ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆರವರ ಮೃತದೇಹವನ್ನು ಕುಮಾರಧಾರ ನದಿಯಲ್ಲಿ ಹುಡುಕಾಟ ನಡೆಸಿ ಹೊರತೆಗೆದ ಈಶ್ವರ್ ಮಲ್ಪೆಯವರಿಗೆ ಸನ್ಮಾನ

ಜು.22 ರಂದು ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕರಾದ ಹೊನ್ನಪ್ಪ ದೇವರಗದ್ದೆ ಅವರ ಮೃತದೇಹ ಇಂದು(ಜು.25) ಕುಮಾರಧಾರ ನದಿಯಲ್ಲಿ ಪತ್ತೆಯಾಗಿದ್ದು, ಸತತ ನಾಲ್ಕು ದಿನಗಳಿಂದ ಕುಮಾರಧಾರ ನದಿಯಲ್ಲಿ ಹುಡುಕಾಟ ನಡೆಸಿದ ಈಶ್ವರ್ ಮಲ್ಪೆ ಹಾಗೂ ಅವರ ತಂಡವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೇಶ್.ಎನ್.ಎಸ್ ಇವರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ಇಂದು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ...

ಹರಿಹರ ಪಳ್ಳತ್ತಡ್ಕ : ನಾಳೆ(ಜು.26) ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುವ ಸಮಾರಂಭ

ಸಂಘದ ನಿವೃತ್ತ ಸಿಬ್ಬಂದಿಗಳಿಗೆ ಸಾರ್ವಜನಿಕ ಸನ್ಮಾನ ಸಮಾರಂಭ

(ವರದಿ : ಉಲ್ಲಾಸ್ ಕಜ್ಜೋಡಿ) ಕಳೆದ 40 ವರ್ಷಗಳಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಇತ್ತೀಚೆಗೆ ನಿವೃತ್ತರಾದ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುವ ಸಮಾರಂಭ ಹಾಗೂ ಸಂಘದ 2024-25ನೇ ಸಾಲಿನ ನಿವೃತ್ತ ಸಿಬ್ಬಂದಿಗಳಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ನಾಳೆ(ಜು.26) ಪೂರ್ವಾಹ್ನ 10:30ಕ್ಕೆ ಹರಿಹರ ಪಳ್ಳತ್ತಡ್ಕದ...
Ad Widget

ದೇವರಕೊಲ್ಲಿಯಲ್ಲಿ ಲಾರಿ ಹಾಗೂ ಕಾರು ಭೀಕರ ಅಪಘಾತ ; ನಾಲ್ವರೂ ಮೃತ್ಯು

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಮೃತರು ಗೋಣಿಕೊಪ್ಪ ಮೂಲದವರು ಎಂದು ತಿಳಿದುಬಂದಿದೆ.

ದೇವರಕೊಲ್ಲಿಯಲ್ಲಿ ಲಾರಿ ಮತ್ತು ಕಾರು ಭೀಕರ ಅಪಘಾತ

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದ್ದು, ನಾಲ್ವರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಸುಬ್ರಹ್ಮಣ್ಯ : ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ

ಹುಡುಕಾಟಕ್ಕೆ ಈಶ್ವರ್ ಮಲ್ಪೆ,  ಎಸ್.ಡಿ.ಆರ್.ಎಫ್ ತಂಡ, ಸ್ಥಳೀಯರು, ರವಿಕಕ್ಕೆಪದವು ತಂಡ ಹಾಗೂ ಸುಳ್ಯದ ಅಂಬ್ಯುಲೆನ್ಸ್ ಚಾಲಕರ ಸಂಘ ಸಹಕಾರ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ ದೇವರಗದ್ದೆ ರವರು ಜು.22 ರಂದು ನಾಪತ್ತೆಯಾಗಿದ್ದರು.ಘಟನೆಯ ಬಗ್ಗೆ ಅವರ ಪತ್ನಿ ಶ್ರೀಮತಿ ಪ್ರೇಮ ಅವರ ದೂರಿನಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಬಳಿಕ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ಅವರು ಹೊಳೆ ಬದಿ ತೆರಳಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಲೀಸರು ಹಾಗೂ...

ಏನೆಕಲ್ಲು : ನಾಳೆ(ಜು.26) ವಿವೇಕ ಜಾಗ್ರತ ಬಳಗದ ವತಿಯಿಂದ ರಕ್ತದಾನ ಶಿಬಿರ

ವಿವೇಕ ಜಾಗ್ರತ ಬಳಗ ಏನೆಕಲ್ಲು ಇದರ ವತಿಯಿಂದ ಜು.26 ಶನಿವಾರದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಆದಿಶಕ್ತಿ ಭಜನಾ ಮಂದಿರ ಏನೆಕಲ್ಲು ಇಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದ್ದು, ಅದರೊಂದಿಗೆ ಸಾರ್ವಜನಿಕ ಆರೋಗ್ಯ ಇಲಾಖೆಯವರಿಂದ ಉಚಿತ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ  ವಿವೇಕ ಜಾಗೃತ ಬಳಗ ತನ್ನ...

“ಗುಂಡ್ಯದಲ್ಲಿ ಆನೆ ಶಿಬಿರ ಸ್ಥಾಪನೆಗೆ ಸಿದ್ಧತೆ, ಆಸು ಪಾಸಿನ ಗ್ರಾಮದ ರೈತರು ಭೂಮಿ ಕಳೆದುಕೊಳ್ಳುವ ಭೀತಿಯಿದೆ” – ಕಿಶೋರ್ ಶಿರಾಡಿ

ಈ ಬಗ್ಗೆ ಚರ್ಚಿಸಲು ಜು.30 ರಂದು  ಸಮಾಲೋಚನಾ ಸಭೆ ನಡೆಸಲು ತೀರ್ಮಾನ

"ಗುಂಡ್ಯದಲ್ಲಿ ಆನೆ ಶಿಬಿರ ಸ್ಥಾಪನೆಗೆ ಸಿದ್ಧತೆ, ಕಾಡು ಪ್ರಾಣಿಗಳಿಂದ ಕೃಷಿ ಹಾಗೂ ಜೀವಕ್ಕೆ ಹಾನಿ, ಜಾನುವಾರುಗಳನ್ನು ಅರಣ್ಯ ಪ್ರದೇಶದಲ್ಲಿ ಮೇಯಿಸಲು ನಿಷೇಧದ ಬಗ್ಗೆ, ಜಾಗದ ಫ್ಲೋಟಿಂಗ್ ಸಮಸ್ಯೆ, ರೈತರ ಉಳಿವಿಗಾಗಿ ಮತ್ತು ಗ್ರಾಮೀಣ ಪ್ರದೇಶದ ಜನರ ಸಂರಕ್ಷಣೆಗಾಗಿ ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರನ್ನು ಜಾಗೃತಗೊಳಿಸಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ" ಎಂದು ಮಲೆನಾಡು ಜನ...

ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ; ನಾಳೆ(ಜು.25) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ(ಜು.25) ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು...

ದೇವಚಳ್ಳ ಗ್ರಾ.ಪಂ.ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಶಿವರಾಮ.ಕೆ ಕುಚ್ಚಾಲರಿಗೆ ಬೀಳ್ಕೊಡುಗೆ

“ಅವರ ಕರ್ತವ್ಯ ನಿಷ್ಠೆ ಎಲ್ಲರಿಗೆ ಮಾದರಿ” – ಭರತ್ ಮುಂಡೋಡಿ

ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಸುದೀರ್ಘ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶಿವರಾಮ.ಕೆ ಕುಚ್ಚಾಲ ಅವರಿಗೆ ಬೀಳ್ಕೊಡುಗೆ ಸಮಾರಂಭ ಇಂದು ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು. ಶಿವರಾಮ.ಕೆ ಅವರನ್ನು ಅಭಿನಂದಿಸಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಜಿ.ಪಂ ಸದಸ್ಯರಾದ ಭರತ್ ಮುಂಡೋಡಿ ಮಾತನಾಡಿ ಅವರ ಕರ್ತವ್ಯ ನಿಷ್ಠೆಯನ್ನು ಸ್ಮರಿಸುತ್ತಾ "ನಿಷ್ಠೆಯಿಂದ ಕೆಲಸ...

ಏನೆಕಲ್ಲು : ಅನಾರೋಗ್ಯದಿಂದ ಮಹಿಳೆ ಮೃತ್ಯು

ಕಡಬ ತಾಲೂಕು ಏನೆಕಲ್ಲು ಗ್ರಾಮದ ಪದ್ನಡ್ಕ ದಿ.ವಿಜಯಕುಮಾರ್ ಪೂಜಾರಿಯವರ ಪುತ್ರಿ ಅಶ್ವಿನಿ(25) ಅಸೌಖ್ಯದಿಂದ ಜು.21 ರಂದು ನಿಧನರಾದರು.‌  ಅಶ್ವಿನಿ ಅವರಿಗೆ ಒಂದುವರೆ  ವರ್ಷಗಳ ಹಿಂದಷ್ಟೇ ಕೊಡಿಂಬಾಳದ ರಂಜಿತ್ ಅವರೊಂದಿಗೆ ವಿವಾಹವಾಗಿತ್ತು.  ಅನಾರೋಗ್ಯ ಎಂದು ಚಿಕಿತ್ಸೆಗೆ ಹೋದಾಗ ಬ್ಲಡ್ ಕ್ಯಾನ್ಸರ್ ಎಂದು ಗೊತ್ತಾಗಿ ಅವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತಿ ರಂಜಿತ್, ತಾಯಿ...
Loading posts...

All posts loaded

No more posts

error: Content is protected !!