ಕಸ್ತೂರಿರಂಗನ್ ವರದಿ ಕುರಿತು ಶಾಸಕ ಹರೀಶ್ ಪೂಂಜ ಅವರ ಭೇಟಿ ಮಾಡಿದ ಕಿಶೋರ್ ಶಿರಾಡಿ

ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದ ನಿಯೋಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಭೇಟಿ ಮಾಡಿ ಕಸ್ತೂರಿರಂಗನ್ ವರದಿ, 7ನೇ ಕರಡು ಅಧಿಸೂಚನೆ ಹಾಗೂ ಪರಿಸರ ಸೂಕ್ಷ್ಮ ವಲಯ (ESA) ಘೋಷಣೆಯಿಂದ ಮಲೆನಾಡು ಭಾಗದ ಗ್ರಾಮಸ್ಥರು ಮತ್ತು ರೈತರಿಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಚರ್ಚಿ ನಡೆಸಿದರು....

ಜಾಲ್ಸೂರು ವಲಯದ ನೂತನ ಅಧ್ಯಕ್ಷರಾಗಿ ನವೀನ್ ಕುಮಾರ್ ಅಂಬಾಡಿಮೂಲೆ ಆಯ್ಕೆ

ಜಾಲ್ಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ಪ್ರಗತಿಬಂಧು ಸ್ವಸಹಾಯ ಸಂಘಗಳ ಜಾಲ್ಸೂರು ವಲಯದ ನೂತನ ವಲಯ ಅಧ್ಯಕ್ಷರಾಗಿ ನವೀನ್ ಕುಮಾರ್ ಅಂಬಾಡಿಮೂಲೆ ಅವರು ಆಯ್ಕೆಯಾಗಿದ್ದಾರೆ.
Ad Widget

ಶ್ರೀ ರಾಜರಾಜೇಶ್ವರಿ ದೇವಸ್ಥಾನದ ತಡೆಗೋಡೆ ನಿರ್ಮಾಣ – ಭಕ್ತಾಧಿಗಳಿಂದ ಶ್ರಮದಾನ

ಬೆಳ್ಳಾರೆ : ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ದೇವಿಯ ಗರ್ಭಗುಡಿಯ ಎದುರುಭಾಗದ ತಡೆಗೋಡೆ ನಿರ್ಮಾಣ ಕಾರ್ಯದಲ್ಲಿ ಎಂ.ಎಸ್.ಕೆ ತಂಡ ಕುಳ್ಳಾಜೆ ಶೇಣಿ ಹಾಗೂ ನವೋದಯ ಸ್ವಸಹಾಯ ಸಂಘ, ಪಡ್ಪು ಇದರ ಸದಸ್ಯರು ಮತ್ತು ಭಕ್ತಾದಿಗಳು ಸೇವೆಯಲ್ಲಿ ಪಾಲ್ಗೊಂಡರು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ನಡೆದ ಈ ಸೇವಾ ಕಾರ್ಯದಲ್ಲಿ ಭಕ್ತರು ಶ್ರಮದಾನದ...

ಸೆ.27 ರಂದು ಮಣಿಯಾನ ಮನೆ ಅಪೇಕ್ಷ್ ಎಂ.ಪಿ.ಯವರು ಉದ್ಯೋಗ ನಿಮಿತ್ತ ವಿದೇಶಕ್ಕೆ

ಗುತ್ತಿಗಾರು ಗ್ರಾಮದ ಮಣಿಯಾನ ಮನೆ ಅಪೇಕ್ಷ್ ಎಂ.ಪಿ.ಯವರು ಉದ್ಯೋಗ ನಿಮಿತ್ತ ಸೆ.27 ರಂದು ಜಪಾನ್ ಗೆ ತೆರಳಲಿದ್ದಾರೆ. ಇವರು ಪ್ರತಿಷ್ಠಿತ ನಿಟ್ಟೆ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆಯ ಮೂಲಕ ಜಪಾನ್ ದೇಶದ ಪ್ರತಿಷ್ಠಿತ Ohmoto Gumi Co.Ltd. ಈ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಇವರು ಗುತ್ತಿಗಾರು ಗ್ರಾಮದ...

ಅಕ್ಟೋಬರ್ 3 ಮತ್ತು 4 ಸುಳ್ಯದಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಉತ್ಸವ – ಪೋಸ್ಟರ್ ಬಿಡುಗಡೆ

ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ಅಕ್ಟೋಬರ್ 3 ಮತ್ತು 4 ರಂದು ರಾಷ್ಟ್ರೀಯ ಮಟ್ಟದ ಆಹ್ವಾನಿತ ತಂಡಗಳ ರಾಷ್ಟ್ರೀಯ ಮಟ್ಟದ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸುಳ್ಯ ಯುವಜನ ಸಂಯುಕ್ತ ಮಂಡಳಿ ಬಳಿಯಿರುವ ಜೂನಿಯರ್ ಕಾಲೇಜು ಮೈದಾನದ ದಲ್ಲಿ ಜರಗಲಿದೆ ಪ್ರಚಾರ ಸಾಮಾಗ್ರಿ ಪೋಸ್ಟರ್ ನ್ನು ಸುಳ್ಯ ತಾಲೂಕು ತಹಶೀಲ್ದಾರ್...

ಜೆಇಇ ಪರೀಕ್ಷೆಯಲ್ಲಿ ಸಾಧನೆಗೈದ ದೀಕ್ಷಿತ್ ಸಿ.ಎಸ್. ಅವರಿಗೆ ಮುಖ್ಯಮಂತ್ರಿಗಳಿಂದ ಪುರಸ್ಕಾರ

ಸುಳ್ಯ: ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೂಲ್ಕಿ, ಮಂಗಳೂರಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆಗೈದ ದೀಕ್ಷಿತ್ ಸಿ.ಎಸ್. ಅವರು ಜೆಇಇ (Mains) ಪರೀಕ್ಷೆಯಲ್ಲಿಯೂ ಉತ್ತಮ ಸಾಧನೆ ಮಾಡಿ, ರಾಷ್ಟ್ರಮಟ್ಟದ ಪ್ರತಿಷ್ಠಿತ ಸಂಸ್ಥೆಯಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ (IIIT), ಧಾರವಾಡದಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಕೋರ್ಸ್‌ಗೆ ಆಯ್ಕೆಯಾಗಿ ಪ್ರವೇಶ ಪಡೆದಿದ್ದಾರೆ. ಅವರ ಈ ಸಾಧನೆಯನ್ನು ಗುರುತಿಸಿ...

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ವಾಲಿಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ ಹಾಗೂ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಕ್ರೀಡಾಂಗಣದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ನಡೆಯಿತು. ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ ಎಂ.ಮುಸ್ತಾಫ ಇವರು “ಜೀವನದಲ್ಲಿ...

ಸುಳ್ಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ : 218 ಪ್ರಕರಣಗಳ ಇತ್ಯರ್ಥ

ಸುಳ್ಯ : ಸುಳ್ಯ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 307 ಪ್ರಕರಣಗಳ ಪೈಕಿ 218 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು ರೂ.2,48,61,175 ಮೊತ್ತದ ಪ್ರಕರಣಗಳು ಇತ್ಯರ್ಥವಾಗಿವೆ.ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಒಟ್ಟು 118 ಪ್ರಕರಣಗಳ ಪೈಕಿ 85 ಪ್ರಕರಣಗಳು ರೂ.57,99,275 ಮೊತ್ತಕ್ಕೆ ಇತ್ಯರ್ಥಗೊಂಡಿವೆ. ಇದರಲ್ಲಿ 77 ಕ್ರಿಮಿನಲ್ ಪ್ರಕರಣಗಳ ಪೈಕಿ 76 ಪ್ರಕರಣಗಳು ರೂ.52,400ಕ್ಕೆ...

ತುಳು ಭಾಷೆಗೆ ಮಾನ್ಯತೆ ಅವಿಸ್ಮರಣೀಯ ಕ್ಷಣ – ರಾಜ್ಯ ಸರಕಾರಕ್ಕೆ ದೆಹಲಿ ತುಳುಸಿರಿಯ ಅಭಿನಂದನೆ

ಪಂಚ ದ್ರಾವಿಡ ಭಾಷೆಯಾದ ತುಳುವನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಬೇಕೆಂಬ ತುಳುವರ ಒಕ್ಕೊರಲ ಬೇಡಿಕೆಯನ್ನು ಕರ್ನಾಟಕ ಸರಕಾರವು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ತೀರ್ಮಾನಿಸಿರುವುದು ಸಂತಸದ ಸಂಗತಿ. ಕಳೆದ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದ ಎಲ್ಲ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಪಂಚ ದ್ರಾವಿಡ ಭಾಷೆಯಾದ ತುಳುವನ್ನು...

ದಿನೇಶ್‌ ಹಾಲೆಮಜಲುರವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ

ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಸಮಾಜ ಸೇವಾ ರತ್ನ ಪ್ರಶಸ್ತಿಗೆ ದಿನೇಶ್ ಹಾಲೆಮಜಲು ಆಯ್ಕೆಯಾಗಿದ್ದಾರೆ. ಕರ್ನಾಟಕ ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯರಾಗಿರುವ ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಇವರ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ....
Loading posts...

All posts loaded

No more posts

error: Content is protected !!