- Sunday
- March 8th, 2026
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವ ನಡೆಯುತ್ತಿದ್ದು, ಇಂದು (ಫೆ.13ರಂದು) ಬೆಳಗ್ಗೆ ದೇವಾಲಯದಲ್ಲಿ ಗಣಪತಿ ಹವನ, ಬೆಳಗಿನ ಪೂಜೆ ನೆರವೇರಿತು. ಬಳಿಕ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ ವಿತರಣೆ, ಬಟ್ಟಲು ಕಾಣಿಕೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ....
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಇಂದಿನಿಂದ ಆರಂಭಗೊಂಡಿದ್ದು, ಫೆ.14ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಜೆ ದೇವಾಲಯಕ್ಕೆ ತಂತ್ರಿಗಳವರ ಆಗಮನ ಕಾರ್ಯಕ್ರಮ ನಡೆಯಿತು. ನಂತರ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಶ್ರೀ ದೇವಳಕ್ಕೆ...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.13 ರಿಂದ ಫೆ.17 ರವರೆಗೆ ನಡೆಯಲಿದ್ದು, ಇಂದು (ಫೆ.09 ರಂದು) ಗೊನೆ ಮುಹೂರ್ತ ಕಾರ್ಯಕ್ರಮ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು. ಸಹಾಯಕ ಅರ್ಚಕ ಹೆಚ್.ವೆಂಕಟ್ರಮಣ ಭಟ್ ಸಹಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಸುರೇಶ್ ಕುಮಾರ್...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಿಂದ ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.09ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಗೊನೆ ಕಡಿಯಲಾಗುವುದು. ಫೆ.13ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ ಗಂಟೆ 5.30ಕ್ಕೆ ತಂತ್ರಿಗಳ ಆಗಮನ, ಸ್ವಾಗತ,...
ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.13ರಿಂದ ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಫೆ.13ರಂದು ರಾತ್ರಿ 8.00ಕ್ಕೆ ಧ್ವಜಾರೋಹಣ ನಡೆಯಲಿದ್ದು ನಂತರ ಬಲಿ ಹೊರಟು ಉತ್ಸವ, ಶ್ರೀ...
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11 ಶನಿವಾರದಿಂದ ಆರಂಭಗೊಳ್ಳಲಿದ್ದು, ಫೆ.14 ಮಂಗಳವಾರದ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಫೆ.11ರಂದು ಸಂಜೆ ಗಂಟೆ 4.30ಕ್ಕೆ ತಂತ್ರಿಗಳವರ ಆಗಮನ, ಸಂಜೆ ಗಂಟೆ 5.00ಕ್ಕೆ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ...
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ವರೆಗೆ ನಡೆಯಲಿದ್ದು, ಇಂದು(ಫೆ. 4ರಂದು) ಗೊನೆ ಮುಹೂರ್ತ ನೆರವೇರಿತು. ಈ ಪ್ರಯುಕ್ತ ಬೆಳಗ್ಗೆ ದೇವತಾ ಪ್ರಾರ್ಥನೆ, ಗೊನೆ ಮುಹೂರ್ತ ನಡೆಯಿತು. ದೇವಳದ ಧರ್ಮದರ್ಶಿ ಪರಮೇಶ್ವರಯ್ಯ ಕಾಂಚೋಡು, ಪ್ರಧಾನ ಕಾರ್ಯದರ್ಶಿ ಯಂ. ಶಂಕರನಾರಾಯಣ ಭಟ್ ಮತ್ತು ಆಡಳಿತ...
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.11ರಿಂದ ಫೆ.14ರ ವರೆಗೆ ಜರಗಲಿದ್ದು, ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಜ.27ರಂದು ನಡೆಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಹೆಗ್ಗಡೆ ಶ್ರೀ ಪರಮೇಶ್ವರಯ್ಯ ಕಾಂಚೋಡು ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ನೇಮ ನಡಾವಳಿ ನಡೆಯಿತು. ಇಂದು ಬೆಳಗ್ಗೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು, ಸಪರಿವಾರ ದೈವಗಳು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು, ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ...
Loading posts...
All posts loaded
No more posts
