ಬೆಳ್ಳಾರೆ : ಪಳ್ಳಿಮಜಲಿನಲ್ಲಿ ಈದ್ಮೀಲಾದ್ ಅಂಗವಾಗಿ ಮೆಹ್ಫಿಲೆ ತ್ವಯಿಬಾ 2026

ಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ಈದ್ ಮೀಲಾದ್ ಅಂಗವಾಗಿ ಪಳ್ಳಿಮಜಲಿನ ಸಿರಾಜುಲ್ ಹುದಾ ಸೆಕೆಂಡರಿ ಮದರಸ ವಿದ್ಯಾರ್ಥಿಗಳ ಧಾರ್ಮಿಕ ಕಲಾ‌ ಸಾಂಸ್ಕೃತಿಕ ಕಾರ್ಯಕ್ರಮ ಮಸೀದಿ ವಠಾರದಲ್ಲಿ ಸೆ 6ರಂದು ನಡೆಯಿತು. ಈ ಮದರಸದ ಮೆಹ್ಫಿಲೆ ತ್ವಯಿಬಾ ಸ್ಪರ್ಧಾ ಕಾರ್ಯಕ್ರಮದ ಕಲಾ ತಂಡಗಳಾದ ತಸ್ವಿಯಾ ಮತ್ತು ತರ್ಖಿಯಾ ತಂಡಗಳ ನಡುವೆ ತರಾತುರಿಯ ಸ್ಪರ್ಧೆ ನಡೆಯಿತು....

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ | ₹2.64 ಕೋಟಿ ನಿವ್ವಳ ಲಾಭ – ಶೇ.16 ಡಿವಿಡೆಂಡ್ ಘೋಷಣೆ

ಸುಳ್ಯ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಸಕ್ತ ಸಹಕಾರಿ ವರ್ಷದಲ್ಲಿ ₹2.64 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ. 16ರಷ್ಟು ಡಿವಿಡೆಂಡ್ ವಿತರಿಸಲಾಗುವುದು ಎಂದು ಸೊಸೈಟಿ ಅಧ್ಯಕ್ಷ ಕೆ.ಸಿ. ಸದಾನಂದ ತಿಳಿಸಿದರು. ಕೊಡಿಯಾಲಬೈಲ್ ಗೌಡ ಸಮುದಾಯ ಭವನದಲ್ಲಿ ಸೆ. 6ರಂದು ನಡೆದ ಸೊಸೈಟಿಯ 25ನೇ ವಾರ್ಷಿಕ ಮಹಾಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು...
Ad Widget

ಪಂಜ : ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಒಳಿತಿಗಾಗಿ ಹಾಗೂ ಸಾನಿಧ್ಯ ವೃದ್ಧಿಗಾಗಿ ಇಂದಿನಿಂದ 12 ದಿನ ಶಿವ ಸ್ಮರಣೆ

ಪಂಜ: ಸೀಮೆಯ ಭಕ್ತರ ಒಳಿತಿಗಾಗಿ ಹಾಗೂ ಸಾನಿಧ್ಯ ವೃದ್ಧಿಗಾಗಿ ಶಿವ ಸ್ಮರಣೆಯ ವಿಶೇಷ ಕಾರ್ಯಕ್ರಮವನ್ನು ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರ ನೇತೃತ್ವದಲ್ಲಿ ಇಂದಿನಿಂದ ಆರಂಭಗೊಂಡಿತು. ಶಿವ ಸ್ಮರಣೆಯ ಮೂಲಕ ಸಾವಿರ ಸೀಮೆಯ ಭಕ್ತರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಸತತ 12 ದಿನಗಳ ಕಾಲ ಶಿವ ಸ್ಮರಣೆ ನಡೆಯಲಿದೆ. ಕಾರ್ಯಕ್ರಮವು ಸೆಪ್ಟೆಂಬರ್ 7ರಿಂದ...

ಇಂದಿನ(ಸೆಪ್ಟೆಂಬರ್ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಸೆಪ್ಟೆಂಬರ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಪಂಜ : ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ

ಪಂಜದ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿರುವ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯು ಸೆ. 6ರಂದು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನಡೆಯಿತು.  ಸಭೆಯ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷ ಮೋನಪ್ಪ ಗೌಡ ಬೊಳ್ಳಜೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ವಿಶ್ವನಾಥ ಕಳೆಂಜ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ,...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ; ಒಟ್ಟು 480 ಕೋಟಿ ವ್ಯವಹಾರ – 1.80 ಕೋಟಿ ನಿವ್ವಳ ಲಾಭ ; ಶೇ.14 ಡಿವಿಡೆಂಡ್ ಘೋಷಣೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.06ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘವು ಪ್ರಸಕ್ತ ವರ್ಷದಲ್ಲಿ 480 ಕೋಟಿ 86 ಲಕ್ಷದ 59 ಸಾವಿರದ 531 ರೂಪಾಯಿ ವ್ಯವಹಾರ ನಡೆಸಿದ್ದು, 1 ಕೋಟಿ 80 ಲಕ್ಷದ...

ಗುತ್ತಿಗಾರು : ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಕುರಿತು ಇಂದು (ಸೆ. 7ರಂದು) ವಿಶೇಷ ಗ್ರಾಮಸಭೆ

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ನಾಲ್ಕೂರು ಗ್ರಾಮಸ್ಥರ ಮನವಿಯಂತೆ ಗುತ್ತಿಗಾರು ಗ್ರಾಮ ಪಂಚಾಯತ್ ವಿಶೇಷ ಗ್ರಾಮಸಭೆ ಆಯೋಜಿಸಿದೆ. ವಿಶೇಷ ಗ್ರಾಮಸಭೆಯು ಸೆ. 7ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಗುತ್ತಿಗಾರಿನ ದೀನ್ ದಯಾಳ್ ರೈತ ಸಭಾ ಭವನದಲ್ಲಿ ನಡೆಯಲಿದೆ. ಕಸ್ತೂರಿ ರಂಗನ್ ವರದಿಯಲ್ಲಿ ನಾಲ್ಕೂರು ಗ್ರಾಮ ಸೇರಿರುವುದು ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಾಗಲಿದ್ದು, ಗ್ರಾಮಸ್ಥರು...

ದೀಪಾವಳಿ ವಿಶೇಷಾಂಕಕ್ಕೆ ಬರಹ, ಛಾಯಾಚಿತ್ರ ಆಹ್ವಾನ

ಸುಳ್ಯ: ದೀಪಾವಳಿ ಹಬ್ಬದ ಸಂಭ್ರಮದ ಅಂಗವಾಗಿ ‘ಅಮರ ಸುಳ್ಯ ಸುದ್ದಿ’ ವಾರಪತ್ರಿಕೆಯ 10ನೇ ವರ್ಷದ ದೀಪಾವಳಿ ವಿಶೇಷಾಂಕ-2026 ಪ್ರಕಟಿಸಲು ಸಿದ್ಧತೆ ನಡೆಸಲಾಗಿದ್ದು, ವಿಶೇಷಾಂಕದಲ್ಲಿ ಸಾರ್ವಜನಿಕರು ಹಾಗೂ ಬರಹಗಾರರು ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ. ಸುಮಾರು 100 ಪುಟಗಳ ವರ್ಣಮಯ ವಿಶೇಷಾಂಕದಲ್ಲಿ ಕಥೆ, ಕವನ, ಲೇಖನ, ಸಾಧಕರ ಪರಿಚಯ, ಮುದ್ದು ಮಕ್ಕಳ ಛಾಯಾಚಿತ್ರ ಸೇರಿದಂತೆ ವೈವಿಧ್ಯಮಯ ಬರಹಗಳು ಪ್ರಕಟಗೊಳ್ಳಲಿವೆ. ಸಾರ್ವಜನಿಕರು...

ದೇವ ಗೆಳೆಯರ ಬಳಗದ ನೂತನ ಅಧ್ಯಕ್ಷರಾಗಿ ಉಮೇಶ್ ದೇವ, ಕಾರ್ಯದರ್ಶಿಯಾಗಿ ಪ್ರಶಾಂತ ದೇವ ಆಯ್ಕೆ

ದೇವ: ದೇವ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಬಳಗದ ಅಧ್ಯಕ್ಷರಾಗಿ ಉಮೇಶ್ ದೇವ, ಕಾರ್ಯದರ್ಶಿಯಾಗಿ ಪ್ರಶಾಂತ ದೇವ, ಕೋಶಾಧಿಕಾರಿಯಾಗಿ ಶರತ್ ಕುಮಾರ್ ದೇವ ಆಯ್ಕೆಯಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ವಿಪಿನ್ ಹೊಸೋಳಿಕೆ, ಜೊತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಕಾನವು ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ಮಿಥುನ್...

ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ದರ್ಶಿಕ್‌ ಸಿ.ಎಸ್.ಗೆ ಚಿನ್ನ ಹಾಗೂ ಬೆಳ್ಳಿ ಪದಕ

ಯುನೈಟೆಡ್ ಕರಾಟೆ ಬುಡೋಕಾನ್ ವತಿಯಿಂದ ಉಪ್ಪಿನಂಗಡಿಯಲ್ಲಿ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಳ್ಳಂಗಾರಿನ ದರ್ಶಿಕ್ ಸಿ.ಎಸ್. ಅವರು ಉತ್ತಮ ಸಾಧನೆ ಮಾಡಿದ್ದಾರೆ. 10 ವರ್ಷ ಮೇಲ್ಪಟ್ಟ 25 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿದ ದರ್ಶಿಕ್ ಅವರು ಕುಮಿಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಹಾಗೂ ಕಟಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ...
Loading posts...

All posts loaded

No more posts

error: Content is protected !!