೌತಶಾಸ್ತ್ರ ಹಾಗೂ ಗಣಿತಶಾಸ್ತ್ರ ವಿಭಾಗದ ವತಿಯಿಂದ 28ರಂದು ಆಕಾಶ ಕಾಯದಲ್ಲಿ ಕಪ್ಪು ರಂಧ್ರದ ಕುರಿತು ಅತಿಥಿ ಉಪನ್ಯಾಸವು ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಪ್ರೊ ರುದ್ರಕುಮಾರ್.ಎಮ್.ಎಮ್ ಪ್ರಾಂಶುಪಾಲರು ಎನ್.ಎಮ್.ಸಿ ಸುಳ್ಯ ಇವರು ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಮ್.ಬಾಲಚಂದ್ರ ಗೌಡ ಇವರ ಮೊಮ್ಮಗನಾದ ವಿಹಾನ್ ದೊರೆ...
ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ಕಾಮರ್ಸ್ ಡಿಪಾರ್ಟ್‌ಮೆಂಟ್ ಮತ್ತು ಅಸೋಸಿಯೇಶನ್ ವತಿಯಿಂದ 'ಇನ್ವೆಸ್ಟರ್‍ಸ್ ಅವಾರ್ನೆಸ್'ನ ಬಗ್ಗೆ ಒಂದು ದಿನದ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ . ಜ.23ರಂದು ನಡೆಯಿತು. ಕಾರ್ಯಾಗಾರವನ್ನು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಬಾಲಚಂದ್ರ ಗೌಡರವರು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ವಾಣಿಜ್ಯ ಶಾಸ್ತ್ರ...
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಇಲ್ಲಿ ದಿನಾಂಕ 26.01.2023ನೇ ಗುರುವಾರ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಮತ್ತು ಪ್ರತಿಭಾದಿನೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. 74ನೇ ಗಣರಾಜ್ಯೋತ್ಸವದ ಧ್ವಜಾರೋಹಣಹವನ್ನು ನಮ್ಮ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಯುತ ಅಬ್ದುಲ್ ಶರೀಫ್ ನೆರವೇರಿಸಿದರು ಮಕ್ಕಳಿಂದ ಪಥ ಸಂಚಲನವು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಊರಿನ ಗಣ್ಯರಾದ ಶ್ರೀಯುತ ಲೋಕನಾಥ್ ರೈ ಪಟ್ಟೆ, ರಘುನಾಥ...
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ನೇಮ ನಡಾವಳಿ ನಡೆಯಿತು. ಇಂದು ಬೆಳಗ್ಗೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು, ಸಪರಿವಾರ ದೈವಗಳು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು, ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿರುವ ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ ಸಚಿವ ಹಾಗೂ ದ.ಕ.ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Loading posts...
All posts loaded
No more posts
