- Sunday
- August 16th, 2026
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 05 ವರ್ಷಗಳ ಆಡಳಿತ ಮಂಡಳಿ ಅವಧಿಗೆ ಜ.19 ರಂದು ಚುನಾವಣೆ ನಡೆದು ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು, ಈ ನ್ಯಾಯಾಲಯದ ಮುಂದಿನ ಆದೇಶಕ್ಕೆ ಒಳಪಟ್ಟು ಫಲಿತಾಂಶವನ್ನು ಘೋಷಣೆ ಮಾಡಬೇಕಾಗಿರುವುದರಿಂದ ಪ್ರಸ್ತುತ ಆಡಳಿತ ಮಂಡಳಿಯ ಅವಧಿಯು ಮುಕ್ತಾಯವಾಗಿರುವುದರಿಂದ ಸಂಘದ ದೈನಂದಿನ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಆಡಳಿತ...
ಅರಂತೋಡಿನ ಆಟೋ ಚಾಲಕ, ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಕಂದಸ್ವಾಮಿ ಎಂಬವರು ಇಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಂದಸ್ವಾಮಿಯವರು ನೇಣುಬಿಗಿದುಕೊಂಡ ವಿಷಯ ಗೊತ್ತಾಗಿ ಮನೆಯವರು ಅವರನ್ನು ಹಗ್ಗದಿಂದ ಇಳಿಸಿ, ಸಮೃದ್ಧಿ ಮಾರ್ಟಿನ ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಆಸ್ಪತ್ರೆಗೆ ತಂದರೂ, ಆ ವೇಳೆಗೆ ಅವರು ಕೊನೆಯುಸಿರೆಳೆದಿದ್ದರೆನ್ನಲಾಗಿದೆ. ಕಂದಸ್ವಾಮಿಯವರಿಗೆ 55 ವರ್ಷ ಪ್ರಾಯವಾಗಿತ್ತು. ಪತ್ನಿ...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.1 ಮತ್ತು 2 ರಂದು ಜಾತ್ರೋತ್ಸವ ನಡೆಯಲಿದ್ದು ಇದರ ಅಂಗವಾಗಿ ಇಂದು ಗೊನೆ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಅರ್ಚಕರಾದ ಮಹಾಬಲೇಶ್ವರ ಭಟ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ, ಗುತ್ತಿಗಾರು ಮುತ್ತಪ್ಪ ದೈವಸ್ಥಾನದ ಆಡಳಿತ ಮೊಕ್ತೇಸರರಾದ ವೆಂಕಟ್ ವಳಲಂಬೆ, ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ವ್ಯವಸ್ಥಾಪನಾ...
ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮಹಾ ಪಾತ್ರ ರವರು ರಾಯಚೂರಿಗೆ ವರ್ಗಾವಣೆ ಗೊಂಡಿರುತ್ತಾರೆ. ಮುಂದಿನ ಆದೇಶದ ವರೆಗೆ ರಾಯಚೂರು ನಗರ ಪಾಲಿಕೆಯ ಆಯುಕ್ತರಾಗಿ ಸರಕಾರ ಇವರನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ. ಇವರು ಪುತ್ತೂರು ಉಪವಿಭಾಗದ ಸುಳ್ಯ ಬೆಳ್ತಂಗಡಿ ಕಡಬ ವ್ಯಾಪ್ತಿಯಲ್ಲಿ ಅಧಿಕಾರ ವಹಿಸಿಕೊಂಡ ಕೆಲವೇ ಸಮಯದಲ್ಲಿ ಜನಸ್ನೇಹಿಯಾಗಿ ಗುರುತಿಸಿಕೊಂಡಿದ್ದರು.ಕುಕ್ಕೆ ಸುಬ್ರಹ್ಮಣ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಗತೀರ್ಥದಲ್ಲಿ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕ್ರೀಡಾಕೂಟವನ್ನು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಇದರ ಅಧ್ಯಕ್ಷರಾದ ಹಿತೇಶ್ ಪಂಜದಬೈಲು ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ SDMC ಅಧ್ಯಕ್ಷರಾದ ಮಧುಚಂದ್ರ ವಹಿಸಿದರು.ಪಂಜ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ವಿಜಯಲಕ್ಷ್ಮಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಅನುರಾಜ್ ಕಕ್ಯಾನ, ಮುಖ್ಯಶಿಕ್ಷಕಿ...
ರಾಷ್ಟ್ತೀಯ ಶಿಕ್ಷಣ ನೀತಿಯಿಂದ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆಯಾಗಲಿದೆ ಎಂದು ದ.ಕ.ಸಂಸದ ಬ್ರಿಜೇಶ್ ಚೌಟ ಹೇಳಿದರು.ಅವರು ದೇವಚಳ್ಳ ಗ್ರಾಮದ ಎಲಿಮಲೆಯ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಶಾಲೆಗಳನ್ನು ಉಳಿಸುವದೇ ಸವಾಲಿನ ಕೆಲಸ. ಇಂತಹ ಸಂದರ್ಭದಲ್ಲಿ ಶತಮಾನೋತ್ಸವ ಆಚರಿಸುತ್ತಿರುವುದು ವಿಶೇಷ , ಕೇಂದ್ರ ಸರಕಾರದ...
ಸುಳ್ಯ ನಗರ ವ್ಯಾಪ್ತಿ ಯಲ್ಲಿರುವ ಬೆಟ್ಟಂಪಾಡಿ ಆಶ್ರಯ ಕಾಲೋನಿಯಲ್ಲಿ ನೀರಿನ ಟ್ಯಾಂಕ್ ಸ್ವಚ್ಛ ಮಾಡದೆ ಮನೆಗಳಲ್ಲಿ ಹಲವು ದಿನಗಳಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಬರುತ್ತಿದ್ದು ಇಲ್ಲಿನ ನಾಗರೀಕರಿಗೆ ಬಹಳ ತೊಂದರೆಯಾಗಿದ್ದು ಸ್ಥಳೀಯರು ತಿಳಿಸಿದಂತೆ ಅಡುಗೆಗೆ ಬಳಸಲು, ಸ್ನಾನ ಮಾಡಲು, ಬಟ್ಟೆ ತೊಳೆಯಲು, ಶಾಲೆಗೆ ಹೋಗುವ ಮಕ್ಕಳ ಸಮವಸ್ತ್ರ ಇನ್ನಿತರ ದೈನಂದಿನ ನಿತ್ಯೋಪಯೋಗಿ ಕೆಲಸಗಳಿಗೆ ಸಮಸ್ಯೆಯಾಗಿದ್ದು...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜ. 24 ರಂದು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿ-ಕ್ಷಯ ಯೋಜನೆಯ ಅಡಿಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡದ ಮಾರ್ಗಸೂಚಿ ಪ್ರಕಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ , ಸ್ವಸ್ಥ ವೃತ್ತ ಮತ್ತು ಕಾಯಚಿಕಿತ್ಸಾ ವಿಭಾಗದ ಸಹಭಾಗಿತ್ವದಲ್ಲಿ ಕ್ಷಯ ರೋಗದ...
ಸರಕಾರದ "ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆ"ಯನ್ನು ಸಹಕಾರಿ ಸಂಘದ ಮೂಲಕ ಸದಸ್ಯರಿಗೆ ಜಾರಿಗೊಳಿಸಲಾಗಿದ್ದು, ಸುಳ್ಯ ಮತ್ತು ಪುತ್ತೂರು ತಾಲೂಕು ಮಟ್ಟದಲ್ಲಿ ಯಾವುದೇ ಯಶಸ್ವಿನಿ ನೋಂದಾಯಿತ ಆಸ್ಪತ್ರೆಗಳು ಇಲ್ಲದೇ ಇರುವುದರಿಂದ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನ ಸಿಗದೇ ವಂಚಿತರಾಗುತ್ತಿದ್ದಾರೆ. ಸುಳ್ಯ ತಾಲೂಕಿನಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಪುತ್ತೂರು ತಾಲೂಕಿನ ಆಸ್ಪತ್ರೆಗಳಲ್ಲಿ ಹಾಗೂ ಜಿಲ್ಲಾ...
Loading posts...
All posts loaded
No more posts
