Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಜಾತ್ರಾ ಮಹೋತ್ಸವ – ನಾಳೆ(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ವೈಭವದ ಚಂಪಾಷಷ್ಠಿ ಬ್ರಹ್ಮರಥೋತ್ಸವ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.16 ರಿಂದ ಶ್ರೀ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ನಾಳೆ(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಬ್ರಹ್ಮರಥೋತ್ಸವ ಜರುಗಲಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವ ಕ್ಷೇತ್ರದ ವಿಶೇಷತೆಗಳು

ಸುಬ್ರಹ್ಮಣ್ಯ : ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16 ರಿಂದ ಆರಂಭವಾಗಿ ಡಿಸೆಂಬರ್ 02ರ ತನಕ ನಡೆಯಲಿರುವುದು. ನ.26 ಬುಧವಾರದಂದು ಪ್ರಾತಃಕಾಲ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರು ಚಂಪಾಷಷ್ಠಿ ಮಹಾ ರಥೋತ್ಸವದಲ್ಲಿ ಬ್ರಹ್ಮರಥ ಏರಿ ನೆರೆದ ಲಕ್ಷಾಂತರ ಭಕ್ತರನ್ನು ಹರಸುವರು.ಕ್ಷೇತ್ರದ ವಿಶೇಷತೆಗಳು - 1) ಮೂಲ ಮೃತ್ತಿಕೆ ಪ್ರಸಾದ : ವರ್ಷಕ್ಕೊಮ್ಮೆ...
Ad Widget

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ.ಸಮಿತಿಯ ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ, ಡಾ|ಚಂದ್ರಶೇಖರ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ,...

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ನ.16) ಕೊಪ್ಪರಿಗೆ ಏರುವುದರೊಂದಿಗೆ ಚಂಪಾ ಷಷ್ಠಿ ಮಹೋತ್ಸವಕ್ಕೆ ಚಾಲನೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವಕ್ಕೆ ನಾಳೆ(ನ.16) ಚಾಲನೆ ದೊರೆಯಲಿದ್ದು, ನಾಳೆ ಬೆಳಿಗ್ಗೆ 8:10ರ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ರಾಮ-ಲಕ್ಷ್ಮಣ ಕೊಪ್ಪರಿಗೆ ಏರುವುದರೊಂದಿಗೆ ಚಾಲನೆ ದೊರೆಯಲಿದೆ.

“ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ” : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

“ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ ನಾಯಕರ ಸುಳ್ಳು ವೋಟ್ ಚೋರಿ ಆರೋಪಕ್ಕೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ...

ಕುಕ್ಕೆ ಸುಬ್ರಹ್ಮಣ್ಯ : ನ.14ರಿಂದ ಡಿ.02ರ ತನಕ ಸರ್ಪಸಂಸ್ಕಾರ ಸೇವೆ ಇಲ್ಲ – ಜಾತ್ರಾ ದಿನ ಸೇವೆ ವ್ಯತ್ಯಯ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಡಿ.02ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.02ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ, ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ...

ಸುಬ್ರಹ್ಮಣ್ಯ : ನ.16 ರಿಂದ ಡಿ.02 ರವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಚಂಪಾಷಷ್ಠಿ ಜಾತ್ರಾ ಮಹೋತ್ಸವ” – ನ.16 ರಂದು ಕೊಪ್ಪರಿಗೆ ಏರುವುದು – ನ.19 ರಂದು ಲಕ್ಷದೀಪೋತ್ಸವ – ನ.26 ರಂದು ಪ್ರಾತಃಕಾಲ “ಚಂಪಾಷಷ್ಠಿ ಮಹಾರಥೋತ್ಸವ”

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ “ಚಂಪಾಷಷ್ಠಿ ಮಹೋತ್ಸವ”ವು ಸಮೀಪಿಸುತ್ತಿದ್ದು, ನವೆಂಬರ್ 16 ಆದಿತ್ಯವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.17 ಸೋಮವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.18 ಮಂಗಳವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.19 ಬುಧವಾರದಂದು...

ಬೆಳ್ಳಾರೆ ಪಂಚಾಯತ್ ಕಟ್ಟಡಕ್ಕೆ ಅನುದಾನ – ಹಮೀದ್ ಹೆಚ್.ಎಂ ಮನವಿ

ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಒಂದು ಕೋಟಿ ಅನುದಾನ ಬಿಡುಗಡೆಗೊಳಿಸಬೇಕೆಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆಯವರಿಗೆ ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್.ಎಂ.ಹಮೀದ್ ಬೆಳ್ಳಾರೆಯವರು ಮನವಿ ಸಲ್ಲಿಸಿದ್ದಾರೆ.

ನಾಳೆ(ನ.05) ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಪೂರ್ವಭಾವಿ ಸಭೆ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಪೂರ್ವಭಾವಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ(ನ.05) ಶ್ರೀ ದೇವಳದ ಸಭಾಂಗಣದಲ್ಲಿ ನಡೆಯಲಿದೆ.ಸಭೆಯಲ್ಲಿ ದಕ್ಷಿಣ ಕನ್ನಡ  ಜಿಲ್ಲೆಯ ಜಿಲ್ಲಾಧಿಕಾರಿಗಳು,...

“ರಾಜ್ಯದಲ್ಲಿ ಸಿ.ಎಂ ಕುರ್ಚಿಗಾಗಿ ಪೈಪೋಟಿಯಿಂದ ಜನ ಪರದಾಡುತ್ತಿದ್ದಾರೆ…”

ಕುಕ್ಕೆಯಲ್ಲಿ ಬಿ.ವೈ.ವಿಜಯೇಂದ್ರ ಟೀಕೆ

ಸುಬ್ರಹ್ಮಣ್ಯ ನ.02 : “ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ಆಡಳಿತವು ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದ್ದು, ಜನ ಪರದಾಡುತ್ತಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ ಮಾಧ್ಯಮದವರೊಂದಿಗೆ  ಮಾತನಾಡಿದರು.“ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿಗಳ ಕುರ್ಚಿಗಾಗಿ ಪೈಪೋಟಿ ಬಹಿರಂಗವಾಗಿ ನಡೆಯುತ್ತಿದೆ. ಕೇವಲ ಡಿ.ಕೆ.ಶಿವಕುಮಾರ್ ಅವರಷ್ಟೇ ಅಲ್ಲ, ನನಗೆ ಗೊತ್ತಿರುವ ಪ್ರಕಾರ...
Loading posts...

All posts loaded

No more posts

error: Content is protected !!