ಸುಳ್ಯ : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟನೆ ಹಾಗೂ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

“ವಿದ್ಯಾರ್ಥಿಗಳು ದುಶ್ಚಟಗಳಿಗೆ ಆಕರ್ಷಣೆಗೊಂಡು ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಾಜದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ, ಯುವತಿಯರನ್ನು ಲೈಂಗಿಕ ಶೋಷಣೆಗೆ, ಭಿಕ್ಷುಟನೆಗೆ, ಮನೆ ಕೆಲಸಗಳಿಗೆ ಬಳಸಿ ಕೊಳ್ಳುವ ಜಾಲ ಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಶ್ರೀಮತಿ ಟಿ.ದಮಯಂತಿ ಸೋಮಯ್ಯ ಹೇಳಿದರು. ಅವರು...

ಸುಳ್ಯ ಎನ್.ಎಂ.ಪಿಯುಸಿಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

“ಕಾರ್ಗಿಲ್ ಹೋರಾಟದಲ್ಲಿ ಭಾರತೀಯ ಸೈನ್ಯ ತೋರಿದ ದಿಟ್ಟ ಹೋರಾಟದ ಫಲವಾಗಿ ನಾವು ಜಯವನ್ನು ಸಾಧಿಸುವಂತಾಯಿತು. ದುರ್ಗಮ ಪರ್ವತ ಶ್ರೇಣಿಗಳಲ್ಲಿ ನಮ್ಮ ಸೈನಿಕರು ತೋರಿದ ಶೌರ್ಯ, ತ್ಯಾಗ ಬಲಿದಾನಗಳ ಕಾರಣದಿಂದಾಗಿ ನಮ್ಮ ದೇಶಕ್ಕೆ ಜಯವಾಯಿತು” ಎಂದು ಸುಳ್ಯ ಶ್ರೀ ಶಾರದಾ ಪಿಯು ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ ಹೇಳಿದರು. ಅವರು ಸುಳ್ಯ ನೆಹರು ಮೆಮೋರಿಯಲ್...
Ad Widget

ಸುಳ್ಯ : ಎನ್.ಎಂ ಪಿಯುಸಿ ಯಲ್ಲಿ ನೂತನ ದೃಕ್ ಶ್ರವಣೋಪಕರಣ ಕೊಠಡಿ ಉದ್ಘಾಟನೆ

ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆಧುನಿಕ ತಾಂತ್ರಿಕತೆ, ವಿನ್ಯಾಸಗಳನ್ನು ಒಳಗೊಂಡ ದೃಕ್ ಶ್ರವಣೋಪಕರಣ ಕೊಠಡಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಎ.ಓ.ಎಲ್.ಇ(ರಿ.) ಉಪಾಧ್ಯಕ್ಷರಾದ ಶೋಭಾ ಚಿದಾನಂದ ಉದ್ಘಾಟಿಸಿದರು. ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ ಸಿ ಅವರು ದೀಪ ಪ್ರಜ್ವಲನಗೈದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯರಾದ ಡಾ....

ಸರಕಾರಿ ಪ್ರೌಢಶಾಲೆ ಎಣ್ಮೂರಿನಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕ್ಷಯ ಮುಕ್ತ ಭಾರತ ಮತ್ತು ವ್ಯಸನ ಮುಕ್ತ ಭಾರತ ಎಂಬ ಧ್ಯೇಯ ವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ನಡೆದ ಮಾಹಿತಿ ಕಾರ್ಯಾಗಾರವನ್ನು ಶಾಲಾ ಮುಖ್ಯ ಶಿಕ್ಷಕರಾದ ಟೈಟಸ್ ವರ್ಗಿಸ್ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...

ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜಿನಲ್ಲಿ ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಬಗ್ಗೆ ಅರಿವು ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾಕೋಶ ಇದರ ಸಹಯೋಗದೊಂದಿಗೆ ಆ್ಯಂಟಿ ಡ್ರಗ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಜಂಟಿಯಾಗಿ ದಿನಾಂಕ ಜು.24ರಂದು ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಅರಿವು ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ...

ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ; ನಾಳೆ(ಜು.23) ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...

ಸಾಂದೀಪನಿ ವಿದ್ಯಾಸಂಸ್ಥೆಯ ಶಿಕ್ಷಕ ಮುರಳಿಕೃಷ್ಣ ಅವರಿಗೆ ರಾಜ್ಯ ಪ್ರಶಸ್ತಿ

ಪುತ್ತೂರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಲಾಂಗ್ ಸರ್ವಿಸ್ ಮೆಡಲ್ ಪ್ರಶಸ್ತಿಗೆ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು(ರಿ.), ನರಿಮೊಗರು ಇಲ್ಲಿನ ಸಹಶಿಕ್ಷಕ ಹಾಗೂ ಸ್ಕೌಟ್ಸ್ ಮಾಸ್ಟರ್ ಮುರಳಿಕೃಷ್ಣ.ಪಿ ಅವರು ಆಯ್ಕೆಯಾಗಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಯಲ್ಲಿ ಸುದೀರ್ಘ ಅವಧಿಯ ಪ್ರಾಮಾಣಿಕ ಸೇವೆ, ನಾಯಕತ್ವ ಗುಣಗಳು ಹಾಗೂ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ಉರಗಳ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಗದತಂತ್ರ ವಿಭಾಗದಿಂದ ವಿಶ್ವ ಉರಗಳ ದಿನಾಚರಣೆಯ ಪ್ರಯುಕ್ತ ಜು.16ರಂದು ವಿವಿಧ ರೀತಿಯ ಉರಗಗಳ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ.ವಿ ಅವರು ದೀಪ ಬೆಳಗಿಸುವುದ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ...

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಕೋಟೆ ಪೌಂಡೇಶನ್ ವತಿಯಿಂದ ವಿಜ್ಞಾನ ಪ್ರಯೋಗಾಲಯಕ್ಕೆ ಮೂರು ಲಕ್ಷಕ್ಕೂ ಅಧಿಕ ಮೊತ್ತದ ಉಪಕರಣಗಳ ಕೊಡುಗೆ

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಜು.15 ಬುಧವಾರದಂದು ಕೋಟೆ ಪೌಂಡೇಶನ್ ವತಿಯಿಂದ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೊತ್ತದ ಉಪಕರಣಗಳನ್ನು ರಮೇಶ್ ಸಿ.ಕೆ ಡೈರೆಕ್ಟರ್ ಆಫ್ ಪ್ರೊಜೆಕ್ಟ್ ಆಪರೇಷನ್ ಕೋಟೆ ಪೌಂಡೇಶನ್ ವಿಜ್ಞಾನ ಪ್ರಯೋಗಾಲಯಕ್ಕೆ ಹಸ್ತಾಂತರಿಸಿದರು. ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನ ಏರ್ಪಡಿಸಲಾಯಿತು. ನಂತರ ಮಾತನಾಡಿದ ಅವರು "ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳ...

ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ; ನಾಳೆ(ಜು.18) ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 18 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
Loading posts...

All posts loaded

No more posts

error: Content is protected !!