- Friday
- April 18th, 2025

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.11ರಿಂದ ಫೆ.14ರ ವರೆಗೆ ಜರಗಲಿದ್ದು, ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಜ.27ರಂದು ನಡೆಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಹೆಗ್ಗಡೆ ಶ್ರೀ ಪರಮೇಶ್ವರಯ್ಯ ಕಾಂಚೋಡು ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ನೇಮ ನಡಾವಳಿ ನಡೆಯಿತು. ಇಂದು ಬೆಳಗ್ಗೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು, ಸಪರಿವಾರ ದೈವಗಳು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು, ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ...

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವವು ಇಂದು ಆರಂಭಗೊಂಡಿದ್ದು, ಬಾಳಿಲ ಶ್ರೀ ಮಂಜುನಾಥೇಶ್ವರ ದ್ವಾರದ ಬಳಿಯಿಂದ ಮೂರುಕಲ್ಲಡ್ಕ ಶ್ರೀ ಉಳ್ಳಾಕುಲು ದೈವಸ್ಥಾನದವರೆಗೆ ವೈಭವದ ಮೆರವಣಿಗೆಯ ಮೂಲಕ ಹಸಿರುವಾಣಿ ಸಮರ್ಪಿಸಲಾಯಿತು. ಜಾತ್ರೋತ್ಸವದ ಅಂಗವಾಗಿ ಇಂದು(ಜ.26) ಬೆಳಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ಗಣಪತಿ...

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವದ ಅಂಗವಾಗಿ ನಾಗರಿಕ ಸೇವಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ವತಿಯಿಂದ ಶ್ರಮಸೇವೆ ನಡೆಯಿತು. ಶ್ರಮಸೇವೆಯ ಮೂಲಕ ಸಪರಿವಾರ ಉಳ್ಳಾಕುಲು ಮೂಲಸ್ಥಾನದ ಬಳಿಯಿರುವ ನಾಗಸಾನ್ನಿಧ್ಯದ ಬಲಭಾಗದಲ್ಲಿರುವ ಕಾನಾಜೆ ಮರಕ್ಕೆ ಮುರಕಲ್ಲಿನ ಚೌಕಾಕಾರದ ಕಟ್ಟೆಯನ್ನು ನಿರ್ಮಿಸಲಾಯಿತು.

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.15ರಿಂದ ಜ.21ರ ವರೆಗೆ ವಿಜೃಂಭಣೆಯಿಂದ ನಡೆಯಿತು. ಜ.15 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಸ್ಥಳಶುದ್ದಿ, ಪ್ರಾಸಾದ ಶುದ್ದಿ , ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬ ಜಲಾಧಿವಾಸ, ಪ್ರಸಾದ ವಿತರಣೆ ನಡೆಯಿತು....

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವವು ಜ.26ರಿಂದ ಜ.29ರ ವರೆಗೆ ಜರುಗಲಿದ್ದು, ಇಂದುಬಾಳಿಲ ಮುಪ್ಪೇರ್ಯ ಮಹಿಳೆಯರಿಂದ ಶ್ರಮಸೇವೆ ನಡೆಯಿತು.

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಗುರುವಾರದಿಂದ ಜ.29 ಆದಿತ್ಯವಾರದವರೆಗೆ ಜರುಗಲಿದೆ. ಜ.20ರಂದು ಬೆಳಗ್ಗೆ ಗಂಟೆ 11.30ಕ್ಕೆ ಉಗ್ರಾಣ ಮುಹೂರ್ತ ಹಾಗೂ ಗೊನೆ ಕಡಿಯುವ ಕಾರ್ಯಕ್ರಮ ನಡೆಯಲಿದೆ.ಜಾತ್ರೋತ್ಸವದ ಅಂಗವಾಗಿ ಜ.26ರಂದು ಬೆಳಗ್ಗೆ 9.30ರಿಂದ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.18ರಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು. ಜ.19 ರಂದು...

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ ಜ.29ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಜಾತ್ರೋತ್ಸವ ಉಪಸಮಿತಿಗಳ ಸಂಚಾಲಕರು, ಉಪ ಸಂಚಾಲಕರು ಹಾಗೂ ಭಕ್ತರ ಸಭೆಯು ಇಂದು(ಜ.17) ನಡೆಯಿತು. ಸಭೆಯಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಮನೆ ಮನೆಗೆ ತಲುಪಿಸುವ ಅಭಿಯಾನ ನಡೆಸುವ ಸಲುವಾಗಿ ವಿವಿಧ ತಂಡಗಳನ್ನು ರಚಿಸಲಾಯಿತು. ಸಭೆಯಲ್ಲಿ...

All posts loaded
No more posts