- Thursday
- August 20th, 2026
ಸುಳ್ಯದಿಂದ ವಿವಿದ ಕಡೆಗಳಿಗೆ ತೆರಳುವ ಬಸ್ಸುಗಳು ಸರಿಯಾದ ಸಮಯದಲ್ಲಿ ಸಂಚರಿಸದೆ ಇರುವ ಬಗ್ಗೆ ಪದೆ ಪದೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ದಿಢೀರ್ ಭೇಟಿ ಮಾಡಿದ ಶಾಸಕರಾದ ಭಾಗೀರಥಿ ಮುರುಳ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರಿಯಾದ ಸಮಯಕ್ಕೆ ಬಸ್ಸು ಕಲ್ಪಿಸಿ ಸಾರ್ವಜನಿಕರಿಗೆ ಬಸ್ಸು ಲಭ್ಯವಾಗುವಂತೆ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಒಂದು ವಾರದಲ್ಲೇ ಬಸ್ಸು ವ್ಯವಸ್ಥೆ ಸರಿಯಾಗದೇ...
ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಮೊರಂಗಲ್ಲು ಮುಖ್ಯ ರಸ್ತೆಯ ಬಳಿ ಇರುವ. ಬಸ್ ನಿಲ್ದಾಣದ ಪರಿಸರ ಕಾಡು ಪೊದೆ ಬಳ್ಳಿ ಗಳಿಂದ ಆವರಿಸಿದ್ದು ಪ್ರಯಾಣಿಕರಿಗೆ ಬಸ್ ನಿಲ್ದಾಣವನ್ನು ಬಳಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜೋರಾಗಿ ಮಳೆ ಸುರಿದರೂ. ದಾರಿಹೋಕರಿಗೆ ಆಶ್ರಯಕ್ಕಾಗಿ ನಿಲ್ಲಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣದ ಒಳಗೆ ಮರದ ಸಣ್ಣ ಸಣ್ಣ ದಿಮ್ಮಿ...
ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇದರ ೩೪ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ ಕಮ್ಯುನಿಟಿ ಹಾಲ್‌ನಲ್ಲಿ ನಡೆಯಿತು.ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಮೋಕ್ಷ ನಾಯಕ್ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ನವದೆಹಲಿ ಇದರ ಗೌರವಾನ್ವಿತ ಸದಸ್ಯರಾದ ಡಾ. ಶಿವಶರಣ್...
ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ - ಪ್ರಮೀಳಾ ಟಿ ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯ ಪಟ್ಟರು....
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನ 06ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ಮರ್ಕಂಜ ರೆಂಜಾಳದ ಶ್ರೀ ವಿನಾಯಕ ಸಭಾಭವನದಲ್ಲಿ ನಡೆಯಿತು. ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲರಾದ...
ಸುಳ್ಯ : ಅತೀವವಾದ ಮಳೆಯಿಂದ ಕೊಳೆರೋಗ ಹಾಗೂ ಹಳದಿರೋಗ ಸಹಿತ ರೈತರು ಕಂಗಾಲಾಗಿದ್ದು ಈ ಸಂದರ್ಭದಲ್ಲಿ ರೈತರಿಗೆ ಅನುಕೂಲಕರವಾಗುವಂತೆ ಕೇಂದ್ರ ಸರಕಾರ ವಿಮೆ ಯೋಜನೆಯನ್ನು ಜಾರಿಗೆ ತಂದು ಚುನಾವಣೆ ಬಂದ ಹಿನ್ನೆಲೆಯಲ್ಲಿ ಒಂದಿಷ್ಟು ಗೊಂದಲಗಳು ಹಾಗೂ ರೈತರ ಆಕ್ರೋಶದ ಬಳಿಕ ಅಡಿಕೆ ಮತ್ತು ಇತರೆ ಬೆಳೆಗಳಿಗೆ ವಿಮೆಯನ್ನು ಜಾರಿಗೊಳಿಸಿತ್ತು. ಇದೀಗ ರೈತರ ಖಾತೆಗಳಿಗೆ ಪ್ರೀಮಿಯಂ ಕಟ್ಟಿದ...
9 ರಿಂದ 12ನೇ ತರಗತಿಯಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳಿಗೆ ಜೇಸಿಐ ವತಿಯಿಂದ ನೀಡುವ ವಿದ್ಯಾರ್ಥಿ ವೇತನಕ್ಕೆ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಲ್ಕು ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಬೆಳ್ಳಾರೆ ಜೇಸಿಐ ಘಟಕದ ವತಿಯಿಂದ ಕೆಪಿಎಸ್ ನಲ್ಲಿ ನಡೆದ ಪೋಷಕರ ಸಭೆಯಲ್ಲಿ ಅಭಿನಂದಿಸಲಾಯಿತು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ, ಸದಸ್ಯ...
ಅರಂತೋಡು ಸ.ಉ. ಹಿ. ಪ್ರಾ. ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಮಂಥನ್ ಅವರು ಶಾಟ್ ಪುಟ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದ ಶಾಟ್ ಪುಟ್ ಸ್ಪರ್ಧೆಯಲ್ಲಿ ಮಂಥನ್ ಅವರು ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈತ ಸುಳ್ಯದ ಗಣೇಶ್ ಮತ್ತು ಅಶ್ವಿನಿ ದಂಪತಿಗಳ ಪುತ್ರ. ದೈಹಿಕ...
ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ನಾಲ್ಕನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ರಮಶ್ರೀ ಬೆಳ್ಳಾರೆ, ದ್ವಿತೀಯ ಪ್ರಸಾದ್ ಸೂರ್ಯಮನೆ, ಸುಳ್ಯ, ತೃತೀಯ ಬಹುಮಾನ ವಿಜಯ ವಿಶ್ವಕರ್ಮ ವಿಟ್ಲ, ಸಮಧಾನಕರ ಬಹುಮಾನಗಳನ್ನು...
Loading posts...
All posts loaded
No more posts
