- Thursday
- September 17th, 2026
ಸುಳ್ಯ ಪ್ರಾಥಮಿಕ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆ ಬ್ಯಾಂಕಿನ ಅಧ್ಯಕ್ಷ ಜಯರಾಮ ರೈ ಅವರ ಅಧ್ಯಕ್ಷತೆಯಲ್ಲಿ ಆ. 29ರಂದು ಸಿ.ಎ. ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಬ್ಯಾಂಕಿನ 2025-26ನೇ ಸಾಲಿನ ವಾರ್ಷಿಕ ವರದಿಯನ್ನು ವ್ಯವಸ್ಥಾಪಕಿ ಉಷಾ ಸುವರ್ಣ ಅವರು ಮಂಡಿಸಿದರು. ಈ ಸಂದರ್ಭದಲ್ಲಿ ಸದಸ್ಯರಿಗೆ ಶೇ.3ರಷ್ಟು ಲಾಭಾಂಶ ಹಂಚಿಕೆಯನ್ನು ಘೋಷಿಸಲಾಯಿತು. ಸಂಘದ ಉಪಾಧ್ಯಕ್ಷ ಅವಿನಾಶ್ ಡಿ.ಕೆ. ಸ್ವಾಗತಿಸಿ,...
ಸುಳ್ಯ ಬಸ್ ಘಟಕದಲ್ಲಿ ಬಸ್‌ಗಳು ಹಾಗೂ ಸಿಬ್ಬಂದಿಗಳ ಕೊರತೆ ಇರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಸುಳ್ಯ ಬಸ್ ಘಟಕಕ್ಕೆ 10 ಹೊಸ ಬಸ್‌ಗಳನ್ನು ಮತ್ತು ಚಾಲಕ ಮತ್ತು ನಿರ್ವಾಹಕರನ್ನು ನೇಮಿಸಬೇಕೆಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಸಾರಿಗೆ ಸಚಿವ ಬೈರತಿ ಸುರೇಶ್ ಅವರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಇನ್ನು...
ದಕ್ಷಿಣ ಕನ್ನಡ ಜಿಲ್ಲಾ ಬಂದೂಕು ಪರವಾನಗಿದಾರರ ಒಕ್ಕೂಟದ ವತಿಯಿಂದ ಬಂದೂಕು ಪರವಾನಗಿ ಸಮಸ್ಯೆಗಳ ಕುರಿತು ಸೆ.05ರಂದು ಪುತ್ತೂರಿನ ಪುರಭವನದಲ್ಲಿ ನಡೆಯಲಿರುವ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಅಮರ ಸುದ್ದಿಯೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಬಂದೂಕು ಪರವಾನಗಿದಾರರ ಒಕ್ಕೂಟದ ಸಂಚಾಲಕರಾದ ಜಯಪ್ರಸಾದ್ ಜೋಶಿ ಬೆಳ್ಳಾರೆ ರವರು “ನಮ್ಮ ಜಿಲ್ಲೆಯಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಪವಲಯ ಅರಣ್ಯಾಧಿಕಾರಿ ಹಾಗೂ ಮೋಚಣಿದಾರರ ಸಂಘ ಮಂಗಳೂರು ಜಂಟಿಯಾಗಿ ದಿನಾಂಕ 01/09/2026ರಂದು ವನ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ...
ಸುಳ್ಯ : ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಜಾಸೇವೆ ಅಭಿಯಾನ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಸರ್ಕಾರದ ಸುತ್ತೋಲೆಗಳಂತೆ ಪ್ರತೀ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತೀ ತಿಂಗಳ ಎಲ್ಲಾ ಶನಿವಾರಗಳಂದು ಪ್ರಜಾಸೇವೆ ಅಭಿಯಾನ ಸಭೆಗಳನ್ನು ನಡೆಸಲು ಮಾರ್ಗಸೂಚಿ ನೀಡಲಾಗಿದೆ. ಇದರಂತೆ ರಾಜ್ಯಾದ್ಯಂತ ಪ್ರಜಾಸೇವೆ...
ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಸುಳ್ಯ ಇವರ ಸಹಯೋಗದಲ್ಲಿ 2026-27ನೇ ಸಾಲಿನ ಕ್ಷೇತ್ರ ಮಟ್ಟದ ಕರಾಟೆ ಕ್ರೀಡಾ ಕೂಟವನ್ನು ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಆ.27ರಂದು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಮಾವಿನಕಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 03 ಸೆಪ್ಟೆಂಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿರುವ ಎಡಮಂಗಲ ನಿವಾಸಿ ದೀಪಕ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ. ಎಡಮಂಗಲದ ಪುಳಿಕುಕ್ಕು ನಲ್ಲಿರುವ ಮನೆಯ ಸಮೀಪದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಅವರ ಪತ್ನಿ ತಾಯಿ ಮನೆ ಕಡಬದಲ್ಲಿ ಇದ್ದರೆನ್ನಲಾಗಿದೆ. ಮೃತರು ಪತ್ನಿ ಮಲ್ಲಿಕಾ, ಪುತ್ರಿ ಯದುವಿ ಹಾಗೂ ಸಹೋದರರನ್ನು ಅಗಲಿದ್ದಾರೆ. ಪೋಲೀಸರು...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ಮೇಷ ರಾಶಿ - ಆತ್ಮೀಯರೊಂದಿಗೆ ಹಣದ ವಿಷಯಗಳ ಬಗ್ಗೆ ಭಿನ್ನಭಿಪ್ರಾಯಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಬಹಳ ನಿಧಾನವಾಗಿ ಸಾಗುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ವ್ಯವಹಾರಗಳು ಮುಂದುವರಿಯದೆ ನಿರಾಶೆ ಉಂಟಾಗುತ್ತದೆ,ಗಮನಿಸಿ:-ಉದ್ಯೋಗಿಗಳು ಹೆಚ್ಚು ಶ್ರಮವಹಿಸಬೇಕು,ಪರಿಹಾರ:-ಗಣಪತಿ ದೇವರಿಗೆ ಗರಿಕೆ ಅರ್ಪಿಸಿ,...
ಸುಳ್ಯ: ಪುತ್ತೂರಿನ ದರ್ಬೆ ಪ್ರಕರಣದಲ್ಲಿ ಹಲ್ಲೆಗೊಳಗಾದ ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳುವ ಸಲುವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ಜಿಲ್ಲಾ ನಾಯಕರ ತಂಡವು ಸುಳ್ಯದ ಮಂಡೆಕೋಲಿನಲ್ಲಿರುವ ಸಂತ್ರಸ್ತರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬದ...
Loading posts...
All posts loaded
No more posts
