Ad Widget

ಸಂಪಾಜೆ : ಆರೋಗ್ಯ ತಪಾಸಣಾ ಶಿಬಿರ

ಕೆವಿಜಿ ಮೆಡಿಕಲ್ ಕಾಲೇಜು ಸುಳ್ಯ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಅರೋಗ್ಯ ತಪಾಸಣಾ ಶಿಬಿರ ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ರವರು ನೆರವೇರಿಸಿದರು.ವೇದಿಕೆಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಇದರ ವೈಧ್ಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ,...

ಅರಂತೋಡು ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ದತ್ತಿ ನಿಧಿ ವಿತರಣೆ ಹಾಗೂ ಮಾಹಿತಿ ಕಾರ್ಯಗಾರ

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ  ಕೆ.ಅರ್.ಆನಂದ ಕಲ್ಲುಗದ್ದೆ ಇವರ ದತ್ತಿನಿಧಿಯಿಂದ ವಿತರಿಸಲ್ಪಡುವ ನೋಟ್ ಪುಸ್ತಕಗಳ ವಿತರಣೆ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಮಕ್ಕಳ ಸುರಕ್ಷಾ ಕಾರ್ಯಕ್ರಮ, ಆರೋಗ್ಯ ಮಾಹಿತಿ ಹಾಗೂ ಇಲಾಖಾ ಕಾರ್ಯಗಾರ ಜೂನ್ 21ರಂದು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯು.ಡಿ.ಶೇಖರ ಸಭಾ ವೇದಿಕೆಯಲ್ಲಿ...
Ad Widget

ಜುಲೈ 12 ರಂದು ಸುಳ್ಯದಲ್ಲಿ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ – ನಿತ್ಯಾನಂದ ಮುಂಡೋಡಿಯವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಜು. 27 ಆಗಿದ್ದು, ಬೆಂಗಳೂರು ನಿರ್ಮಾತೃರಾಗಿ, ಬೆಂಗಳೂರು ಇಂದು ವಿಶ್ವದ ಜಾಗತಿಕ ಮಟ್ಟದಲ್ಲಿ ಗುರುತಿಸಲು ಕಾರಣರಾದ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆಯನ್ನು ಸುಳ್ಯ ಗೌಡರ ಯುವ ಸೇವಾ ಸಂಘವು ಬೆಂಗಳೂರಿನ ರಾಜ್ಯ ಒಕ್ಕಲಿಗರ ಸಂಘದ ಸಹಕಾರದೊಂದಿಗೆ ಸುಳ್ಯದಲ್ಲಿ ಜುಲಾಯಿ 12 ಶನಿವಾರದಂದು ಶ್ರೀ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ...

ಪ್ರಭಾಕರ ಶಿಶಿಲರು ಬರೆದ ವಿಶಿಷ್ಟ ಕತೆಗಳು ಪುಸ್ತಕದ ವಿಮರ್ಷೆ

ಕಳೆದ ಫೆಬ್ರವರಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಂಡ ಕೃತಿ "ಪ್ರಭಾಕರ ಶಿಶಿಲರ ವಿಶಿಷ್ಟ ಕತೆಗಳು". ಇದು ಶಿಶಿಲರ ಆಯ್ದ ಕತೆಗಳ ಸಂಪಾದಿತ ಕೃತಿ. ಸಂಪಾದಕರು ಶಿಶಿಲ ಅಭಿಮಾನಿ ಕನ್ನಡ ಪ್ರಾಧ್ಯಾಪಕರಾದ ಡಾ ಎಂ.ಪಿ. ಶ್ರೀನಾಥ್. ಇವರು ಪ್ರಸಕ್ತ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು.ರಾವು...

ರೋಟರಿ ಕ್ಲಬ್ ಸುಬ್ರಹ್ಮಣ್ಯ ಪದಗ್ರಹಣ ಸಮಾರಂಭ

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.3 ರಂದು ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.ಪದಗ್ರಹಣ ಅಧಿಕಾರಿಯಾಗಿ ಪಿ.ಡಿ.ಜಿ ಮೇಜರ್ ಡೋನರ್ ಪ್ರಕಾಶ್ ಕಾರಂತ್ ಪದಗ್ರಹಣ ನಡೆಸಿಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಹಾಲಿ ಅಧ್ಯಕ್ಷರಾದ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಎಸ್.ಎಸ್.ಪಿ.ಯು...

ರಾಜೀವ್ ಗಾಂಧಿ ಪಂಚಾಯತ್ ರಾಜ್ ಕಡಬ ತಾಲೂಕು ಅಧ್ಯಕ್ಷರಾಗಿ ಗೋಪಾಲ್ ಎಣ್ಣೆಮಜಲು

ಸುಬ್ರಹ್ಮಣ್ಯ : ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಡಬ ತಾಲೂಕು ಅಧ್ಯಕ್ಷರಾಗಿ ಸುಬ್ರಹ್ಮಣ್ಯದ ಗೋಪಾಲ್ ಎಣ್ಣೆಮಜಲು ನೇಮಕಗೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಶ್ ಇವರುಗಳ ಶಿಫಾರಸಿನಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾದ ಸುಭಾಷ್ ಚಂದ್ರ ಇವರು...

ಉಬರಡ್ಕ : ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿ

ಉಬರಡ್ಕ ಪೇಟೆಯ ಸಮೀಪ ಇಂದು ಮಧ್ಯಾಹ್ನ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು,  ಕೆಲ ಕಾಲ ಸಂಚಾರಕ್ಕೆ ಕೂಡ ಅಡಚಣೆಯಾದ ಘಟನೆ ವರದಿಯಾಗಿದೆ. ಉಬರಡ್ಕ ದೊಡ್ಡತೋಟ ಕುಕ್ಕುಜಡ್ಕ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಪಶುವೈದ್ಯಕೀಯ ಆಸ್ಪತ್ರೆಯ ನಿವೃತ್ತ ಉದ್ಯೋಗಿ ವಿಜಯ ಪಡ್ಡಂಬೈಲ್ ನಿಧನ

ಸುಳ್ಯದ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅಜ್ಜಾವರ ಗ್ರಾಮದ ಪಡ್ಡಂಬೈಲ್ ವಿಜಯ ರವರು ಜು.04 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 63 ವರ್ಷ ವಯಸ್ಸಾಗಿತ್ತು.ಅವರ ಪಾರ್ಥಿವ ಶರೀರವನ್ನು ರಾತ್ರಿಯೇ ಪಡ್ಡಂಬೈಲಿನ ಅವರ ಮನೆಗೆ ತರಲಾಗಿದ್ದು, ಇಂದು ಪೂರ್ವಾಹ್ನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.ಮೃತರು ಪತ್ನಿ, ಪುತ್ರ, ಪುತ್ರಿ, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು...

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಕಿರಣ.ಬಿ ಅವರಿಗೆ ಡಾಕ್ಟರೇಟ್ ಪದವಿ

ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಕಿರಣ.ಬಿ ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ತನ್ನ 25ನೇ ಘಟಿಕೋತ್ಸವದ ಸಂದರ್ಭದಲ್ಲಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಪಿ.ಇ.ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇಲ್ಲಿ ಗಣಿತಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕರಾಗಿರುವ ಡಾ. ಷಣ್ಮುಖ ಎಂ.ಸಿ ಇವರ ಮಾರ್ಗದರ್ಶನದಲ್ಲಿ...

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ನಾಡಿನ ಖ್ಯಾತ ಹಿರಿಯ ಸಾಹಿತಿಗಳಾದ ಸುಬ್ರಾಯ ಚೊಕ್ಕಾಡಿ ಸುಳ್ಯ ಅವರಿಗೆ 85 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ಪ್ರಯುಕ್ತ ಅವರಿಗೆ ಅವರ ಚೊಕ್ಕಾಡಿ ಗೃಹದಲ್ಲಿ ಜನ್ಮದಿನದ ಶುಭಾಶಯಗಳನ್ನು ಕೋರಿ ಪ್ರೀತಿಯಿಂದ ಸಮ್ಮಾನಿಸಿ ಗೌರವಿಸಲಾಯಿತು. ಈ ಸನ್ಮಾನ ಕಾರ್ಯಕ್ರಮವನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರು, ಸಾಹಿತಿ, ಗಾಯಕ ಮತ್ತು...
Loading posts...

All posts loaded

No more posts

error: Content is protected !!