- Wednesday
- March 11th, 2026
ಬೆಂಗಳೂರು ಆದಿತ್ಯ ಯೋಗ ಸೆಂಟರ್ ನವರು ನಡೆಸಿದ ಬಿ.ಕೆ.ಎಸ್ ಐಯ್ಯಂಗಾರ್ ಸ್ಮರಣಾರ್ಥ ರಾಷ್ಟ್ರ ಮಟ್ಟದ 9ನೇ ವರ್ಷದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಐವರ್ನಾಡಿನ ಮಿಥುನ ಅಶ್ವಥ್ ಜಬಳೆ ಅವರು 6ನೇ ಸ್ಥಾನ ಪಡೆದಿದ್ದಾರೆ.ಇವರು 32 ರಿಂದ 45 ವರ್ಷ ವಿಭಾಗದಲ್ಲಿ ಜು.12 ರಂದು ನಡೆದ ಆನ್ ಲೈನ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಸಿಬ್ಬಂದಿಯೊಬ್ಬರನ್ನು ಕರ್ತವ್ಯಲೋಪದ ಆಧಾರದಲ್ಲಿ ಮೂರು ತಿಂಗಳುಗಳ ಹಿಂದೆ ಅಮಾನತಿನಲ್ಲಿರಿಸಿದ್ದು, ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿರುವುದನ್ನು ಪ್ರಶ್ನಿಸಿ ಇಂದು ಆ.29 ರಂದು ಗ್ರಾಮಸ್ಥರು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.“ಅಮಾನತುಗೊಂಡ ಸಿಬ್ಬಂದಿಯ ಮೇಲೆ ಗ್ರಾಮ ಪಂಚಾಯತ್ ನ ಸ್ವತ್ತು ಕಳವು ಆರೋಪವಿದ್ದು, ಅದಲ್ಲದೇ ಗ್ರಾಮ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಪದವಿಪೂರ್ವ ಕಾಲೇಜು ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ಆ.29 ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.31 ರಂದು ಹೊಸ್ತಾರೋಗಣೆ(ನವಾನ್ನ ಬೋಜನ) ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ದರುಶನ ಮತ್ತು ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಆದಿತ್ಯವಾರ ಪ್ರಾತ:ಕಾಲ 5.15ಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ ನೆರವೇರಲಿದೆ. ನಂತರ...
ಸುಬ್ರಹ್ಮಣ್ಯ : "ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು" ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಮದ್ಯಾಹ್ನ 11:00 ಗಂಟೆಗೆ ಮಹಾಪೂಜೆ : “ಆದಿತ್ಯವಾರ ಶ್ರೀ ದೇವರ...
ಏನೆಕಲ್ಲು ಗ್ರಾಮದ ದೇವರಹಳ್ಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 29ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆಗಸ್ಟ್ 27ರಂದು ಶ್ರೀಹರಿ ಭಜನಾ ಮಂದಿರದಲ್ಲಿ ನಡೆಯಿತು. ಆಗಸ್ಟ್ 27ರಂದು ಬೆಳಿಗ್ಗೆ ದೇವರ ವಿಗ್ರಹ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ, ಗಣಪತಿ ಹೋಮ, ಪೂರ್ಣಾವತಿ, ಮಕ್ಕಳಿಗೆ ವಿದ್ಯಾರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಅಪರಾಹ್ನ...
ಎಸ್.ಎಸ್.ಸಿ.ಜಿ.ಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿರುವ ಅರಂತೋಡು ಗ್ರಾಮದ ಆಡ್ತಲೆಯ ಕು.ಸುಶ್ಮಿತಾ.ಎಂ.ಎ ಇವರ ವೃತ್ತಿ ಜೀವನವು ಯಶಸ್ವಿಯಾಗಲು ವಿಘ್ನ ವಿನಾಯಕ ಆಶೀರ್ವಾದ ನೀಡುವಂತೆ ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ವತಿಯಿಂದ ಆರಾಧಿಸಲ್ಪಡುವ ಶ್ರೀ ಗಣಪತಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಕೋಶಾಧಿಕಾರಿ...
ಅಜ್ಜಾವರ: ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಬೆಳಿಗ್ಗೆ ಮಹಾಮಂಗಳಾರತಿ, ವಿಶೇಷ ಪೂಜೆಯೊಂದಿಗೆ ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಅಲಂಕಾರ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು, ಈ ಸಂದರ್ಭದಲ್ಲಿ ಊರ ಭಕ್ತಾದಿಗಳು, ದೇವಸ್ಥಾನದ ಆಡಳಿತ ಸಮಿತಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಅರ್ಚಕರಾದ ಯೋಗರಾಜ್ ವೈದಿಕ...
ಪಂಜ ಪರಿಸರದ ಸಾರ್ವಜನಿಕ ಗಣೇಶೋತ್ಸವ ಅಂಗವಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.27 ರಂದು ಶ್ರೀ ಗಣಪತಿ ವಿಗ್ರಹ ಪ್ರತಿಷ್ಠಾಪನೆಗೊಂಡಿತು. ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದು ಆ.29 ರಂದು ಭವ್ಯ ಶೋಭಾಯಾತ್ರೆಯೊಂದಿಗೆ ಗಣಪತಿ ವಿಸರ್ಜನೆ ನಡೆಯಲಿದೆ.
ದೇಶದಲ್ಲಿ ಮತ ಕಳ್ಳತನದ ಬಗ್ಗೆ ಜನಜಾಗೃತಿ ಮೂಡಿಸುತ್ತಿರುವ ಮತ್ತು ಬಿಹಾರದಲ್ಲಿ ಮತದಾರ ಅಧಿಕಾರ ಯಾತ್ರೆಗೆ ಬೆಂಬಲವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಆ. 25ರಂದು ಸಂಜೆ ಬ್ರಹತ್ ಪಂಜಿನ ಮೆರವಣಿಗೆ ನಡೆಯಿತು.ಮಂಗಳೂರಿನ ನವಭಾರತ್ ಸರ್ಕಲ್ ನಿಂದ ಮಹಾನಗರ ಪಾಲಿಕೆ ಮುಂಭಾಗದವರೆಗೆ ನಡೆದ ಪಂಜಿನ ಮೆರವಣಿಗೆಯನ್ನು ಮಾಜಿ ಸಚಿವ ಬಿ ರಮಾನಾಥ ರೈ, ಲೋಕಸಭಾ...
Loading posts...
All posts loaded
No more posts
