Ad Widget

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಅಯೋಧ್ಯೆ ಕರಸೇವಕರಾದ ವಾರಣಾಶಿ ಗೋಪಾಲಕೃಷ್ಣ ಹಾಗೂ ಅಶೋಕ್ ಕೆದಿಲ ಅಯೋಧ್ಯೆಯಲ್ಲಿ ತಮ್ಮ ಕರಸೇವೆಯ ಅನುಭವದ ಸಿಹಿ ನೆನಪುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು, ಅರ್ಚಕರು ಹಾಗೂ ಭಕ್ತರು...

ಕಳಂಜ : ರಾಮಲಲ್ಲಾ ಪ್ರಾಣಪ್ರತಿಷ್ಠೆ ಅಂಗವಾಗಿ ಭಜನಾ ಕಾರ್ಯಕ್ರಮ

ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರ ಲೋಕಾರ್ಪಣೆ ಪ್ರಯುಕ್ತ ಇಂದು ಕಳಂಜ ವಿಷ್ಣುನಗರದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಭ್ರಾಮರಿ ಭಜನಾ ತಂಡ ತಂಟೆಪ್ಪಾಡಿ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು. ಎಲ್.ಇ.ಡಿ. ಪರದೆಯ ಮೂಲಕ ಅಯೋಧ್ಯೆಯ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನೂರಾರು ಮಂದಿ ಭಾಗವಹಿಸಿದ್ದರು.
Ad Widget

ಅಯ್ಯನಕಟ್ಟೆ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಹಾಗೂ ಉಗ್ರಾಣ ಮುಹೂರ್ತ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ.26ರಿಂದ ಜ.29ರ ವರೆಗೆ ವಿಜೃಂಭಣೆಯಿಂದ ಜರಗಲಿದ್ದು, ಇದರ ಪೂರ್ವಭಾವಿಯಾಗಿ ಜ. 20ರಂದು ಮೂರುಕಲ್ಲಡ್ಕದಲ್ಲಿ ಉಗ್ರಾಣ ಮುಹೂರ್ತ ಮತ್ತು ಗೊನೆ ಮುಹೂರ್ತ ನಡೆಯಿತು. ಪ್ರಧಾನ ದೈವದ ಪಾತ್ರಿ ಲಕ್ಷ್ಮಣ ಗೌಡ...

ಪೆರುವಾಜೆ ಜಾತ್ರೋತ್ಸವ: ಇಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ,ಧ್ವಜಾವರೋಹಣ

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಬೆಳಗ್ಗೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆಯಾಗಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ...

ಇತಿಹಾಸ ಪ್ರಸಿದ್ಧ ಪೆರುವಾಜೆ ಜಾತ್ರೋತ್ಸವ: ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ರಥೋತ್ಸವ ಕಣ್ತುಂಬಿಕೊಂಡು ಪುಳಕಿತರಾದ ಸಹಸ್ರ ಸಹಸ್ರ ಭಕ್ತಾದಿಗಳು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು(ಜ.19) ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ನಡೆಯಿತು. ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು...

ಇತಿಹಾಸ ಪ್ರಸಿದ್ಧ ಪೆರುವಾಜೆ ಜಾತ್ರೋತ್ಸವ: ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಇಂದು ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ಬು, ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ...

ಪೆರುವಾಜೆ ಜಾತ್ರೋತ್ಸವ: ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ...

ಪೆರುವಾಜೆ ಜಾತ್ರೋತ್ಸವ: ಇಂದು ಶ್ರೀ ದೇವರ ಪೇಟೆ ಸವಾರಿ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ಪೇಟೆ ಸವಾರಿ ನಡೆಯಲಿದೆ. ಇಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ ಗಂಟೆ 5.00ಕ್ಕೆ ಶ್ರೀ ದೇವರ ಬಲಿ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.16ರಂದು ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ ವಹಿಸಿದ್ದರು. ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ, ಶ್ರೀಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನಗೈದು ಮಾತನಾಡುತ್ತಾ ಸನಾತನ ಸಂಸ್ಕೃತಿಯ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ- ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡ ಜಾತ್ರೋತ್ಸವ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಇಂದು ರಾತ್ರಿ ದೇವತಾ ಪ್ರಾರ್ಥನೆ ಬಳಿಕ ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು. ಈ...
Loading posts...

All posts loaded

No more posts

error: Content is protected !!