- Friday
- November 1st, 2024
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಅಣ್ಣಪ್ಪಾದಿ ದೈವಗಳ ನೇಮೋತ್ಸವಗಳು ಇಂದಿನಿಂದ ಆರಂಭಗೊಂಡು ಫೆ. 14ರವರೆಗೆ ನಡೆಯಲಿದ್ದು ಫೆ.11ರಂದು(ಇಂದು) ಊರ ಭಕ್ತಾದಿಗಳಿಂದ ಮತ್ತು ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಿಂದ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ವೈಭವದ ಮೆರವಣಿಗೆಯ ಮೂಲಕ ನಡೆಯಿತು. ದೇವಸ್ಥಾನದ ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು ತೆಂಗಿನಕಾಯಿ ಒಡೆಯುವ ಮೂಲಕ ಹಸಿರು...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಪರವಾಗಿ ಹಸಿರು ಕಾಣಿಕೆ ಸಮರ್ಪಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಕಾರ್ಯದರ್ಶಿ...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವರ ಮತ್ತು ಅಮ್ಮನವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಅಣ್ಣಪ್ಪ ಸ್ವಾಮಿ, ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ ಮತ್ತು ಕಲ್ಲೇರಿತ್ತಾಯ ಹಾಗೂ ಇತರ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು ಇದರ ಪೂರ್ವಸಿದ್ಧತೆಯಾಗಿ ಫೆ.10ರಂದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಆವರಣದಲ್ಲಿ ಊರಿನ ಯುವಕರಿಂದ ಅಲಂಕಾರ ಸೇವೆ ನಡೆಯಿತು.
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವರ ಮತ್ತು ಅಮ್ಮನವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಅಣ್ಣಪ್ಪ ಸ್ವಾಮಿ, ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ ಮತ್ತು ಕಲ್ಲೇರಿತ್ತಾಯ ಹಾಗೂ ಇತರ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು (ಫೆ.10) ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಊರ ಮಹಿಳೆಯರಿಂದ ಶ್ರಮಸೇವೆ ನಡೆಯಿತು.
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ.12ರಿಂದ ಫೆ.16ರ ತನಕ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಗೊನೆ ಮುಹೂರ್ತ ಕಾರ್ಯಕ್ರಮ ಫೆ.08ರಂದು ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿ ವರ್ಗ ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು.
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಫೆ.12 ಶನಿವಾರದಂದು ಬೆಳಗ್ಗೆ 9.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ 5.30ಕ್ಕೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ,...
ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.12ರಿಂದ ಫೆ.18ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಫೆ.12 ಶನಿವಾರದಂದು ರಾತ್ರಿ 8.00ಕ್ಕೆ ಧ್ವಜಾರೋಹಣ ನಡೆಯಲಿದ್ದು ನಂತರ ಬಲಿ ಹೊರಟು ಉತ್ಸವ,...
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಇಂದು(ಫೆ.05) ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ರಾತ್ರಿ ದೇವಳದಲ್ಲಿ ದೀಪೋತ್ಸವ, ಮಹಾಪೂಜೆ ನಡೆಯಿತು. ಬಳಿಕ ಶ್ರೀ ದೇವರ ಬಲಿ ಹೊರಟು ವಸಂತಕಟ್ಟೆ ಪೂಜೆ, ಕಾಜುಕುಜುಂಬ ಹಾಗೂ ಶಿರಾಡಿ ದೈವಗಳ ನರ್ತನ ಸೇವೆ ನಡೆದು ಶ್ರೀ ದೇವರ ಉತ್ಸವ...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು (ಫೆ.04) ದೇವಾಲಯದಲ್ಲಿ ಪೂರ್ವಾಹ್ನ ದೇವತಾ ಪ್ರಾರ್ಥನೆ ನಡೆಸಿ ನಂತರ ಗೊನೆ ಮುಹೂರ್ತ ಕಾರ್ಯಕ್ರಮ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ದೇವಾಲಯದ ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು, ಪರಶುರಾಮ ಕಾಯಾರ ದೊಡ್ಡಮನೆ, ಶ್ರೀ ಕ್ಷೇತ್ರದ ಅರ್ಚಕರಾದ...
ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಿತು. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಭಜನಾ ಸಂಕೀರ್ತಣೆ ನಡೆದು ನಂತರ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಿನ್ನಿಮಜಲು ಹೇಮಂತ್...
Loading posts...
All posts loaded
No more posts