- Sunday
- November 24th, 2024
ಭಾರತದ ಇಸ್ರೋ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನಲೆಯಲ್ಲಿ ಮೇದಿನಡ್ಕ ತಮಿಳು ಕಾಲೋನಿಯಲ್ಲಿ ಸಂಭ್ರಮಾಚರಣೆ ಹಾಗೂ ಮನೆ ಮನೆ ಸಿಹಿ ವಿತರಿಸಿ ಪರಸ್ಪರ ಸಂತೋಷವನ್ನು ಹಂಚಿಕೊಂಡರು.
ಚಂದ್ರನ ಅಂಗಳಕ್ಕೆ ಭಾರತ ‘ವಿಕ್ರಮ’ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು,ಈ ಮೂಲಕ ಭಾರತ ವಿಶ್ವಗುರು ಎನಿಸಿಕೊಂಡಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಸಂಜೆ 6.04 ನಿಮಿಷಕ್ಕೆ ಗುರಿ ತಲುಪಿದ್ದು, ಇಸ್ರೋ ವಿಜ್ಞಾನಿಗಳ ಶ್ರಮಕ್ಕೆ ಅಭೂತಪೂರ್ವ ಗೆಲುವು ಕಂಡಿತು. ವಿಜ್ಞಾನಿಗಳ ಶ್ರಮ ಹಾಗೂ ದೇಶದಾದ್ಯಂತ ಕೋಟಿ ಕೋಟಿ ಭಾರತೀಯರ ಪ್ರಾರ್ಥನೆ, ಹಾರೈಕೆಯೊಂದಿಗೆ ಭಾರತ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಇಸ್ರೋ...
ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು . ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ ನೆರವೇರಿಸಿದರು. ಧ್ವಜಾರೋಹಣ ಗೈದು ಮಾತನಾಡಿ ದೇಶದ ಯೋಧರ ತ್ಯಾಗ ಬಲಿದಾನಗಳ ಬಗ್ಗೆ ಹೇಳಿದರು. ಪಂಚಾಯತ್ ಅಧ್ಯಕ್ಷೆಯಾಗಿ ಕೆಲಸ ನಿರ್ವಹಿಸಲು ಸಹಕರಿಸಿದ ಅಧಿಕಾರಿ ವರ್ಗ ಹಾಗೂ ಜನತೆಗೆ ಧನ್ಯವಾದ ಸಮರ್ಪಿಸಿದರು. ಈ ಸಂದರ್ಭದಲ್ಲಿ ಗ್ರಾಮ...
ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...
ಪುತ್ತೂರು ಹಾಗೂ ಕಡಬ ತಾಲೂಕಿನ ಉಪ್ಪಿನಂಗಡಿ, ರಾಮಕುಂಜ,ಆಲಂಕಾರು, ಕಾಣಿಯೂರು ಮತ್ತು ಸವಣೂರು ಗ್ರಾಮ ಪಂಚಾಯತಿಗಳಲ್ಲಿ ಜಲಜೀವನ್ ಮಿಷನ್ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡ ಬೀದಿನಾಟಕ ಯಶಸ್ವಿಯಾಗಿ ನಡೆಯಿತು. ಎಲ್ಲಾ ಪಂಚಾಯತಿಗಳಲ್ಲೂ ಬಹಳಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು , ಪ್ರಯಾಣಿಕರು, ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಬೀದಿನಾಟಕ ವೀಕ್ಷಿಸಿ ಶ್ಲಾಘನೆ ವ್ಯಕ್ತಪಡಿಸಿದರಲ್ಲದೇ ಮಾಹಿತಿ...
ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಜ್ಞಾನ ಮೇಳವು ವಿಜ್ಞಾನ ವಸ್ತು ಮಾದರಿ ರಚನೆಗಳೊಂದಿಗೆ ಜೂ.25ರಂದು ನಡೆಯಿತು. ಈ ಸಂದರ್ಭದಲ್ಲಿ ಐವರ್ನಾಡು,ಜಾಲ್ಸೂರು, ಶಾಂತಿನಗರ, ಪಯಸ್ವಿನಿ ಶಾಲೆಯ ವಿಜ್ಞಾನ ಶಿಕ್ಷಕರಾದ ನಾರಾಯಣ ಸರ್,ಪೂರ್ಣಿಮಾ ಮೇಡಂ,ಪವಿತ್ರ ಮೇಡಂ, ಜಯಪ್ರಕಾಶ್ ಸರ್ ನಿರ್ಣಾಯಕರಾಗಿ ಸಹಕರಿಸಿದರು. ಈ ಸಂದರ್ಭದಲ್ಲಿ ವಿಜ್ಞಾನ ಮಾದರಿಗಳು ಜೀವನದಲ್ಲಿ ಪ್ರಗತಿಯನ್ನು ಕೊಡುತ್ತದೆ ಮತ್ತು ಪರಿಸರದಲ್ಲಿನ ಬದಲಾವಣೆಗೆ ವಿಜ್ಞಾನ ಉಪಕರಣಗಳು ಸಹಕಾರ...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ರಾಮನ್ ಇಕೋ ಕ್ಲಬ್ ನ ವಾರ್ಷಿಕ ಚಟುವಟಿಕೆಗಳಿಗೆ ಜೂನ್ 28ರಂದು ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ವಿಜ್ಞಾನ ಶಿಕ್ಷಕಿ ಶ್ರೀಮತಿ ಸಾವಿತ್ರಿ ಕೆ ರವರು ಭಾಗವಹಿಸಿ 'ಇರುವುದೊಂದೇ ಭೂಮಿ' ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನೀಡಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾಬೋಧಿನೀ ವಿದ್ಯಾಸಂಸ್ಥೆ...
ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಲೆಮಜಲು ಇವುಗಳ ಜಂಟಿ ಆಶ್ರಯದಲ್ಲಿ ಬೀಜ ಬಿತ್ತನೆ ಕಾರ್ಯ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ವರ್ಗ, ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿಯ ಸದಸ್ಯರುಗಳು, ಉಭಯ ಶಾಲೆಗಳ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಶಾಲಾ ಮಕ್ಕಳು, ಊರ...
Loading posts...
All posts loaded
No more posts