ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಮಾಧ್ಯಮಕ್ಕೆ ಅವಕಾಶ ನಿರಾಕರಣೆ ; ಸಭೆಯಲ್ಲಿ ಗೊಂದಲ, ಸದಸ್ಯರ ಆಕ್ರೋಶ..!

ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಮಾಧ್ಯಮಕ್ಕೆ ಚಿತ್ರೀಕರಣ ಹಾಗೂ ವರದಿಗಾರಿಕೆಗೆ ಅವಕಾಶ ನಿರಾಕರಿಸಿದ ಘಟನೆ ಸೆಪ್ಟೆಂಬರ್ 20ರಂದು ನಡೆದಿದೆ. ಸಂಘದ ಮಹಾಸಭೆಯ ವರದಿ ಸಂಗ್ರಹ ಹಾಗೂ ಚಿತ್ರೀಕರಣಕ್ಕಾಗಿ ತೆರಳಿದ್ದ ಮಾಧ್ಯಮ ಪ್ರತಿನಿಧಿಯನ್ನು ಸಂಘದ ಆಡಳಿತ ಮಂಡಳಿಯು ತಡೆದು ಚಿತ್ರೀಕರಣಕ್ಕೆ ತಡೆಯೊಡ್ಡಲಾಗಿದೆ ಎಂದು ತಿಳಿದುಬಂದಿದ್ದು, ಆಡಳಿತ ಮಂಡಳಿಯ ಈ ಕ್ರಮಕ್ಕೆ...

ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕರಾಗಿ ಪ್ರಸನ್ನ ದರ್ಬೆ ನೇಮಕ

ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕರಾಗಿ ಇಂಜಿನಿಯರ್ ಪ್ರಸನ್ನ ದರ್ಬೆ ನೇಮಕವಾಗಿದ್ದಾರೆ. ವಿವೇಕಾನಂದ ಶಿಶು ಮಂದಿರದ ಶ್ರೀಕೃಷ್ಣಲೋಕ ಸಮಿತಿಯ ಗೌರವಾಧ್ಯಕ್ಷರಾದ ಇವರು 2018ರಲ್ಲಿ ಶ್ರವಣಬೆಳಗೊಳದಲ್ಲಿ ನಡೆದ ಗೊಮ್ಮಟೇಶ್ವರ ಮಹಾಮಸ್ತಕಾಭಿಷೇಕದಲ್ಲಿ ಕೆ.ಆರ್.ಡಿ.ಸಿ.ಎಲ್ ನಿಂದ ತಾಂತ್ರಿಕ ಅಧಿಕಾರಿಯಾಗಿ ನಿಯುಕ್ತರಾಗಿ ಹತ್ತು ದಿನಗಳ ಕಾಲ ಕಾರ್ಯನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಅದೇ ರೀತಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ...
Ad Widget

ಹರಿಹರ ಪಳ್ಳತ್ತಡ್ಕದ ಸಂದೀಪ್ ಕೇವಳ ಇವರಿಗೆ ಅಂತರ್‌ಜಿಲ್ಲಾ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ

ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆ.20ರಂದು ನಡೆದ ಡಿ.ಕೆ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಯೋಜಿಸಿದ್ದ ದಕ್ಷಿಣ ಕನ್ನಡ, ಕೊಡಗು ಹಾಗೂ ಉಡುಪಿ ಜಿಲ್ಲೆಗಳ ಅಂತರ್‌ಜಿಲ್ಲಾ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಹರಿಹರ ಪಳ್ಳತ್ತಡ್ಕ ಗ್ರಾಮದ ಸಂದೀಪ್ ಕೇವಳ ಇವರು 30+ ವಯೋಮಾನದ ಗುಂಡೆಸೆತ ಸ್ಪರ್ಧೆಯಲ್ಲಿ ವಿಜೇತರಾಗಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇವರು ದಿ.ದಶರಥ ಗೌಡ ಕೇವಳ ಹಾಗೂ...

ಕಸ್ತೂರಿರಂಗನ್ ವರದಿ ಕುರಿತು ಶಾಸಕ ಹರೀಶ್ ಪೂಂಜ ಅವರ ಭೇಟಿ ಮಾಡಿದ ಕಿಶೋರ್ ಶಿರಾಡಿ

ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದ ನಿಯೋಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಭೇಟಿ ಮಾಡಿ ಕಸ್ತೂರಿರಂಗನ್ ವರದಿ, 7ನೇ ಕರಡು ಅಧಿಸೂಚನೆ ಹಾಗೂ ಪರಿಸರ ಸೂಕ್ಷ್ಮ ವಲಯ (ESA) ಘೋಷಣೆಯಿಂದ ಮಲೆನಾಡು ಭಾಗದ ಗ್ರಾಮಸ್ಥರು ಮತ್ತು ರೈತರಿಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಚರ್ಚಿ ನಡೆಸಿದರು....

ತುಳು ಭಾಷೆಗೆ ಮಾನ್ಯತೆ ಅವಿಸ್ಮರಣೀಯ ಕ್ಷಣ – ರಾಜ್ಯ ಸರಕಾರಕ್ಕೆ ದೆಹಲಿ ತುಳುಸಿರಿಯ ಅಭಿನಂದನೆ

ಪಂಚ ದ್ರಾವಿಡ ಭಾಷೆಯಾದ ತುಳುವನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಬೇಕೆಂಬ ತುಳುವರ ಒಕ್ಕೊರಲ ಬೇಡಿಕೆಯನ್ನು ಕರ್ನಾಟಕ ಸರಕಾರವು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ತೀರ್ಮಾನಿಸಿರುವುದು ಸಂತಸದ ಸಂಗತಿ. ಕಳೆದ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದ ಎಲ್ಲ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಪಂಚ ದ್ರಾವಿಡ ಭಾಷೆಯಾದ ತುಳುವನ್ನು...

ನಾಲ್ಕೂರು ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪತ್ರ ಅಭಿಯಾನ ; 300ಕ್ಕೂ ಅಧಿಕ ವೈಯಕ್ತಿಕ ಆಕ್ಷೇಪಣಾ ಪತ್ರ ಸಲ್ಲಿಕೆ

ನಾಲ್ಕೂರು ಗ್ರಾಮಸ್ಥರಿಂದ ಸೆ.18ರಂದು ಕಸ್ತೂರಿ ರಂಗನ್ ವರದಿಯ ವಿರುದ್ಧ ಪತ್ರ ಅಭಿಯಾನ ನಡೆದಿದ್ದು, ಒಂದೇ ದಿನದಲ್ಲಿ ಸುಮಾರು 300ಕ್ಕೂ ಹೆಚ್ಚು ವೈಯಕ್ತಿಕ ಆಕ್ಷೇಪಣೆ ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ. ನಾಲ್ಕೂರು ಗ್ರಾಮದ ನಡುಗಲ್ಲು ಅಂಚೆ ಕಛೇರಿಯ ಸಮೀಪ ಸಮಾನಮನಸ್ಕರು ಆಯೋಜಿಸಿದ್ದ ಈ ಆಕ್ಷೇಪಣಾ ಪತ್ರ ಸಲ್ಲಿಕೆ ಅಭಿಯಾನದಲ್ಲಿ ಗ್ರಾಮಸ್ಥರು ಸುಮಾರು 300ಕ್ಕೂ ಅಧಿಕ ರಿಜಿಸ್ಟರ್ ಪೋಸ್ಟ್ ಅನ್ನು...

ಅಮರ ಸುದ್ದಿ ವಿಶೇಷ ವರದಿ – ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ತಲುಪಿದ್ದ ಸರ್ಕಾರಿ ಪ್ರೌಢಶಾಲೆ ಇಂದು ಮತ್ತೆ ಚೇತರಿಕೆಯ ಹಾದಿಯಲ್ಲಿ..! ; ಹಂತ-ಹಂತವಾಗಿ ಹೆಚ್ಚುತ್ತಿದೆ ವಿದ್ಯಾರ್ಥಿಗಳ ಸಂಖ್ಯೆ..!! – ಉಲ್ಲಾಸ್ ಕಜ್ಜೋಡಿ

ಸುಮಾರು ಮೂರು ವರ್ಷಗಳ ಹಿಂದೆ ಅಂದರೆ 2023ರಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ತಲುಪಿದ್ದ ಸರ್ಕಾರಿ ಪ್ರೌಢಶಾಲೆಯೊಂದು ಇದೀಗ ಮೂರು ವರ್ಷಗಳ ನಂತರ ತನ್ನ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ನಿಧಾನವಾಗಿ ಏರಿಕೆಯನ್ನು ಕಾಣುತ್ತಾ ಹಂತಹಂತವಾಗಿ ಪ್ರಗತಿಯತ್ತ ಸಾಗುತ್ತಿರುವ ಸಕಾರಾತ್ಮಕ ಬದಲಾವಣೆಗೆ ಸಾಕ್ಷಿಯಾಗಿರುವ ಘಟನೆ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕದಲ್ಲಿ ನಡೆದಿದೆ. ಸುಮಾರು 44 ವರ್ಷಗಳ ಹಿಂದೆ ಅಂದರೆ...

ತುಳು ಭಾಷೆಗೆ 2ನೇ ಹೆಚ್ಚುವರಿ ಅಧಿಕೃತ ಭಾಷಾ ಸ್ಥಾನಮಾನ: ಬಹುದಿನಗಳ ಬೇಡಿಕೆ ಈಡೇರಿಸಿರುವುದು ಸ್ವಾಗತಾರ್ಹ – ಭವಾನಿಶಂಕರ್ ಕಲ್ಮಡ್ಕ

ಸುಳ್ಯ: ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಆಡಳಿತಾತ್ಮಕ ಭಾಷೆಯಾಗಿ ಘೋಷಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಅಭಿನಂದನೆ ಸಲ್ಲಿಸಿದ್ದಾರೆ. ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕು ಎಂಬ ತುಳುನಾಡಿಗರ ಬಹುದಿನಗಳ ಬೇಡಿಕೆಯನ್ನು ಕಾಂಗ್ರೆಸ್ ಸರ್ಕಾರ...

“ಸುಳ್ಯ ಪಟ್ಟಣ ಪಂಚಾಯತ್‌ನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಮನವಿ ಮಾಡಲಾಗುವುದು” | ದ.ಕ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ | ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

“ಜಿಲ್ಲೆಯಲ್ಲಿ ಸೌಹಾರ್ದತೆ ಹಾಗೂ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಜನರು ಆಗಮಿಸುವಂತಹ ಪವಿತ್ರ ಕ್ಷೇತ್ರಗಳಿದ್ದು, ಜಿಲ್ಲೆಗೆ ಹೊರಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತಾಗಬೇಕು. ಜಿಲ್ಲೆಯ ಪ್ರಮುಖ ಕೇಂದ್ರಗಳು ಜನಾಕರ್ಷಣೆಯ ತಾಣಗಳಾಗಿ ಅಭಿವೃದ್ಧಿಯಾಗಬೇಕು” ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ ಸೆ.16ರಂದು...

ಮಾಸ್ ಅಧ್ಯಕ್ಷ ಸೀತಾರಾಮ ರೈ ಸವಣೂರು ರವರಿಂದ ಉಸ್ತುವಾರಿ ಸಚಿವ ಯು.ಟಿ. ಖಾದರ್ ಭೇಟಿ – ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರಿಗೆ ಸ್ಪೆಷಲ್ ಪ್ಯಾಕೇಜ್ ಘೋಷಿಸುವಂತೆ ಮನವಿ

ಮಂಗಳೂರು ಅಡಿಕೆ ಸಹಕಾರಿ ಸಂಘ(ಮಾಸ್) ಅಧ್ಯಕ್ಷರಾದ ಸವಣೂರು ಸೀತಾರಾಮ ರೈ ಯವರು ಕರ್ನಾಟಕ ಅರೋಗ್ಯ, ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯು.ಟಿ. ಖಾದರ್ ರವರನ್ನು ಭೇಟಿಯಾಗಿ 18ನೇ ತಾರೀಕಿಗೆ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರ ಸಹಾಯಕ್ಕೆ ಸರ್ಕಾರ ವಿಶೇಷ ಆರ್ಥಿಕ...
Loading posts...

All posts loaded

No more posts

error: Content is protected !!