ಬಾರಿ ಮಳೆ ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು(03-07-2025) ರಜೆ ಘೋಷಣೆ

ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 03.07.2025 ರಂದು ರಜೆ ಘೋಷಿಸಿ ಸುಳ್ಯ ತಹಶೀಲ್ದಾರರು ಆದೇಶಿಸಿರುತ್ತಾರೆ.

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಕಾಲೇಜು ಮಂತ್ರಿಮಂಡಲದ ಉದ್ಘಾಟನಾ ಕಾರ್ಯಕ್ರಮವು ನೇರವೇರಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ನೆಹರೂ ಮೆಮೊರಿಯಲ್ ಕಾಲೇಜು ಸುಳ್ಯ ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಮತಾ.ಕೆ ಇವರು ದೀಪ ಬೆಳಗಿಸುವ ಮೂಲಕ ಮಂತ್ರಿ ಮಂಡಲದ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ "ಚುನಾವಣೆಗಳಿಂದ ದೇಶದ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಚುನಾವಣೆಗಳ...
Ad Widget

ಕುಕ್ಕೆ ಸುಬ್ರಹ್ಮಣ್ಯದ ಪ್ರಾಥಮಿಕ ವೈದ್ಯಕೀಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಸಚಿವರಿಗೆ ಮನವಿ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ದೇಶಾದ್ಯಂತ ಇಲ್ಲಿಗೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ದರುಶನ ಪಡೆದು ಪುನೀತರಾಗುತ್ತಾರೆ. ಈ ಕ್ಷೇತ್ರವು ಆದಾಯದಲ್ಲಿ ಕರ್ನಾಟಕ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದ್ದು, ಆದರೂ ಕೂಡ ಇಲ್ಲಿ ಅಗತ್ಯವಾಗಿ ಬೇಕಾಗಿರುವಂತಹ ಅತೀ ಅವಶ್ಯಕವಾದ ವೈದ್ಯಕೀಯ...

ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಅವರಿಗೆ ವರ್ಗಾವಣೆ

ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಅವರು ವರ್ಗಾವಣೆಗೊಂಡಿದ್ದು, ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆಯ ಕಚೇರಿ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿದ್ದಾರೆ. ಇವರು ಕಳೆದ ಮೂರು ವರ್ಷಗಳಿಂದ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಪುತ್ತೂರಿನ ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಸಮಾರಂಭದಲ್ಲಿ ಎಂ ಸಿ ಆರ್ ಟಿ ನ ಚೇರ್ಮೆನ್ ಆಶ್ರಯ ಭಂಡಾರಿ, ಕೋಶಾಧಿಕಾರಿಗಳಾದ ಮತ್ತು ಎಂ ಸಿ ಆರ್ ಟಿ ನ ಭಾವಿ ಚೇರ್ಮೆನ್ ದಶರಥ ಶೆಟ್ಟಿ ಮತ್ತು ಪುತ್ತೂರಿನ ಸ್ವರ್ಣೋದ್ಯಮ ಸುಧನ್ವ...

ಸುಳ್ಯ-ಆಲೆಟ್ಟಿ-ಬಂದಡ್ಕ ಕಾಸರಗೋಡು, ಕಾಞಂಗಾಡ್  ಬಸ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಸಚಿವರಿಗೆ ಮನವಿ – ಭರವಸೆ

ಕೇರಳ ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಗಡಿಪ್ರದೇಶ ಬಂದಡ್ಕದ ಮೂಲಕ ಹಾದು ಹೋಗುವ ಅಂತರ್ ರಾಜ್ಯ ಬಸ್ ವ್ಯವಸ್ಥೆಯನ್ನು ಒದಗಿಸುವ ಕುರಿತು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು.                 ಗಡಿನಾಡು ಕನ್ನಡಿಗರ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಬೊಡ್ಡನಕೊಚ್ಚಿ, ಗ್ರಾಮ ಗೌಡ ಸಮಿತಿಯ ಅಧ್ಯಕ್ಷರಾದ ವೆಂಕಟ್ರಮಣ ಕೊಯಿಂಗಾಜೆ, ಮಾಜಿ ಅದ್ಯಕ್ಷರಾದ ಅಚ್ಚುತ...

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಹಾಗೂ ಇಂಟ್ರಮ್ಯೂರಲ್ 2025-26ಕ್ಕೆ ಅದ್ಧೂರಿಯ ಚಾಲನೆ

ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾದರಿ ಚುನಾವಣೆ ನಡೆಸಿ ವಿದ್ಯಾರ್ಥಿ ಸಂಸತ್ತಿನ ರಚನೆಯನ್ನು ಮಾಡಲಾಯಿತು. ವಿದ್ಯಾರ್ಥಿ ಸಂಸತ್ತಿನ ಸಲಹೆಗಾರರಾದ ಶಿಕ್ಷಕಿ ಶ್ರೀಮತಿ ರೂಪಾರವರು ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆಯ ಮಾಹಿತಿಯನ್ನು ನೀಡಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಜು.01 ರಂದು ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಹಾಗೂ ಇಂಟ್ರಮ್ಯೂರಲ್ ಕಾರ್ಯಕ್ರಮದ ಉದ್ಘಾಟನಾ...

ಸುಳ್ಯ ತಾಲೂಕು ವಿಶ್ವ ಹಿಂದೂ ಪರಿಷತ್ ನೂತನ ಅಧ್ಯಕ್ಷರಾಗಿ  ಶ್ರೀಕಾಂತ್ ಗೋಳ್ವಾಲ್ಕರ್  ಆಯ್ಕೆ

ಸುಳ್ಯ ತಾಲೂಕು ವಿಶ್ವ ಹಿಂದೂ ಪರಿಷತ್ ನೂತನ ಅಧ್ಯಕ್ಷರಾಗಿ  ಶ್ರೀಕಾಂತ್ ಗೋಳ್ವಾಲ್ಕರ್  ಆಯ್ಕೆಯಾಗಿದ್ದಾರೆ. ಇವರು ಕಲ್ಲಪ್ಪಳ್ಳಿಯ ನಿವಾಸಿಯಾಗಿದ್ದು ಬಿಜೆಪಿ ಹಾಗೂ  ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಶಿರೂರು ಮಠದ ಸ್ವಾಮೀಜಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ

ಸುಬ್ರಹ್ಮಣ್ಯ ಜುಲೈ 1 : ಉಡುಪಿ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ ಅವರು ಪರ್ಯಾಯ ಸಂಚಾರ ಅನ್ವಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಸಂಜೆ ಆಗಮಿಸಿದರು. ಕುಕ್ಕೆ ಶ್ರೀ  ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ರವರು ಹಾಗೂ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಏಸುರಾಜ್ ರವರು ಸ್ವಾಮೀಜಿ ಅವರನ್ನು ಕಾಶಿಕಟ್ಟೆ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಬೆಳ್ಯಪ್ಪ ಗೌಡ ಮಣಿಯಾನಮನೆ ಅಧಿಕಾರ ಸ್ವೀಕಾರ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿದ್ದ ಅನಂತರಾಮ ಮಣಿಯಾನಮನೆ ರವರು ಜೂ.30 ರಂದು ನಿವೃತ್ತಿ ಹೊಂದಿದ್ದು, ಸಂಘದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಬೆಳ್ಯಪ್ಪ ಗೌಡ ಮಣಿಯಾನಮನೆ ರವರು ಅಧಿಕಾರ ಸ್ವೀಕರಿಸಿದರು.ಜು.01 ರಂದು ಅನಂತರಾಮ ಮಣಿಯಾನಮನೆ ರವರು ಬೆಳ್ಯಪ್ಪ ಗೌಡ ಮಣಿಯಾನಮನೆ ರವರಿಗೆ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್...
Loading posts...

All posts loaded

No more posts

error: Content is protected !!