- Sunday
- November 24th, 2024
ಕೋಶಾಧಿಕಾರಿಯಾಗಿ ಶಿಕ್ಷಕ ಕುಶಾಲಪ್ಪ ತುಂಬತ್ತಾಜೆ ಆಯ್ಕೆ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ಮಂಜು – ಶಿವಪ್ರಸಾದ್ ನಡುವೆ ಸ್ಪರ್ಧೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸುಳ್ಯ ತಾಲೂಕು ಇದರ ನೂತನ ಅಧ್ಯಕ್ಷರಾಗಿ ಸುಳ್ಯ ಪಶುಸಂಗೋಪನೆ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ನಿತೀನ್ ಪ್ರಭು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಂಘದ ಕೋಶಾಧಿಕಾರಿಯಾಗಿ ಗುತ್ತಿಗಾರು ಶಾಲಾ ಸಹ ಶಿಕ್ಷಕ ಕುಶಾಲಪ್ಪ ತುಂಬತ್ತಾಜೆ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಡಿಕೇರಿಯ ಚೆಯ್ಯಂಡಾಣೆ ಗ್ರಾಮದ ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಕಾರದಲ್ಲಿ 'ಅರೆಭಾಷೆ ಗಡಿನಾಡ ಉತ್ಸವ'ವು ನ.10 ರಂದು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.ನಗರದ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗ ಬಾಧೆಯಿಂದ ತೀವ್ರವಾಗಿ ತತ್ತರಿಸಿ ಹೋಗಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಡಿಕೆ...
ಕನ್ನಡ ಭಾಷೆಗೆ ಅನೇಕ ಸವಾಲುಗಳಿವೆ. ಅದನ್ನು ನಾವೆಲ್ಲರೂ ಎದುರಿಸಿ ಕನ್ನಡ ಭಾಷೆ, ಸಾಹಿತ್ಯ ಪರಂಪರೆಯನ್ನು ಉಳಿಸಿ ಅದನ್ನು ಮುಂದಿನ ಜನಾಂಗಕ್ಕೆ ತಲಪಿಸುವುದು ನಮ್ಮೆಲ್ಲರ ಜವಾ ಬ್ದಾರಿಯಾಗಿದೆ. ಸಾಹಿತ್ಯ ಪರಿಷತ್ತಿನಂತಹ ಅನೇಕ ಸಂಸ್ಥೆಗಳು ಈ ಜವಾಬ್ದಾರಿಯನ್ನು ಹೊರಬೇಕು ಎಂದು ಖ್ಯಾತ ವಾಗ್ಮಿ ಚಿಂತಕ ದುರ್ಗಾಕುಮಾರ್ ನಾಯರ್ ಕೆರೆ ಅವರು ಕರೆ ಇತ್ತರು. ಅವರು ಸುಳ್ಯ ತಾಲೂಕು ಕನ್ನಡ...
ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು ಶಾಲೆಯಲ್ಲಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕದ ಆದೇಶದಂತೆ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನ.೭ರಂದು ಸ್ಥಳೀಯ ಸಂಸ್ಥೆ ಅಧ್ಯಕ್ಷರಾದ ಶಶಿಧರ ಎಂ. ಜೆ ಧ್ವಜ ಚೀಟಿಯನ್ನು ಬಿಡುಗಡೆ ಗೊಳಿಸಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ವಿತರಿಸಲಾಯಿತು.ಈ ಸಂಧರ್ಭದಲ್ಲಿ ಗೌರವ ಅಧ್ಯಕ್ಷರಾದ ಬಾಪೂ ಸಾಹೇಬ್, ಉಪಾಧ್ಯಕ್ಷರಾದ ರಾಜು ಪಂಡಿತ್ , ಜೀವನ್ ಸ್ಕೌಟರ್ ಪ್ರತಿನಿಧಿ ,ಉಮೇಶ್ ಸ್ಕೌಟರ್...
ಸುಳ್ಯದ ಬೀರಮಂಗಲದಲ್ಲಿ ನಾಗರೋಥ್ಥಾನ ಯೋಜನೆಯಡಿ ನಿರ್ಮಾಣವಾಗಿರುವ ಉದ್ಯಾನವನಕ್ಕೆ ಪುತ್ತೂರು ಸಹಾಯಕ ಆಯುಕ್ತರು ಇಂದು ಭೇಟಿ ನೀಡಿದರು. ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಸುಳ್ಯದ ಪ್ರವಾಸಿ ಮಂದಿರದಲ್ಲಿ ಎ. ಸಿ ಯವರನ್ನು ಭೇಟಿಯಾಗಿ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣದ ಬಗ್ಗೆ ಗಮನಕ್ಕೆ ತಂದ ಸಂದರ್ಭದಲ್ಲಿ ಉದ್ಯಾನವನಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿ...
ಸುಬ್ರಹ್ಮಣ್ಯ ರೋಟರಿ ಕ್ಲಬ್ ಆಶ್ರಯದಲ್ಲಿ ಬೆಂಗಳೂರು ಮಹಾಲಕ್ಷ್ಮಿ ಸೆಂಟ್ರಲ್ ರೋಟರಿ ಕ್ಲಬ್ ನವರು ಕೌಶಲ್ಯ ಅಭಿವೃದ್ಧಿ ಯೋಜನೆ ಅನ್ವಯ ಸುಬ್ರಹ್ಮಣ್ಯದ ದೇವರಹಳ್ಳಿ ಕೇಂದ್ರದಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಮಿಷಿನ್ ವಿತರಣೆ ಹಾಗೂ ತರಬೇತಿ ಕಾರ್ಯಕ್ರಮವನ್ನು ನಡೆಸಲಿರುವರು.ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ್ ನಾಯರ್ ವಹಿಸಲಿರುವರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ...
ಕಲ್ಲೆಂಬಿಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮನೆಯವರು ಸುಳ್ಯಕ್ಕೆ ಬಂದಿದ್ದಾಗ ಪುನಃ ಮನೆಗೆ ಹಿಂತಿರುಗಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತಾಗಿದೆ. ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಮಹಜರು ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಮೃತ ಪಟ್ಟ ಯುವಕ ಸುಳ್ಯದ ಕೆ.ವಿ.ಜಿ.ಕಾನೂನು...
Loading posts...
All posts loaded
No more posts