Ad Widget

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆಂಕಪ್ಪಗೌಡ

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹಾಗು ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್ ರವರನ್ನು ಕೊಡಗು ಜಿಲ್ಲಾ ಉಸ್ತುವಾರಿ ಮಂಜುಳಾ ರಾಜ್, ಉಸ್ತುವಾರಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕಾರ್ಡಿನೇಟರುಗಳಾದ ಕಾವು ಹೇಮನಾಥ ಶೆಟ್ಟಿ, ಎಡ್ವಿನ್ ರಿಚರ್ಡ್, ಕೆ.ಪಿ ರಾಜು, ಪ್ರದೀಪ ರೈ ಪಾಂಬಾರು, ಜಿ ಬಿ ಜಾನ್ ಬೆಂಗಳೂರು...

ಜಾನುವಾರು ಸಾಗಾಟಗಾರರ ಮೇಲೆ ದಾಳಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ ಬೆನ್ನಲ್ಲೇ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಮತ್ತು ದಿಢೀರ್ ವರ್ಗಾವಣೆ – ಎಸ್.ಡಿ.ಪಿ.ಐ ಖಂಡನೆ

ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ದಾಳಿ ನಡೆಸುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ದ.ಕ ಜಿಲ್ಲಾಧಿಕಾರಿಯವರು ಆದೇಶ ನೀಡಿದ ಕಾರಣಕ್ಕಾಗಿ ಸಂಘಪರಿವಾರದ ಕಾರ್ಯಕರ್ತರು ಸಾಮಾಜಿಕ ಜಾಲತಾಣದ ಮೂಲಕ ಜಿಲ್ಲಾಧಿಕಾರಿಯವರನ್ನೇ ಕೊಲೆ ಮಾಡುವಂತಹ ಘೋರ ಸಂದೇಶ ರವಾನಿಸಿರುವುದು ಮತ್ತು ಜಿಲ್ಲಾಧಿಕಾರಿಯವರು ಹೇಳಿಕೆ ನೀಡಿದ ಬೆನ್ನಲ್ಲೇ ಅವರನ್ನು ದಿಢೀರ್ ಆಗಿ ಸರ್ಕಾರ ವರ್ಗಾವಣೆ ಮಾಡಿರುವುದು ಆಘಾತಕಾರಿ ನಡೆ...
Ad Widget

ಜು. 30 ರಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ,ಸನ್ಮಾನ, ಉಪನ್ಯಾಸ ಕಾರ್ಯಕ್ರಮ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಉಪನ್ಯಾಸ ಜು.30 ರಂದು ಪೂ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ನಡೆಯಲಿದೆ.ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್ . ಭವಾನಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವರಾಮ ಕಾರಂತ ಬಾಲವನ...

ದ.ಕ.ಮಿತಿಮೀರಿದ ಅಕ್ರಮ ಜಾನುವಾರು ಸಾಗಾಟ ಮತ್ತು ಹಲ್ಲೆ ಪ್ರಕರಣ – ಸೂಕ್ತ ಕಾನೂನು ಕ್ರಮ ಕೈಗೊಂಡು ಕಡಿವಾಣ ಹಾಕಲು ಡಿಸಿ ಆದೇಶ

ಅಕ್ರಮ ಜಾನುವಾರು ಸಾಗಾಟ, ಹತ್ಯೆ ಮತ್ತು ಸಾಗಿಸುವ ವಾಹನ,ಜನರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಖಡಕ್ ಸೂಚನೆ ರವಾನಿಸಿದ್ದಾರೆ. ಜು. 27 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಕ್ರಮ ಜಾನುವಾರು...

ತೊಡಿಕಾನ ದೇವಸ್ಥಾನದಲ್ಲಿ ಮಿಂಚುಬಂಧಕ ಆಳವಡಿಕೆ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಮಿಂಚುಬಂಧಕ ಅಳವಡಿಕೆ ಜು. 27 ರಂದು ನಡೆಯಿತು. ಇದನ್ನು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕೊಡುಗೆಯಾಗಿ ನೀಡಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ಯು.ಎಮ್ ಕಿಶೋರ್...

ಸುಳ್ಯ: ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಚಾಲನೆ

ಗ್ರಾಮ ವಿಕಾಸ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ. ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ನಡೆದ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಇದರ ಉದ್ಘಾಟನೆಯನ್ನು ಶಾಸಕರಾದ ಎಸ್. ಅಂಗಾರ ನೆರೆವೇರಿಸಿದರು. ಕೈಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ , ಪುತ್ತೂರು...

ರಾಜ್ಯದಲ್ಲಿ ಒಂದು ಲಕ್ಷ ದಾಟಿದ ಕೊರೊನಾ ಸೊಂಕಿತರು – 37,685 ಜನ ಗುಣಮುಖರಾಗಿ ಡಿಸ್ಚಾರ್ಜ್ – ಸಾವನ್ನಪ್ಪಿದವರ ಸಂಖ್ಯೆ 1,953 ಕ್ಕೆ ಏರಿಕೆ

ಕರ್ನಾಟಕದಲ್ಲಿಂದು 5,324 ಹೊಸ ಕೊರೊನಾಪಾಸಿಟಿವ್ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು 1 ಲಕ್ಷ ಗಡಿ ದಾಟಿದೆ ದಕ್ಷಿಣ ಕನ್ನಡದಲ್ಲಿ ಇಂದು 119 ಪಾಸಿಟಿವ್ ದಾಖಲಾಗಿದೆ.ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳು 61,819 ಇದ್ದು ಇದುವರೆಗೂ 37,685 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಚಿಕಿತ್ಸೆ ಫಲಿಸದೇ ಇಂದು 75 ಜನ ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 1,953...

ತಾ.ಪಂ.ಉಪಾಧ್ಯಕ್ಷೆಯಾಗಿ ಪುಷ್ಪಾ ಮೇದಪ್ಪ ಅವಿರೋಧ ಆಯ್ಕೆ

ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿದ್ದ ಶ್ರೀಮತಿ ಶುಭದಾ ರೈಯವರು ಕಡಬ ತಾಲೂಕು ಪಂಚಾಯತ್ ವ್ಯಾಪ್ತಿಗೆ ಸೇರಿರುವುದರಿಂದ ತೆರವಾಗಿರುವ ಇಲ್ಲಿಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಉಪಾಧ್ಯಕ್ಷ ತೆಗೆ ಅರಂತೋಡು ಕ್ಷೇತ್ರದ ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ನೂತನ ತಾ.ಪಂ.‌ಉಪಾಧ್ಯಕ್ಷೆಯಾಗಿ ಪುಷ್ಪಾ ಮೇದಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್...

ಕೃಷ್ಣಪ್ರಸಾದ್ ದೋಳ ನೋಟರಿಯಾಗಿ ಆಯ್ಕೆ

ಸುಳ್ಯದಲ್ಲಿ ನ್ಯಾಯವಾದಿಯಾಗಿರುವ ಕೃಷ್ಣ ಪ್ರಸಾದ್ ದೋಳ ದ.ಕ. ಜಿಲ್ಲಾ ನೋಟರಿಯಾಗಿ ಕೇಂದ್ರ ಸರಕಾರದಿಂದ ನೇಮಕಗೊಂಡಿದ್ದಾರೆ.ಇವರು ನೆಲ್ಲೂರು ಕೆಮ್ರಾಜೆ ಗ್ರಾಮದ ದೋಳ ಮನೆಯ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಗೌಡ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ತಂಗಮ್ಮ ಡಿ.ಬಿ.ಯವರ ಪುತ್ರ. ಇವರ ಪತ್ನಿ ಶ್ರೀಮತಿ ಸೌಮ್ಯ ಪಿ.ಎನ್. ಸುಳ್ಯದಲ್ಲಿ ಉಪವಲಯಾ ರಣ್ಯಾಧಿಕಾರಿಯಾಗಿದ್ದಾರೆ. ಕೃಷ್ಣ ಪ್ರಸಾದರು ಪದವಿ ಪೂರ್ವ...

*ಸಂಡೇ ಲಾಕ್ ಡೌನ್ ಸದುಪಯೋಗ – ಸುಳ್ಯ ವಿಖಾಯ ತಂಡದಿಂದ ಬಸ್ ತಂಗುದಾಣಗಳ ಸ್ವಚ್ಛತೆ*

ಭಾನುವಾರದ ಲಾಕ್  ಡೌನ್  ಜಾರಿಯಲ್ಲಿದ್ದು ಸುಳ್ಯ ವಿಖಾಯ ತಂಡವು ಸಂಪಾಜೆ ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಹದಿಮೂರು ಪ್ರಯಾಣಿಕ ಬಸ್ ತಂಗುದಾಣ ಹಾಗೂ ಪರಿಸರ ಶುಚಿಗೊಳಿಸಿ,ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಿ ಭಾನುವಾರದ ಲಾಕ್ ಡೌನ್ ಸಮಯವನ್ನು ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ. ಸಂಪಾಜೆ ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಅಧ್ಯಕ್ಷರಾದ ಜಿ, ಕೆ,ಹಮೀದ್...
Loading posts...

All posts loaded

No more posts

error: Content is protected !!