- Monday
- September 14th, 2026
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ವಿಶ್ವ ಸಾಕ್ಷರತಾ ದಿನಾಚರಣೆಯನ್ನು ಐನೆಕಿದು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ ಸತೀಶ್ ಕೂಜುಗೋಡು ವಹಿಸಿ, ವಿಶ್ವ ಸಾಕ್ಷರತಾ ದಿನದ ಮಹತ್ವ ಹಾಗೂ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ದೊರೆಯಬೇಕಾದ ಅಗತ್ಯತೆಯ ಕುರಿತು ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾಜಿ R.C. ಲಯನ್ ಪ್ರೊ. ರಂಗಯ್ಯ ಶೆಟ್ಟಿಗಾರ್...
ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಇತ್ತೀಚೆಗೆ ಕಾಲೇಜು ಷಷ್ಟ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ನಿಜವಾದ ಹೆಮ್ಮೆ. ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಪರಿಶ್ರಮ,...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೆಪಿಎಸ್ ಗಾಂಧಿನಗರದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ ಫುಟ್ ಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಬಾಲಕರ ತಂಡವು ವಿನ್ನರ್ಸ್ ಪ್ರಶಸ್ತಿಯನ್ನು ಗಳಿಸಿದೆ. ಮಹಮ್ಮದ್ ರೌಶನ್ 8ನೇ, ಮಹಮದ್ ಮಸೂದ್ 7ನೇ, ಮಹಮ್ಮದ್ ಷನಾಫ್ 7ನೇ, ಮಹಮ್ಮದ್ ಫರ್ಹಾನ್ 8ನೇ, ಮಹಮ್ಮದ್ ರಿಹಾನ್ 8ನೇ,...
ಸುಬ್ರಹ್ಮಣ್ಯ, ಸೆ. 12: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ), ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕುಮಾರಸ್ವಾಮಿ ಪಿ.ಯು. ಕಾಲೇಜು, ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ–2026 ಅನ್ನು ಸೆಪ್ಟೆಂಬರ್ 12ರಂದು ಕುಮಾರಸ್ವಾಮಿ ಪಿ.ಯು. ಕಾಲೇಜು, ಸುಬ್ರಹ್ಮಣ್ಯದಲ್ಲಿ ಆಯೋಜಿಸಲಾಯಿತು. ಕಡಬ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ...
ಸುಳ್ಯ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ರೋಟರಿ ಪ್ರಾಥಮಿಕ ಶಾಲೆ ರಥಬೀದಿಯಲ್ಲಿ ಆಯೋಜಿಸಲಾಗಿತ್ತು.ಉದ್ಘಾಟನಾ ಸಮಾರಂಭದಲ್ಲಿ ರೋಟರಿ ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಪಿ.ಪಿ ಎಂ.ಪಿ.ಹೆಚ್.ಎಫ್ ಪ್ರಭಾಕರನ್ ನಾಯರ್ ರವರು ದೀಪ ಬೆಳಗಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಸುಳ್ಯ ಇದರ ಅಧ್ಯಕ್ಷೆ ರೊ. ಮೇಜರ್ ಡೋನರ್ ಲತಾ ಮಧುಸೂದನ್ ಇವರು ವಹಿಸಿದ್ದರು.ವೇದಿಕೆಯಲ್ಲಿ...
ಶಾಲಾ ಶಿಕ್ಷಣ ಇಲಾಖೆ(ಪ.ಪೂ) ಮತ್ತು ರೋಟರಿ ಪಿಯು ಕಾಲೇಜು ಮಿತ್ತಡ್ಕ ಸುಳ್ಯ ಇದರ ಸಹಯೋಗದಲ್ಲಿ ಸುಳ್ಯದ ರೋಟರಿ ಶಾಲೆಯಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ.ಪೂ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ಹುಡುಗರ ತಂಡ ಈ ಬಾರಿಯೂ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಜಿಲ್ಲಾ ಮಟ್ಟಕ್ಕೆ...
ಸುಳ್ಯ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸುಳ್ಯದ ಕೆ.ಪಿ.ಎಸ್. ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕರ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಅಕ್ಷರ್ ಅವರು ಟ್ರೆಡಿಷನಲ್ ಸಿಂಗಲ್ಸ್, ಆರ್ಟಿಸ್ಟಿಕ್ ಡಬಲ್ಸ್ ಹಾಗೂ...
ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ 14 ವರ್ಷ ವಯೋಮಾನದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅತ್ಯುತ್ತಮ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕುಸುಮ ಸಾರಂಗ ರಂಗಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸಾಕೋಶ ಇವುಗಳ ಸಹಭಾಗಿತ್ವದಲ್ಲಿ ಸೆ.11ರಂದು ಪ್ರಸಕ್ತ ಸಾಲಿನ ನಾಟಕ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು. ಖ್ಯಾತ ರಂಗ ನಿರ್ದೇಶಕ ಹಾಗೂ ತರಬೇತುದಾರರಾದ ಮಿಥುನ್ ಕುಮಾರ್ ಸೋನ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿ ಜೀವನದಲ್ಲಿ ರಂಗಭೂಮಿ ಹಾಗೂ ನಾಟಕದ ಮಹತ್ವ,...
ಶಿಕ್ಷಕ ವೃತ್ತಿ ಎಂದರೆ ಗೌರವದ ಕೆಲಸ. ಒಂದು ವರ್ಷದ ತರಬೇತಿ ಪಡೆದು ಶಿಕ್ಷಕಿಯರಾಗಿ ವೃತ್ತಿ ಬಂದು ರೂಪಿಸಿಕೊಳ್ಳಲು ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಕಳೆದ 9 ವರ್ಷಗಳಿಂದ ತರಬೇತಿ ನೀಡುತ್ತಿದೆ. ಇಲ್ಲಿ ತರಬೇತು ಪಡೆದ ನೂರಾರು ಮಂದಿ ಶಿಕ್ಷಕಿಯರಾಗಿ ವೃತ್ತಿ ಬದುಕು ರೂಪಿಸಿಕೊಡಿದ್ದಾರೆ. ಪ್ರತಿ ವರ್ಷವೂ ಶೇ. 100 ಫಲಿತಾಂಶ ಪಡೆಯುವುದರೊಂದಿಗೆ ಶೇ....
Loading posts...
All posts loaded
No more posts
