- Friday
- September 4th, 2026
ಬಿಳಿನೆಲೆ : “ಮಾನವರಿಗೂ,ಪ್ರಾಣಿ-ಪಕ್ಷಿಗಳಿಗೂ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧವಿದೆ. ಅಂತಹ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಮ್ಮ ಪರಿಸರ ಪ್ಲಾಸ್ಟಿಕ್ ಮುಕ್ತ ಪರಿಸರವಾಗಿರುವಂತೆ ನಾವೆಲ್ಲರೂ ಜಾಗೃತವಹಿಸೋಣ” ಎಂದು ಸುಬ್ರಹ್ಮಣ್ಯ ವಲಯದ ವಲಯ ಅರಣ್ಯಾಧಿಕಾರಿಗಳಾದ ಅಪೂರ್ವ ಆಚ್ರಪ್ಪಾಡಿ ಹೇಳಿದರು. ಇವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಇಕೋ ಕ್ಲಬ್ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯ...
ಸುಬ್ರಹ್ಮಣ್ಯ ಜೂನ್ 06 : ಸುಬ್ರಹ್ಮಣ್ಯದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಜನಾಂಗದ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಿದರು.ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಮಲ್ಲಿಕಾ, ಶಿಕ್ಷಕಿಯರಾದ ಜೀವಿತ, ಭವ್ಯ, ಕವಿತಾ, ಗೀತ ಸುಧಾ, ಹರ್ಷಿತ...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 01 ಸೋಮವಾರದಿಂದ ಜೂ.06 ಶನಿವಾರದವರೆಗೆ...
ಸುಬ್ರಹ್ಮಣ್ಯ ಜೂನ್ 06 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನಂಪ್ರತಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಸಾವಿರಾರು ಭಕ್ತರ ಅನುಕೂಲಕ್ಕಾಗಿ ಸಮಗ್ರ ಅಭಿವೃದ್ಧಿಯ ಮಾಸ್ಟರ್ ಪ್ಲಾನ್ ಮೂರನೇ ಹಂತದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ದೇವಸ್ಥಾನದ ಸುತ್ತುಪೌಳಿ ಮರುನಿರ್ಮಾಣ ಸಹಿತ ವಿವಿಧ ಕಾಮಗಾರಿಗಳಿಗೆ ಸಚಿವ ಸಂಪುಟದ ಒಪ್ಪಿಗೆಯೊಂದಿಗೆ ಆಡಳಿತಾತ್ಮಕ ಅನುಮೋದನೆ ಈಗಾಗಲೇ ದೊರಕಿರುತ್ತದೆ. ಇದರ ಮುಂದಿನ...
ಸುಬ್ರಹ್ಮಣ್ಯ ಜೂನ್ 05 : ಮಂಗಳೂರಿನ ನಿಟ್ಟೆ ಪಿಜಿಯೋಥೆರಪಿ ಮಹಾವಿದ್ಯಾಲಯ(ಕ್ಷೇಮ) ಆಯೋಜಿಸಿರುವ ವಿಶ್ವ ಪರಿಸರ ದಿನದ ಅಂಗವಾಗಿ ಜೂನ್ 05 ಶುಕ್ರವಾರದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಪರಿಸರದಲ್ಲಿ ಕ್ಲೀನ್ ಕುಮಾರಧಾರ, ಗ್ರೀನ್ ಸುಬ್ರಹ್ಮಣ್ಯ ಎಂಬ ಸ್ಲೋಗನ್ನೊಂದಿಗೆ ಬೃಹತ್ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಸ್ವಚ್ಛತಾ ಅಭಿಯಾನವನ್ನು ಫ್ಲಾಗ್ ಹಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ...
ಸುಬ್ರಹ್ಮಣ್ಯ ಜೂನ್ 05 : ಸುಬ್ರಹ್ಮಣ್ಯದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವವು ಸಂಭ್ರಮದಿಂದ ಜೂನ್ 01 ರಂದು ಜರಗಿತು. ಆರಂಭದಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಾಲಾ ಆವರಣದಿಂದ ಕಾಶಿಕಟ್ಟೆ ಗಣಪತಿ ದೇವಸ್ಥಾನದ ವೃತ್ತದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದರು. ತದನಂತರ ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ...
ಸುಳ್ಯ : ಕರ್ನಾಟಕ ರಾಷ್ಟ್ರ ಸಮಿತಿ(ಕೆ.ಆರ್.ಎಸ್) ಪಕ್ಷದ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಗೆ ಸಲ್ಲಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005ರ ಕಾಯ್ದೆಯಡಿಯಲ್ಲಿ ಕೋರಿರುವ ಮಾಹಿತಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.ಕೆ.ಆರ್.ಎಸ್ ಸುಳ್ಯ ಘಟಕದ ಅಧ್ಯಕ್ಷ ಡಿ.ಯು ಶಾರಿಖ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲಾದ ಮಾಹಿತಿಯ ಪ್ರಕಾರ, ಅನಧಿಕೃತವಾಗಿ ಅಗೆದಿರುವ ರಸ್ತೆಯನ್ನು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಕೃಷಿಕರು ಕಾನೂನು ಪ್ರಕಾರ...
ಕಡಬ ತಾಲೂಕಿನ ಬಲ್ಯ ಎಂಬಲ್ಲಿ ನೂತನವಾಗಿ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಆಟೋ ರಿಕ್ಷಾ ನಿಲ್ದಾಣವನ್ನು ಇಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಬಲ್ಯ ಬೂತ್ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಪಟ್ಟೆ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈಮನವಳಿಕೆ, ಬಿಜೆಪಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕೃಷ್ಣ ಎಮ್.ಅರ್, ಶ್ರೀ...
