ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; “ದುಶ್ಚಟಮುಕ್ತ ಬದುಕಿನಿಂದ ಯುವಜನಾಂಗದ ಅಭ್ಯುದಯ” : ವಿಮಲಾ ರಂಗಯ್ಯ ಅಭಿಮತ

ಸುಬ್ರಹ್ಮಣ್ಯ : “ದುಶ್ಚಟಮುಕ್ತ ಬದುಕಿನಿಂದ ಯುವ ಜನಾಂಗ ಅಭ್ಯುದಯವಾಗಲು ಸಾಧ್ಯವಿದೆ. ವಿದ್ಯಾರ್ಜನೆಯ ಅವಧಿಯಲ್ಲಿಯೇ ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಜಾಗೃತರಾಗಬೇಕು. ಇದು ಓದು ಬರಹಗಳನ್ನು ಸೇರಿದಂತೆ ನಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡುತ್ತದೆ ಎಂಬ ಪರಿಜ್ಞಾನ ಎಳವೆಯಲ್ಲಿಯೇ ಮೂಡುವಂತೆ ಮಾಡುವುದು ಅತ್ಯವಶ್ಯಕ. ಧೂಮಪಾನ, ಮದ್ಯಪಾನ ಇತ್ಯಾದಿಗಳು ನಮ್ಮ ಬದುಕಿನ ಅತೀ ದೊಡ್ಡ ಶತ್ರುಗಳು ಎಂಬ ಅರಿವು ನಮ್ಮ...

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್‌ಮೆಂಟ್

ಜೂ. 27ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ನಡೆಸಿದiWave ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಲಿಖಿತ್ ಕೆ.ಆರ್. ಮತ್ತು ಮೌಸೀನಾ ತಸ್ಲೀಮ್ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 4.8 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ...
Ad Widget

ಮಂಡೆಕೋಲು: ಸುಸಜ್ಜಿತ ಶಾಲಾ ಗ್ರಂಥಾಲಯ ಉದ್ಘಾಟನೆ

"ನಿರಂತರ ಪುಸ್ತಕ ಓದುವ ಹವ್ಯಾಸ ನಮ್ಮ ಬದುಕನ್ನೇ ಬದಲಾಯಿಸುತ್ತದೆ. ಪುಸ್ತಕ ಓದು ಮಕ್ಕಳ ಜ್ಞಾನ ವರ್ಧಿಸುತ್ತದೆ" ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೀಕೃತಗೊಂಡ ಸುಸಜ್ಜಿತ ಗ್ರಂಥಾಲಯವನ್ನು ಉದ್ಘಾಟಿಸಿ, ಮಾತನಾಡಿದರು.‌‌ಸಭೆಯ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಕಣೆಮರಡ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...

ವಿದ್ಯಾಮಾತಾದಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ತರಬೇತಿ ಉದ್ಘಾಟಿಸಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ. | ಡ್ರಗ್ಸ್ ಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ, ಪುತ್ತೂರು ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು, ತರಬೇತಿಯನ್ನು ಪುತ್ತೂರು ಉಪವಿಭಾಗ ಡಿ.ವೈ.ಎಸ್.ಪಿ. ಪ್ರಮೋದ್ ಕುಮಾರ್ ಬಿ. ಯವರು ಉದ್ಘಾಟಿಸಿದರು.ಕರಾವಳಿ ಭಾಗದಲ್ಲಿ ಸರಕಾರಿ ಹುದ್ದೆಗಳಿಗೆ ಪ್ರಯತ್ನಪಡುವವರ ಸಂಖ್ಯೆ ಕಮ್ಮಿ ಇದ್ದು, ವಿದ್ಯಾಮಾತಾ ಅಕಾಡೆಮಿ ಇಂತಹ ಸಂದರ್ಭದಲ್ಲಿ ಜಾಗೃತಿಯನ್ನು ಮೂಡಿಸಿಕೊಂಡು ತರಬೇತಿ ನೀಡುವುದರ ಮೂಲಕ ಸರಕಾರಿ...

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಶಾಲೆಯಲ್ಲಿ ಪುಸ್ತಕ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮವು ಜೂ.27ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಜಯಾನಂದ ಪಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸಿಐ 15 ವಲಯ ಅಧ್ಯಕ್ಷ ಜೆಎಫ್ಎಸ್ ಸಂತೋಷ್ ಶೆಟ್ಟಿ ಆಗಮಿಸಿದ್ದರು.ಅತಿಥಿಗಳಾಗಿ ಜೇಸಿಐ  ವಲಯ- 15 ನೇತ್ರಾವತಿ (ರಿಜನ್ -ಬಿ)...

ಸುಳ್ಯ : ಎನ್.ಎಂ.ಪಿ.ಯು.ಸಿಯಲ್ಲಿ ನಶಾ ಮುಕ್ತ ಭಾರತ ಅಭಿಯಾನ ; ಪ್ರತಿಜ್ಞಾ ವಿಧಿ ಸ್ವೀಕಾರ

ಸುಳ್ಯ, ಜೂ.26 : ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಸುಳ್ಯದ ಎನ್.ಎಂ.ಪಿ.ಯು.ಸಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಚಾರ್ಯ ಸಾವಿತ್ರಿ.ಕೆ.ವಿ, ಕ್ಷೇಮಾಧಿಕಾರಿ ರೇಷ್ಮಾ.ಎಂ.ಎಂ, ಉಪನ್ಯಾಸಕ ಹಾಗೂ ಬೋಧಕೇತರ ವೃಂದದ ಸದಸ್ಯರು ಮತ್ತು ವಿದ್ಯಾರ್ಥಿಗಳು ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧರಾಗುವ ಪ್ರತಿಜ್ಞೆ ಸ್ವೀಕರಿಸಿದರು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ.ಪಿ.ಬಿ ಅವರು ಪ್ರತಿಜ್ಞಾ...

ಸುಳ್ಯ ಎನ್.ಎಂ ಪಿ.ಯು.ಸಿ.ಯಲ್ಲಿ ಟ್ಯಾಲೆಂಟ್ಸ್ ಡೇ ಆಚರಣೆ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮ ಕಾಲೇಜು ಆಡಿಟೋರಿಯಂನಲ್ಲಿ ನಡೆಯಿತು. ಪ್ರಾಚಾರ್ಯರಾದ ಮಿಥಾಲಿ.ಪಿ ರೈ ಅವರು ಮಾರ್ಗದರ್ಶನ ನೀಡಿದ್ದರು.  ವಿದ್ಯಾರ್ಥಿಗಳು ಹಾಡು, ನೃತ್ಯ ವಿವಿಧ ವಿನೋದಾವಳಿಗಳನ್ನು ಸಾದರಪಡಿಸಿದರು. ಉಪನ್ಯಾಸಕ ವಿನಯ್ ನಿಡ್ಯಮಲೆ, ವಿದ್ಯಾರ್ಥಿ ಮಹಮ್ಮದ್ ಆಶಿಕ್ ತಂಡದವರು ಕಾರ್ಯಕ್ರಮ ನಡೆಸಿಕೊಟ್ಟರು.  ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಡಿಂಪಲ್...

ಗುತ್ತಿಗಾರಿನಲ್ಲಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಕಾರ್ಯಕ್ರಮ

ಗುತ್ತಿಗಾರು : ಜೇಸಿಐ ಪಂಜ ಪಂಚಶ್ರೀ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ, ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಸಹಯೋಗದೊಂದಿಗೆ ಶಾಲಾ ವಿದ್ಯಾರ್ಥಿಗಳಿಗಾಗಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಕಾರ್ಯಕ್ರಮವು ಗುರುವಾರ ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷರಾದ ಜೆಎಫ್‌ಎಂ...

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ವಾಚನ ದಿನಾಚರಣೆ

ಸುಳ್ಯ : ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ವಾಚನ ದಿನಾಚರಣೆಯನ್ನು ಸಂಸ್ಥೆಯ ಸಾಹಿತ್ಯ ಸಮಿತಿಯ ವತಿಯಿಂದ ಜೂನ್ 24, 2026 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರು ಹಾಗೂ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ. ಚಿದಾನಂದ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು...

ಪೆರಾಜೆ: ಜ್ಯೋತಿ ಪ್ರೌಢಶಾಲೆಯಲ್ಲಿ ಡ್ರಗ್ಸ್ ಜಾಗೃತಿ ಕಾರ್ಯಕ್ರಮ

ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪಾಜೆ ಆರಕ್ಷಕ ಠಾಣೆಯ ಎ ಎಸ್ ಐ ಬೋಪಯ್ಯ ಅವರು ಮಾತನಾಡಿ ಎನ್ ಡಿ ಪಿ ಎಸ್ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಮಾದಕ ವಸ್ತುಗಳ ಸೇವನದ, ಮಾರಾಟ ಮತ್ತು ಸಾಗಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ವಿದ್ಯಾರ್ಥಗಳು ಈ ದುಶ್ಚಟಕ್ಕೆ ಬಲಿಯಾಗಿ...
Loading posts...

All posts loaded

No more posts

error: Content is protected !!