- Thursday
- November 21st, 2024
ಸುಬ್ರಹ್ಮಣ್ಯ: ಪ್ರತಿಷ್ಠಿತ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಇದರ 53ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಸಂಪ್ಯಾಡಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ವಿನ್ಯಾಸ್ ಹೊಸೋಳಿಕೆ, ನಿತೀನ್ ಭಟ್, ಸುಹಾಸ್ ಎಚ್.ಎಲ್, ಗುರುಪ್ರಸಾದ್ ಆದಿ ನೇಮಕಗೊಂಡರು. ಎ.ವೆಂಕಟ್ರಾಜ್, ಕೆ.ಯಜ್ಞೇಶ್ ಆಚಾರ್ ಮತ್ತು ರಾಜೇಶ್ ಎನ್.ಎಸ್ ಸಂಚಾಲಕರಾಗಿ ಆಯ್ಕೆಯಾದರು. 52ನೇ ವರ್ಷದ ಅಧ್ಯಕ್ಷ ವೆಂಕಟೇಶ್ ಎಚ್.ಎಲ್ ಅಧ್ಯಕ್ಷತೆಯಲ್ಲಿ ನಡೆದ...
ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ಹತ್ಯೆ ಮತ್ತು ಚಿಕ್ಕೋಡಿಯ ಜೈನ ಮುನಿಗಳ ಹತ್ಯೆ ಖಂಡಿಸಿರುವ ಸುಳ್ಯದ ಯುವ ಬ್ರಿಗೇಡ್, ಸೂಕ್ತ ರೀತಿಯ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಮನೀಶ್ ಗೂನಡ್ಕ,...
ಬೆಳ್ಳಾರೆಯ ಅರುಣ್ ಕುಮಾರ್ ಪುತ್ತಿಲ ಅಭಿಮಾನಿ ಬಳಗದ ವತಿಯಿಂದ ಭಾರತ ಮಾತಾ ಪೂಜನಾ ಕಾರ್ಯಕ್ರಮ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜು.2ರಂದು ನಡೆಯಿತು. ಅಯೋಧ್ಯೆ ಕರಸೇವೆಯಲ್ಲಿ ಬಲಿದಾನಗೈದ ಕೊಠಾರಿ ಸಹೋದರ ಶೇಷಪ್ಪ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಣ್ಣಾ ವಿನಯಚಂದ್ರ ದೀಪ ಬೆಳಗುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭೆಯ ಕೇಂದ್ರ...
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ ನಿರ್ಮಾಣವಾಗಲಿದ್ದು ಈ ಹಿನ್ನೆಲೆಯಲ್ಲಿ ರಥ ನಿರ್ಮಾಣ ಕಾರ್ಯಕ್ಕೆ ಕಾಷ್ಟ ಶಿಲ್ಪಿಗೆ ವೀಳ್ಯ ಮುಹೂರ್ತವು ಜೂ.05 ಸೋಮವಾರದಂದು ಬೆಳಗ್ಗೆ ಗಂಟೆ 9.30ಕ್ಕೆ ನಡೆಯಲಿದೆ. ರಥ ನಿರ್ಮಾಣದ ಬಗ್ಗೆ ದೇವಸ್ಥಾನದಲ್ಲಿ ಊರ ಭಕ್ತಾದಿಗಳ ಪೂರ್ವಭಾವಿ ಸಭೆಯು ಇತ್ತೀಚೆಗೆ ನಡೆದಿತ್ತು. ಮಾ.23 ರಂದು ಪನ್ನೆಯಲ್ಲಿ ರಥ ನಿರ್ಮಾಣಕ್ಕೆ ದಾನವಾಗಿ ನೀಡಿದ...
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರು ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಂಜುಶ್ರೀ ಕೆದಂಬಾಡಿ ೫೯೧ ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.ಈಕೆ ಉಬರಡ್ಕ ಮಿತ್ತೂರು ಗ್ರಾಮದ ಕೆದಂಬಾಡಿ ತೀರ್ಥರಾಮ ಹಾಗೂ ಸಂಧ್ಯಾ ದಂಪತಿಗಳ ಪುತ್ರಿ.
ಕೊಡಿಯಾಲ ಗ್ರಾಮದ ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಮಾ.16ರಿಂದ ಮಾ.17 ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಇಂದು (ಮಾ.05ರಂದು) ಜರುಗಿತು. ಈ ಸಂದರ್ಭ ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ದಾರ ಸಮಿತಿ...
ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಇಂದು ಸಂಜೆ ಗಂಟೆ 5-00ರಿಂದ ಶತರುದ್ರಾಭಿಷೇಕ, ರಾತ್ರಿ 9-30ಕ್ಕೆ ಮಹಾಪೂಜೆ ನಡೆಯಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಸಂಜೆ ಗಂಟೆ 6-30ರಿಂದ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ತಡಂಬೈಲ್, ಸುರತ್ಕಲ್ ಇವರಿಂದ ಗಿರಿಜಾ ಕಲ್ಯಾಣ-ಕುಮಾರವಿಜಯ ತಾಳಮದ್ದಳೆ ನಡೆಯಲಿದೆ. ರಾತ್ರಿ ಗಂಟೆ 10-00ರಿಂದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ,...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಇಂದು ಮಹಾಶಿವರಾತ್ರಿ ಉತ್ಸವ ಜರುಗಲಿದ್ದು, ಸಂಜೆ ಗಂಟೆ 6.00ರಿಂದ ಶತರುದ್ರಾಭಿಷೇಕ, ರಂಗಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 7.00ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ "ಶಿವಪಂಚಾಕ್ಷರಿ ಮಹಿಮೆ" ಯಕ್ಷಗಾನ ಬಯಲಾಟ ನಡೆಯಲಿದೆ.
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13ರಂದು ಮೊದಲ್ಗೊಂಡು ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೈಭವೋಪೇತವಾಗಿ ಜರುಗಿತು. ಜಾತ್ರೋತ್ಸವದ ಪ್ರಯುಕ್ತ ಫೆ.13ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ, ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ ನಡೆಯಿತು. ರಾತ್ರಿ ಧ್ವಜಾರೋಹಣದ ಮೂಲಕ ವಿದ್ಯುಕ್ತವಾಗಿ...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗುತ್ತಿದ್ದು, ಇಂದು (ಫೆ.17) ಬೆಳಿಗ್ಗೆ ಕವಾಟೋದ್ಘಾಟನೆ, ತೈಲಾಭ್ಯಂಜನ, ಉಷಾಃಪೂಜೆ, ಆರಾಟುಬಲಿ ನಂತರ ಅವಭೃತ ಸ್ನಾನ ನಡೆಯಿತು. ಬಳಿಕ ಶ್ರೀದೇವರ ದರ್ಶನ ಬಲಿ, ರಾಜಾಂಗಣ ಪ್ರಸಾದ, ಬಟ್ಟಲುಕಾಣಿಕೆ, ಧ್ವಜ ಅವರೋಹಣ ,ಸಂಪ್ರೋಕ್ಷಣೆ, ಮಹಾಪೂಜೆ, ಮಂತ್ರಾಕ್ಷತೆ,...
Loading posts...
All posts loaded
No more posts