- Saturday
- September 12th, 2026
ಮಂಗಳೂರು : “ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂಥಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ ತಿಂಗಳ ನಾಲ್ಕು ದಿನಗಳ ಕಾಲ ಸರ್ಪಸಂಸ್ಕಾರ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 03 ಮತ್ತು 04 ರಂದು ಹಾಗೂ ದಶಮಿ-ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ 06 ಮತ್ತು...
ಮಂಗಳೂರು : "ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ. ಇದರೊಂದಿಗೆ, ದಕ್ಷಿಣ ಕನ್ನಡ ಜನರ ಬಹು ವರ್ಷಗಳ ಬಹುದೊಡ್ಡ ರೈಲ್ವೆ ಬೇಡಿಕೆ ಈಡೇರುತ್ತಿದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್...
ಸುಬ್ರಹ್ಮಣ್ಯ, ಆಗಸ್ಟ್ 20 : ಕಸ್ತೂರಿರಂಗನ್ ಅಂತಿಮ ವರದಿಯ ಕರಡು ಪ್ರತಿಗೆ ಒಕ್ಕೊರಲಿನಿಂದ ಆಕ್ಷೇಪಣೆ ಸಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳ ಬಾಧಿತ ಪ್ರದೇಶಗಳ ರೈತರು ಹಾಗೂ ಗ್ರಾಮಸ್ಥರ ಜಿಲ್ಲಾ ಮಟ್ಟದ ಸಭೆ ಗುರುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಬೆಳ್ತಂಗಡಿ, ಕಡಬ,...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್‌ಐಎ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದು, ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಉಮ್ಮರ್ ಫಾರೂಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿತ್ತು. ಆತನ ಬಂಧನಕ್ಕೆ...
ಸುಳ್ಯ: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಸುಳ್ಯದ ಕರಿಂಬಿ ಮನೆತನದ ಡಾ. ಮಹೇಶ್ ಕೆ.ಕೆ. ಅವರಿಗೆ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ವತಿಯಿಂದ ₹25 ಲಕ್ಷ ಮೊತ್ತದ ಸಂಶೋಧನಾ ಅನುದಾನ ಮಂಜೂರಾಗಿದೆ. ಎಐಸಿಟಿಇಯ ರಿಸರ್ಚ್ ಪ್ರೊಮೋಷನ್ ಸ್ಕೀಮ್ (RPS) ಅಡಿಯಲ್ಲಿ ಡಾ....
ದೆಹಲಿಯಲ್ಲಿ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ಬೆಂಬಲ ಸೂಚಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಲೋಕಸಭಾ ಸದಸ್ಯೆ ಶ್ರೀಮತಿ ಪ್ರಿಯಾಂಕಾ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರನ್ನು ಅಕ್ರಮವಾಗಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಸಡೆಸಿ ಬಳಿಕ...
ಬೆಂಗಳೂರು, ಜು.17: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕಿಯರಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ಕೊಡುಗೆಯನ್ನು ಘೋಷಿಸಿದೆ. ಇನ್ನು ಮುಂದೆ 90 ದಿನಗಳ ವೇತನಸಹಿತ ಮಾತೃತ್ವ ರಜೆ ನೀಡಲಾಗುವುದು. ಮಾತೃತ್ವ ರಜೆಯ ಅವಧಿಯಲ್ಲಿ ಬೋಧನಾ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ, ಆ ಅವಧಿಗೆ ಬದಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು...
ವರದಿ : ಉಲ್ಲಾಸ್ ಕಜ್ಜೋಡಿಕರ್ನಾಟಕ ರಾಜ್ಯದಾದ್ಯಂತ ಇದೀಗ ಮತದಾರರ ಪಟ್ಟಿಯ ಪರಿಷ್ಕರಣೆಯ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು “ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ(ಎಸ್.ಐ.ಆರ್)” ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಪ್ರತಿಯೊಬ್ಬ ಮತದಾರರ ಹೆಸರು, ವಯಸ್ಸು, ವಿಳಾಸ ಹಾಗೂ ಕುಟುಂಬದ ವಿವರಗಳನ್ನು ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುವ ಕಡ್ಡಾಯ ಪ್ರಕ್ರಿಯೆ ಇದಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು(ಬಿ.ಎಲ್.ಒ) ಮನೆ-ಮನೆಗೆ ತೆರಳಿ ಎನ್ಯೂಮರೇಷನ್...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಮಹಿಳೆಯರಿಬ್ಬರು ಹೋರಿ ದಾಳಿಯಿಂದ ಗಂಭೀರ ಗಾಯಗೊಂಡ ಘಟನೆ ಜು.07ರಂದು ಸಂಭವಿಸಿದ್ದು, ಈ ಘಟನೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಅಭಾವದ ಸಮಸ್ಯೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದ ಲಲಿತ್ ಎಂಬುವವರು ಆದಿ...
Loading posts...
All posts loaded
No more posts
