ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:28-08-2026 ಶುಕ್ರವಾರ*01,🐏ಮೇಷರಾಶಿ🐏*📃,ಇಂದು ನಿಮ್ಮ ಮನಸ್ಸು ಒತ್ತಡದಿಂದ ತೊಂದರೆಗೊಳಗಾಗುತ್ತದೆ. ಯಾವುದೇ ಆಸ್ತಿ ಸಂಬಂಧಿತ ವಿಷಯವು ನಿಮಗೆ ತೊಂದರೆಯನ್ನು ನೀಡಬಹುದು. ಮಂಗಳನ ಪ್ರಭಾವ ನಿಮ್ಮ ರಾಶಿಯ ಮೇಲಿದ್ದು, ಕೌಂಟುಬಿಕ ವ್ಯವಹಾರಗಳು ಮಹತ್ವದ ತಿರುವು ಪಡೆದುಕೊಳ್ಳಲಿದೆ. ಕಠಿಣ ಪರಿಶ್ರಮದ ಮೂಲಕ ವೃತ್ತಿಪರ ವಿಚಾರಗಳಲ್ಲಿ ಅಭಿವೃದ್ಧಿ ಹೊಂದುವ ಸಾಧ್ಯತೆಗಳಿವೆ,ಗಮನಿಸಿ:-ಸಾಲದ ವಿಚಾರದಲ್ಲಿ ತುಂಬಾ...

ಅಕ್ರಮ ಮರದ ದಿಮ್ಮಿಗಳ ಸಾಗಾಟ : ಲಾರಿ ಸಹಿತ 14 ದಿಮ್ಮಿ ವಶ

ಸುಳ್ಯ : ಸುಳ್ಯ ವಲಯದ ಆರಂತೋಡು ಶಾಖಾ ವ್ಯಾಪ್ತಿಯ ಅರಂತೋಡು ಗ್ರಾಮದ ಮಲ್ಲಡ್ಕ ಎಂಬಲ್ಲಿ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ಒಂದು ಕಿರಾಲ್‌ಬೋಗಿ ಜಾತಿಯ ಮರವನ್ನು ಕಡಿದು, ದಿಮ್ಮಿಗಳನ್ನು ಸಾಗಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ. ದಿನಾಂಕ 26-08-2026ರ ರಾತ್ರಿ ಸುಳ್ಯ ವಲಯದ ರಾತ್ರಿ ಗಸ್ತು ಸಿಬ್ಬಂದಿಗಳು ನೆಲ್ಲೂರು ಕೆಮ್ರಾಜೆ ಗ್ರಾಮದ ದೊಡ್ಡತೋಟದಿಂದ...
Ad Widget

ಕುಕ್ಕೆ ಸುಬ್ರಹ್ಮಣ್ಯದಲ್ಲಿ 24*7 ತುರ್ತು ಚಿಕಿತ್ಸಾ ಘಟಕ ಸ್ಥಾಪನೆಗೆ ಒತ್ತಾಯ ; ಆಸ್ಪತ್ರೆ ಹೋರಾಟ ಸಮಿತಿಯಿಂದ ಸೆ.02ರಂದು “ಪತ್ರ ಅಭಿಯಾನ”

"ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಅಲ್ಲದೆ, ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ 3-4 ಗ್ರಾಮಗಳ ಜನರಿಗೆ ತುರ್ತು ವೈದ್ಯಕೀಯ ಸೇವೆಯ ಅಗತ್ಯವಿರುವ ಸಂದರ್ಭಗಳಲ್ಲಿ, ಆಕಸ್ಮಿಕ ಅಪಘಾತಗಳು ಮತ್ತು ಇತರ ಅನಿರೀಕ್ಷಿತ ಘಟನೆಗಳು ಸಂಭವಿಸಿದಾಗ ಸಕಾಲಕ್ಕೆ ಸೂಕ್ತ ಚಿಕಿತ್ಸೆ ದೊರೆಯದೆ ಈಗಾಗಲೇ ಹಲವು ಅಮೂಲ್ಯ ಜೀವಗಳು ಬಲಿಯಾಗಿವೆ. ಆದ್ದರಿಂದ, ಕುಕ್ಕೆ...

ಸಹಕಾರ ಮಹಾಮಂಡಲದ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯಲ್ಲಿ ಶಶಿಕುಮಾರ್ ಬಾಲ್ಯೊಟ್ಟು ಭರ್ಜರಿ ಗೆಲುವು

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಆಡಳಿತ ಮಂಡಳಿಗೆ ಆ. 25 ರಂದು ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಲ್ಲ 18 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಬೆಂಬಲದಿಂದ ಮೈಸೂರು...

ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿ ವ್ಯಕ್ತಿ ಪರಾರಿ – ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಸುಳ್ಯ ಅಂಬಟೆಡ್ಕದಲ್ಲಿರುವ ಮರಾಟಿ ಸಮುದಾಯದ ಎದುರಿರುವ ವೆಹಿಕಲ್ ಕೆಫೆಯಲ್ಲಿ ರಿಪೇರಿಗೆಂದು ಇಟ್ಟಿದ್ದ ಬೈಕ್ ಗೆ ಆ.26 ರಂದು ರಾತ್ರಿ ವೇಳೆ ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. https://youtu.be/uFyC2zcqRyg?si=kyHqnXQWAQlO0uRA ಅಜ್ಜಾವರ ಗ್ರಾಮದ ಮುಳ್ಯದ ಜಯಪ್ರಕಾಶ್ ಎಂಬವರು ಬೈಕ್ ನ ಲೈಟ್ ಸರಿಪಡಿಸಲು ಇರಿಸಿದ್ದರು. ರಾತ್ರಿ 10.30...

ಅ.3, 4ರಂದು ಸುಳ್ಯದಲ್ಲಿ ರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಪಂದ್ಯಾಟ – ಧ್ವನಿ ವರ್ಧಕ ಮತ್ತು ಶಾಮಿಯಾನ ಮಾಲಕರ ಸಂಘದಿಂದ ಪತ್ರಿಕಾಗೋಷ್ಠಿ

ಸುಳ್ಯ: ತಾಲೂಕು ಧ್ವನಿ ವರ್ಧಕ ಮತ್ತು ಶಾಮಿಯಾನ ಮಾಲಕರ ಸಂಘದ 12ನೇ ವಾರ್ಷಿಕೋತ್ಸವದ ಅಂಗವಾಗಿ ರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಪಂದ್ಯಾಟ ಅ.3 ಮತ್ತು 4ರಂದು ಸುಳ್ಯದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಸುಳ್ಯ ಕಬಡ್ಡಿ ಉತ್ಸವದ ಪೋಸ್ಟರ್ ಬಿಡುಗಡೆಗೊಳಿಸಿ ಸಂಘದ ಅಧ್ಯಕ್ಷ ಸಂಶುದ್ಧಿನ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಆ.27ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಹರಿಹರ ಪಳ್ಳತ್ತಡ್ಕ : 17ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಸೆ.13 ರಿಂದ 15ರವರೆಗೆ ನಡೆಯಲಿರುವ “ಶ್ರೀ ಗಣೇಶೋತ್ಸವ”ದ ಆಮಂತ್ರಣ ಪತ್ರಿಕೆ ಬಿಡುಗಡೆಯು ಆ.25ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್, ಮಾಜಿ ಆಡಳಿತ ಮೊಕ್ತೇಸರರಾದ ಡಾ| ಚಂದ್ರಶೇಖರ ಕಿರಿಭಾಗ, ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ...

ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ತಿಂಗಳ ಸಾಮಾನ್ಯ ಸಭೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ತಿಂಗಳ ಸಾಮಾನ್ಯ ಸಭೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಆ.25 ಮಂಗಳವಾರದಂದು ಕುಮಾರಧಾರದ ರಿವರ್ ವ್ಯಾಲ್ಯು ಹೋಂ-ಸ್ಟೇಯಲ್ಲಿ ನಡೆದಿದ್ದು 98 ವರ್ಷ ಪ್ರಾಯದ ಹಿರಿಯರಾದ ಮೇದಪ್ಪ ಗೌಡ ಜಾಡಿಮನೆ ಇವರನ್ನು ಕ್ಲಬ್ ನ ವತಿಯಿಂದ ಸನ್ಮಾನಿಸಲಾಯಿತು. ಕ್ಲಬ್ ನ ಅಧ್ಯಕ್ಷರಾದ ಲ.ಸತೀಶ್ ಕೂಜುಗೋಡು, IPP ಲ.ವಿಮಲಾ...

ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ನಿಂದ ಓಣಂ ಆಚರಣೆ

ಸುಬ್ರಹ್ಮಣ್ಯ ಆಗಸ್ಟ್ 27 : ಸುಬ್ರಹ್ಮಣ್ಯ ಇನ್ನರ್ವೇಲ್ ಕ್ಲಬ್ ವತಿಯಿಂದ ಓಣಂ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಸುಬ್ರಹ್ಮಣ್ಯದ ಗಣೇಶ್ ಪ್ರಸಾದ್ ಅವರ ನಿವಾಸದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಪೂಕಳಂ ಅಂಗವಾಗಿ ರಂಗೋಲಿಯನ್ನು ರಚಿಸಿ ಎಲ್ಲಾ ಇನ್ನರ್ವೇಲ್ನ ಸದಸ್ಯರುಗಳು ಹೂಗಳನ್ನು ಪೋಣಿಸಿ ಪೂಕಳಂ ಸುತ್ತಲು ಕೂತು ಓಣಂ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಇನ್ನರ್ ವೀಲ್...

ಸಿಎ ಬ್ಯಾಂಕ್‌ಗೆ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

2025-26ನೇ ಸಾಲಿನ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಮಹಾಸಭೆಯಲ್ಲಿ ಸಹಕಾರ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಎ.ವಿ. ವಿಕ್ರಂ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಎಸ್.ಪಿ. ಪ್ರಶಸ್ತಿ ಸ್ವೀಕರಿಸಿದರು.
Loading posts...

All posts loaded

No more posts

error: Content is protected !!